Chetan Sharma: ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಹುದ್ದೆಗೆ ರಾಜೀನಾಮೆ ನೀಡಿದ ಚೇತನ್ ಶರ್ಮಾ

| Updated By: ಪೃಥ್ವಿಶಂಕರ

Updated on: Feb 17, 2023 | 11:28 AM

Chetan Sharma: ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚೇತನ್ ಶರ್ಮಾ, ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದು, ಅದನ್ನು ಜೈ ಶಾ ಕೂಡ ಅಂಗೀಕರಿಸಿದ್ದಾರೆ.

Chetan Sharma: ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಹುದ್ದೆಗೆ ರಾಜೀನಾಮೆ ನೀಡಿದ ಚೇತನ್ ಶರ್ಮಾ
ಚೇತನ್ ಶರ್ಮಾ
Follow us on

ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್​ ಆಪರೇಷನ್​ನಲ್ಲಿ ಟೀಂ ಇಂಡಿಯಾದ (Team India) ಬಗ್ಗೆ ಕೆಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ (Chetan Sharma) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚೇತನ್ ಶರ್ಮಾ, ತಮ್ಮ ರಾಜೀನಾಮೆಯನ್ನು ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah) ಅವರಿಗೆ ಕಳುಹಿಸಿದ್ದು, ಅದನ್ನು ಜೈ ಶಾ ಕೂಡ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ (T20 World Cup) ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿದ ಬಳಿಕ ಇಡೀ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಲಾಗಿತ್ತು. ಬಳಿಕ ಕಳೆದ ತಿಂಗಳಷ್ಟೇ ಹಿರಿಯ ಆಯ್ಕೆ ಸಮಿತಿಯ ಮುಖ್ಯ ಆಯ್ಕೆಗಾರರಾಗಿ ಚೇತನ್ ಅವರನ್ನು ಮರು ನೇಮಕ ಮಾಡಲಾಗಿತ್ತು.

ಜಯ್ ಶಾ ನಿರ್ಧಾರದ ಮೇಲೆ ಕಣ್ಣು

ವಾಸ್ತವವಾಗಿ ಕಳೆದ 2 ದಿನಗಳಿಂದ, ಚೇತನ್ ಅವರ ವಿವಾದಾತ್ಮಕ ಸಂದರ್ಶನದ ಬಗ್ಗೆ ಎಲ್ಲೆಡೆ ಚರ್ಚೆ ನಡೆಯಲಾರಂಭಿಸಿತ್ತು. ಈ ವಿಷಯದಲ್ಲಿ ಚೇತನ್ ಶರ್ಮಾ ವಿರುದ್ಧ ಜಯ್ ಶಾ ಏನು ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು. ಏಕೆಂದರೆ ರಾಷ್ಟ್ರೀಯ ಆಯ್ಕೆದಾರರು ಮಂಡಳಿಯ ಒಪ್ಪಂದಕ್ಕೆ ಬದ್ಧರಾಗಿರುವವರು ಬಿಸಿಸಿಐ ಅನುಮತಿ ಇಲ್ಲದೆ ಮಾಧ್ಯಮಗಳಲ್ಲಿ ಮಾತನಾಡುವಂತಿಲ್ಲ. ಹೀಗಾಗಿ ಬಿಸಿಸಿಐ ನಿಯಮಗಳನ್ನು ಉಲ್ಲಂಘಿಸಿದ್ದ ಚೇತನ್ ತಲೆದಂಡವಾಗುವುದು ಖಚಿತವೆಂತಲೇ ಮಾತು ಕೇಳಿ ಬರುತ್ತಿತ್ತು.

ಚೇತನ್ ಶರ್ಮಾ ಬಹಿರಂಗ ಪಡಿಸಿದ ಸ್ಫೋಟಕ ಸಂಗತಿ

  1. ಜಸ್ಪ್ರೀತ್ ಬುಮ್ರಾ ಅವರು ಸಂಪೂರ್ಣವಾಗಿ ಆಡಲು ಫಿಟ್ ಆಗಿರಲಿಲ್ಲ. ಆದರೆ ಇಂಜೆಕ್ಷನ್ ಸಹಾಯದಿಂದ ಬಲವಂತವಾಗಿ ಆಡುವಂತೆ ಮಾಡಲಾಯಿತು. ಆದರೆ ಈಗ ಅವರು ಇನ್ನೂ ಆಡಲು ಫಿಟ್ ಆಗಿಲ್ಲ. ಕಳಪೆ ಪ್ರದರ್ಶನ ತೋರುತ್ತಿರುವ ಕೆಲವು ಆಟಗಾರರು ತಂಡದಲ್ಲಿ ಹಾಗೇ ಉಳಿಯಲು ಚುಚ್ಚುಮದ್ದನ್ನು ಬಳಸುತ್ತಿದ್ದಾರೆ ಎಂದು ಚೇತನ್ ಶರ್ಮಾ ಬಹಿರಂಗಪಡಿಸಿದ್ದಾರೆ.
  2. ಇಶಾನ್ ಕಿಶನ್ ಮತ್ತು ಶುಭ್ ಮನ್ ಗಿಲ್ ಅವರ ಇತ್ತೀಚಿನ ಉತ್ತಮ ಫಾರ್ಮ್ ಸಂಜು ಸ್ಯಾಮ್ಸನ್, ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಅವರ ವೃತ್ತಿಜೀವನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
  3. ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ನಡುವೆ ದೊಡ್ಡ ಅಹಂ ಘರ್ಷಣೆ ಇತ್ತು. ವಿರಾಟ್ ಅವರು ಮಂಡಳಿಗಿಂತ ಮೇಲಿದ್ದಾರೆಂದು ಭಾವಿಸಿದ್ದರು ಮತ್ತು ಗಂಗೂಲಿ ತಮ್ಮದೇ ಆದ ನಿಲುವಿಗೆ ಬದ್ಧರಾಗಿದ್ದರು.
  4. ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರಣದಿಂದ ತಮ್ಮ ನಾಯಕತ್ವವನ್ನು ಕೈಯಿಂದ ಜಾರಿತು ಎಂದು ವಿರಾಟ್ ಕೊಹ್ಲಿ ಎಂದು ಭಾವಿಸಿದ್ದಾರೆ. ಹಾಗಾಗಿಯೇ ಕ್ಷಿಣ ಆಫ್ರಿಕಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಗಂಗೂಲಿ ವಿರುದ್ಧ ವಾಗ್ದಾಳಿ ನಡೆಸಿದರು.
  5. ವಿರಾಟ್ ಕೊಹ್ಲಿ ಸುಳ್ಳುಗಾರ,ಅವರ ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮೊದಲೇ ತಿಳಿಸಲಾಗಿತ್ತು. ನಾಯಕತ್ವದಿಂದ ಕೆಳಗಿಳಿಯಬೇಡಿ ಎಂದು ಗಂಗೂಲಿ ಹೇಳಿದ್ದರಿ. ಆದರೆ ಅಹಂನಿಂದಾಗಿ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಗಂಗೂಲಿಯನ್ನು ದೂಷಿಸಿದರು.
  6. ವಿರಾಟ್ ಕೊಹ್ಲಿಯನ್ನು ನಾಯಕ ಸ್ಥಾನದಿಂದ ತೆಗೆದುಹಾಕುವುದು ಗಂಗೂಲಿಯದ್ದು ಮಾತ್ರ ನಿರ್ಧಾರ ಆಗಿರಲಿಲ್ಲ. ಅದು ಆಯ್ಕೆಗಾರರ ಒಟ್ಟು ನಿರ್ಧಾರವಾಗಿತ್ತು. ರವಿಶಾಸ್ತ್ರಿ ಅವರನ್ನು ಕೋಚ್ ಮಾಡುವಲ್ಲಿ ಕೊಹ್ಲಿಯ ಪಾತ್ರವೂ ದೊಡ್ಡದಿದೆ.
  7. ಬಿಸಿಸಿಐ ಆಯ್ಕೆದಾರರು ನಾಯಕತ್ವದ ಪಾತ್ರಗಳಲ್ಲಿ ಪ್ರಯೋಗ ಮಾಡಲು ಬಯಸಿದ್ದರು ಎಂದು ಶರ್ಮಾ ಬಹಿರಂಗಪಡಿಸಿದ್ದಾರೆ, ಅದಕ್ಕಾಗಿಯೇ ಇತ್ತೀಚಿನ ವರ್ಷಗಳಲ್ಲಿ ಭಾರತವು ಹಲವಾರು ನಾಯಕರನ್ನು ಕಂಡಿದೆ. ಆದರೆ ಕೊಹ್ಲಿ ಸಮಯದಲ್ಲಿ, ಆಯ್ಕೆದಾರರು ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಒಬ್ಬನೇ ನಾಯಕ ಇರುತ್ತಾರೆ ಎಂದು ಹೇಳಿದರು.
  8. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಯಾವುದೇ ಸಂಘರ್ಷವಿಲ್ಲ, ಆದರೆ ಕೆಲವು ಅಹಂ ಸಂಘರ್ಷವಿದೆ. ಅವರಿಬ್ಬರನ್ನು ಧರ್ಮೇಂದ್ರ ಮತ್ತು ಅಮಿತಾಭ್ ಬಚ್ಚನ್ ಜೊತೆ ಹೋಲಿಕೆ ಮಾಡಿದ್ದಾರೆ ಶರ್ಮಾ.
  9. ರೋಹಿತ್ ಮತ್ತು ವಿರಾಟ್ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಯಾವುದೇ ಸಂಘರ್ಷ ನಡೆದಿದ್ದರೆ ನನಗೆ ತಿಳಿಸಲಾಗುತ್ತಿತ್ತು.
  10. ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸೇರಿದಂತೆ ಭಾರತೀಯ ಆಟಗಾರರು ತಮ್ಮನ್ನು ಕಣ್ಮುಚ್ಚಿ ನಂಬುತ್ತಾರೆ.
  11. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆಸಿದಾಗಲೆಲ್ಲ ಇಬ್ಬರೂ 30 ನಿಮಿಷಗಳ ಕಾಲ ಮಾತನಾಡುತ್ತೇವೆ.
  12. ಎರಡು ಗ್ರೂಪ್ ಇದೆ. ಒಂದನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಇನ್ನೊಂದನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ.
  13. ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ದೀಪಕ್ ಹೂಡಾ, ಶುಭಮನ್ ಗಿಲ್ ಮತ್ತು ಇತರ 15-20 ಆಟಗಾರರನ್ನು ತಂಡಕ್ಕೆ ಕರೆತಂದಿದ್ದೇನೆ.
  14. ಶುಭ್​ಮನ್ ಗಿಲ್‌ಗೆ ಅವಕಾಶ ನೀಡಲು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ’ವಿಶ್ರಾಂತಿ’ ನೀಡಲಾಗಿದೆ ಭವಿಷ್ಯದಲ್ಲಿ ರೋಹಿತ್ ಶರ್ಮಾ T20I ಸೆಟಪ್‌ನ ಭಾಗವಾಗುವುದಿಲ್ಲ. ಹಾರ್ದಿಕ್ ಪಾಂಡ್ಯ ದೀರ್ಘಾವಧಿಗೆ ನಾಯಕರಾಗಿರುತ್ತಾರೆ.

Published On - 11:02 am, Fri, 17 February 23