IPL 2022: CSK ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಐಪಿಎಲ್ನಿಂದ ಔಟ್
Deepak Chahar: ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಯ ಸಂದರ್ಭದಲ್ಲಿ ಅವರು ಅನುಭವಿಸಿದ ಕಾಲಿನ ಗಾಯದಿಂದ ಚೇತರಿಸಿಕೊಳ್ಳಲು ಅವರು ಒಂದು ತಿಂಗಳಿನಿಂದ NCA ನಲ್ಲಿದ್ದರು.
IPL 2022: ಐಪಿಎಲ್ ಸೀಸನ್ 15 ನಲ್ಲಿ ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ಗೆ (CSK) ಇದೀಗ ಮತ್ತೊಂದು ಆಘಾತ ಎದುರಾಗಿದೆ. ಸಿಎಸ್‌ಕೆ ತಂಡದ ದುಬಾರಿ ಬೌಲರ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೌದು, ಈ ಬಾರಿ ಸಿಎಸ್‌ಕೆ ಖರೀದಿಸಿದ್ದ ಪ್ರಮುಖ ವೇಗದ ಅಸ್ತ್ರ ದೀಪಕ್ ಚಹರ್ (Deepak Chahar) ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಸಿಎಸ್‌ಕೆ ತಂಡದಲ್ಲಿ ಈ ಸೀಸನ್ನಲ್ಲಿ ಚಹರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಈ ಹಿಂದೆ ಗಾಯಗೊಂಡಿದ್ದ ದೀಪಕ್ ಚಹರ್ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಸಿಎಸ್‌ಕೆ ತಂಡದ ನಾಲ್ಕು ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಚಹರ್ ಐಪಿಎಲ್ನ ದ್ವಿತಿಯಾರ್ಧದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಲಾಗಿತ್ತು. ಆದರೀಗ ಗಾಯದ ಸಮಸ್ಯೆ ಜೊತೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು 14 ಕೋಟಿ ರೂ.ಗೆ ಸಿಎಸ್‌ಕೆ ಖರೀದಿಸಿತು. ಇದೇ ವೇಳೆ ಗಾಯಗೊಂಡಿದ್ದ ಅವರು ಏಪ್ರಿಲ್ ಎರಡನೇ ವಾರದ ಮೊದಲು ಫಿಟ್ ಆಗಲಿದ್ದಾರೆ ಎಂದು ಫ್ರಾಂಚೈಸ್ ಹೇಳಿತ್ತು. ಆದರೆ ಅವರ ಗಾಯದ ತೀವ್ರತೆಯನ್ನು ಪರಿಗಣಿಸಿ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದು ಸಿಎಸ್‌ಕೆ ತಂಡಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ಪ್ರಸ್ತುತ ಅಂಕಪಟ್ಟಿಯಲ್ಲಿ ಸಿಎಸ್‌ಕೆ ತಂಡವು ಕೆಳಭಾಗದಲ್ಲಿದೆ.
ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಯ ಸಂದರ್ಭದಲ್ಲಿ ಅವರು ಅನುಭವಿಸಿದ ಕಾಲಿನ ಗಾಯದಿಂದ ಚೇತರಿಸಿಕೊಳ್ಳಲು ಅವರು ಒಂದು ತಿಂಗಳಿನಿಂದ NCA ನಲ್ಲಿದ್ದರು. ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ T20I ಸಂದರ್ಭದಲ್ಲಿ ಚಾಹರ್ ಕಾಲಿಗೆ ಗಾಯ ಮಾಡಿಕೊಂಡರು ಮತ್ತು ಅವರ ಸ್ಪೆಲ್ ಅನ್ನು ಪೂರ್ಣಗೊಳಿಸದೆ ಮೈದಾನವನ್ನು ತೊರೆಯಬೇಕಾಯಿತು. ಆ ನಂತರ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಆಡಲು ಸಾಧ್ಯವಾಗಲಿಲ್ಲ. ಇದೀಗ NCA ಯಲ್ಲಿರುವ ದೀಪಕ್ ಚಹರ್ ಬೆನ್ನು ನೋವಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದೇ ಕಾರಣದಿಂದ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ (CSK): ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.
ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?