Chetan Sakariya, IPL 2022 Auction: ಕಷ್ಟದಲ್ಲಿ ಅರಳಿದ ಪ್ರತಿಭೆಗೆ 4.20 ಕೋಟಿ ಕೊಟ್ಟು ಖರೀದಿಸಿದ ಡೆಲ್ಲಿ

Chetan Sakariya Auction Price: ಚೇತನ್ ಸಕರಿಯಾ ಕಳೆದ ಋತುವಿನಲ್ಲಿ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿ ಆರಂಭದಲ್ಲಿಯೂ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಟೀಂ ಇಂಡಿಯಾ ಪರ ಈ ಬೌಲರ್ ಒಂದು ಏಕದಿನ ಪಂದ್ಯವನ್ನಾಡಿದ್ದು ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Chetan Sakariya, IPL 2022 Auction: ಕಷ್ಟದಲ್ಲಿ ಅರಳಿದ ಪ್ರತಿಭೆಗೆ 4.20 ಕೋಟಿ ಕೊಟ್ಟು ಖರೀದಿಸಿದ ಡೆಲ್ಲಿ
ಚೇತನ್ ಸಕರಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Feb 13, 2022 | 3:25 PM

ಎಡಗೈ ವೇಗದ ಬೌಲರ್ ಚೇತನ್ ಸಕರಿಯಾ (Chetan Sakariya) ಈ ಬಾರಿ ಹೊಸ ತಂಡದಲ್ಲಿ ಆಡಲಿದ್ದಾರೆ. ಐಪಿಎಲ್​ 2022 ಮೆಗಾ ಹರಾಜಿನ (IPL-2022 Mega Auction) ಎರಡನೇ ದಿನವಾದ ಭಾನುವಾರ, ಈ ಆಟಗಾರನನ್ನು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಖರೀದಿಸಿದೆ. ಚೇತನ್ ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದು ಈ ಬಾರಿ ಮೂಲ ಬೆಲೆ 50 ಲಕ್ಷ ರೂ.ಗೆ ಹರಾಜಿನಲ್ಲಿದ್ದರು. ದೆಹಲಿ ತನ್ನ ಹಳೆಯ ತಂಡದೊಂದಿಗೆ ಹೋರಾಡಿ 4.2 ಕೋಟಿ ರೂ.ಗೆ ಅವರನ್ನು ಖರೀದಿಸಿದೆ. ಚೇತನ್ ಕಳೆದ ಋತುವಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ 14 ಪಂದ್ಯಗಳನ್ನು ಆಡಿದ್ದರು. ಈ ಪಂದ್ಯಗಳಲ್ಲಿ 52 ಓವರ್ ಬೌಲ್ ಮಾಡಿ 14 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇಲ್ಲಿಂದ ಅವರಿಗೆ ಟೀಂ ಇಂಡಿಯಾದ ಬಾಗಿಲು ಕೂಡ ತೆರೆದಿತ್ತು. ಅವರು ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು.

ಡೆತ್ ಓವರ್‌ ಸ್ಪೆಷಲಿಸ್ಟ್ ಚೇತನ್ ಸಕರಿಯಾ ಕಳೆದ ಋತುವಿನಲ್ಲಿ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿ ಆರಂಭದಲ್ಲಿಯೂ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಟೀಂ ಇಂಡಿಯಾ ಪರ ಈ ಬೌಲರ್ ಒಂದು ಏಕದಿನ ಪಂದ್ಯವನ್ನಾಡಿದ್ದು ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಟಿ20ಯಲ್ಲಿ ಈ ಬೌಲರ್ ಭಾರತ ಪರ ಎರಡು ಪಂದ್ಯಗಳನ್ನು ಆಡಿದ್ದು ಒಂದು ವಿಕೆಟ್ ಪಡೆದಿದ್ದಾರೆ. ಸೌರಾಷ್ಟ್ರದಿಂದ ಬಂದಿರುವ ಈ ಬೌಲರ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 41 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಲಿಸ್ಟ್-ಎಯಲ್ಲಿಯೂ ಅವರು 15 ಪಂದ್ಯಗಳನ್ನು ಆಡಿದ್ದಾರೆ ಮತ್ತು 25 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ಟಿ20 ವೃತ್ತಿಜೀವನವನ್ನು ಗಮನಿಸಿದರೆ, ಅವರು ಇಲ್ಲಿಯವರೆಗೆ ಒಟ್ಟು 38 ಪಂದ್ಯಗಳನ್ನು ಆಡಿದ್ದಾರೆ ಮತ್ತು 31 ವಿಕೆಟ್ಗಳನ್ನು ಪಡೆದಿದ್ದಾರೆ.

ದೆಹಲಿ ಬಳಿ ಮೂರನೇ ಎಡಗೈ ಬೌಲರ್ ಚೇತನ್ ಡೆಲ್ಲಿ ತಂಡ ಸೇರಿದ್ದು ಈಗ ಈ ತಂಡ ಸೇರಿದ 3ನೇ ಎಡಗೈ ಬೌಲರ್ ಆಗಿದ್ದಾರೆ. ದೆಹಲಿ ಈಗಾಗಲೇ ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಎರಡು ಕೋಟಿಗೆ ಖರೀದಿಸಿತ್ತು. ಇದರ ನಂತರ, ಅವರು ಭಾರತಕ್ಕಾಗಿ ಆಡಿರುವ ಮತ್ತು ಸನ್‌ರೈಸರ್ಸ್ ಹೈದರಾಬಾದ್‌ನ ಭಾಗವಾಗಿದ್ದ ಖಲೀಲ್ ಅಹ್ಮದ್ ಅವರನ್ನು ಕೂಡ ಖರೀದಿಸಿದೆ. ಈ ಆಟಗಾರನಿಗೆ ಡೆಲ್ಲಿ 5.25 ಕೋಟಿ ರೂ. ನೀಡಿದೆ. ಸಾಧ್ಯವಾದಷ್ಟು ಮಟ್ಟಿಗೆ, ಚೇತನ್ ದೆಹಲಿಗೆ ಹೊಸ ಚೆಂಡಿನೊಂದಿಗೆ ಬೌಲಿಂಗ್ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ:Shivam Dube, IPL 2022 Auction: 4 ಕೋಟಿ ರೂ. ಗೆ ಚೆನ್ನೈ ಸೇರಿದ ಆರ್​ಸಿಬಿಯ ಮಾಜಿ ಆಲ್​ರೌಂಡರ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ