AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Video: ಐಪಿಎಲ್​ಗೆ ಧೋನಿ ವಿದಾಯ? ಭಾವನಾತ್ಮಕ ವಿಡಿಯೋ ಹಂಚಿಕೊಂಡ ಸಿಎಸ್​​ಕೆ..!

MS Dhoni Video: ಸಿಎಸ್​ಕೆ ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಯ ಬಗ್ಗೆ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದು, ಧೋನಿ ಐಪಿಎಲ್​ಗೆ ನಿವೃತ್ತಿ ಹೇಳಿದರಾ ಎಂಬ ಅನುಮಾನ ಕಾಡಲಾರಂಭಿಸಿದೆ.

MS Dhoni Video: ಐಪಿಎಲ್​ಗೆ ಧೋನಿ ವಿದಾಯ? ಭಾವನಾತ್ಮಕ ವಿಡಿಯೋ ಹಂಚಿಕೊಂಡ ಸಿಎಸ್​​ಕೆ..!
ಎಂಎಸ್ ಧೋನಿ
ಪೃಥ್ವಿಶಂಕರ
|

Updated on:Jun 14, 2023 | 8:43 AM

Share

16ನೇ ಆವೃತ್ತಿಯ ಐಪಿಎಲ್ (IPL 2023) ಮುಗಿದು ಎರಡು ವಾರಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (chennai super kings) ಐದನೇ ಬಾರಿಗೆ ಪ್ರಶಸ್ತಿ ಗೆಲ್ಲುವುದರೊಂದಿಗೆ ಮಿಲಿಯನ್ ಡಾಲರ್ ಟೂರ್ನಿಗೆ ತೆರೆ ಬಿದ್ದಿತ್ತು. ಅಲ್ಲದೆ ಈ ಆವೃತ್ತಿ ಎಂಎಸ್ ಧೋನಿ (MS Dhoni) ಅವರ ಕೊನೆಯ ಆವೃತ್ತಿ ಎಂಬ ಮಾತು ಟೂರ್ನಿ ಆರಂಭಕ್ಕೂ ಮುನ್ನವೇ ಕೇಳಿಬರಲಾರಂಭಿಸಿತ್ತು. ಆದರೆ ಈ ಊಹಪೋಹಗಳಿಗೆ ಲೀಗ್​ನ ಕೊನೆಯಲ್ಲಿ ಉತ್ತರಿಸಿದ್ದ ಧೋನಿ, ಅದರ ಬಗ್ಗೆ ಚಿಂತಿಸಲು ನನಗೆ ಇನ್ನೂ 7 ರಿಂದ 8 ತಿಂಗಳ ಕಾಲಾವಕಾಶವಿದೆ ಎಂದಿದ್ದರು. ಆ ಬಳಿಕ ಧೋನಿಯ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಸಿಎಸ್​ಕೆ (CSK) ಸಿಇಒ ಕೂಡ ಧೋನಿ ತಂಡದಲ್ಲಿ ಆಡುವುದಾದರೆ ಅದಕ್ಕೆ ನಮ್ಮ ಸ್ವಾಗತಿವಿದೆ ಎಂದಿದ್ದರು. ಈ ಮೂಲಕ ಧೋನಿ ಸದ್ಯಕ್ಕೆ ನಿವೃತ್ತಿ ನೀಡುವುದಿಲ್ಲ, ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದರು. ಆದರೆ ಇದೀಗ ಸಿಎಸ್​ಕೆ ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಯ ಬಗ್ಗೆ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದು, ಧೋನಿ ಐಪಿಎಲ್​ಗೆ ನಿವೃತ್ತಿ ಹೇಳಿದರಾ ಎಂಬ ಅನುಮಾನ ಕಾಡಲಾರಂಭಿಸಿದೆ.

ಮೂರು ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ಧ ಧೋನಿ ಐಪಿಎಲ್‌ನಲ್ಲಿ ವೈರಾಗ್ಯ ಭಾವದಲ್ಲಿ ಕಾಣಿಸಿಕೊಳ್ಳಲಾರಂಭಿಸಿದ್ದರು. ಮೈದಾನದಲ್ಲಿ ಧೋನಿಯ ಆ ಉತ್ಸಾಹ ಕಳೆಗುಂದಲಾರಂಭಿಸಿತ್ತು. ಇದಕ್ಕೆ ಪೂರಕವಾಗಿ ಧೋನಿ ಕೂಡ ಕೊನೆಯ ಹಂತದಲ್ಲಿ ಬ್ಯಾಟಿಂಗ್​​ ಬರಲಾರಂಭಿಸಿದ್ದರು. ಹೀಗಾಗಿ ಧೋನಿಗೆ 2023ರ ಐಪಿಎಲ್ ಕೊನೆಯ ಐಪಿಎಲ್ ಆಗಿರಬಹುದು ಎಂಬುದು ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿತ್ತು. ಆದರೆ ಅಂತಿಮವಾಗಿ ಧೋನಿ ಐಪಿಎಲ್​ನ ಕೊನೆಯಲ್ಲಿ ಇದಕ್ಕೆಲ್ಲ ಉತ್ತರಿಸಿದ್ದರು.

ಆದರೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್‌ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಹರಿದಾಡಲಾರಂಭಿಸಿವೆ. ಅದರಲ್ಲೂ ಇತ್ತೀಚೆಗೆ ಸಿಎಸ್​ಕೆ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಗೆ ಸಂಬಂಧಿಸಿದ 33 ಸೆಕೆಂಡ್​ಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಇದು ಅಭಿಮಾನಿಗಳನ್ನು ಮತ್ತೆ ಭಾವುಕರನ್ನಾಗಿ ಮಾಡಿದೆ.

ನಿವೃತ್ತಿ ಬಗ್ಗೆ ಧೋನಿ ಹೇಳಿದ್ದೇನು?

ಮೇ 29 ರಂದು ನಡೆದ ರೋಚಕ ಫೈನಲ್‌ನಲ್ಲಿ ಗೆದ್ದ ನಂತರ ನಿವೃತ್ತಿ ಬಗ್ಗೆ ಮಾತನಾಡಿದ್ದ ಧೋನಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆ ಎಂದು ಹೇಳಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 am, Wed, 14 June 23

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್