Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

India vs England 2nd Test: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ.

Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?
Kl Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2021 | 3:13 PM

ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England 2nd Test) ನಡುವಣ 2ನೇ ಟೆಸ್ಟ್ ಪಂದ್ಯವು ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ಇನಿಂಗ್ಸ್​ನಲ್ಲಿ ಭಾರತ ಕೆಎಲ್ ರಾಹುಲ್ (KL Rahul) ಅವರ ಆಕರ್ಷಕ ಶತಕದ ನೆರವಿನಿಂದ 364 ರನ್ ಕಲೆಹಾಕಿತ್ತು. ಒಂದು ಹಂತದಲ್ಲಿ 400ರ ಗಡಿದಾಟುವ ವಿಶ್ವಾಸದಲ್ಲಿದ್ದ ಟೀಮ್ ಇಂಡಿಯಾಗೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಕೈ ಕೊಟ್ಟರು. ಅದರಲ್ಲೂ ಟೆಸ್ಟ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಚೇತೇಶ್ವರ ಪೂಜಾರ (9) ಹಾಗೂ ಅಜಿಂಕ್ಯ ರಹಾನೆ (1) ವಿಫಲರಾಗಿದ್ದು ಭಾರತಕ್ಕೆ ಮುಳುವಾಯಿತು. ಇದರ ಬೆನ್ನಲ್ಲೇ ಪೂಜಾರ ಹಾಗೂ ರಹಾನೆ ಅವರ ಕಳಪೆ ಫಾರ್ಮ್​ ಬಗ್ಗೆ ಟೀಕೆಗಳು ಕೇಳಿ ಬಂದವು. ಏಕೆಂದರೆ ಪ್ರಸ್ತುತ ಸರಣಿಯಲ್ಲಿ ಪೂಜಾರ 3 ಇನ್ನಿಂಗ್ಸ್‌ಗಳಲ್ಲಿ 4, 12 ಮತ್ತು 9 ರನ್​ಗಳಿಸಿ ಔಟಾಗಿದ್ದಾರೆ. ಇನ್ನೊಂದೆಡೆ ರಹಾನೆ ಎರಡು ಇನ್ನಿಂಗ್ಸ್‌ಗಳಲ್ಲಿ 5 ಮತ್ತು ಒಂದು ರನ್ ಕೊಡುಗೆಯನ್ನು ನೀಡಿದ್ದಾರೆ. ಹೀಗಾಗಿ ಈ ಇಬ್ಬರನ್ನು ಕೈಬಿಟ್ಟು ಬೆಂಚ್ ಕಾಯುತ್ತಿರುವ ಆಟಗಾರರಿಗೆ ಸ್ಥಾನ ನೀಡಬೇಕು ಎಂಬ ಕೂಗುಗಳು ಕೇಳಿಬಂದಿದ್ದವು. ಇದೇ ವಿಷಯ ಟೀಮ್ ಇಂಡಿಯಾ ಪತ್ರಿಕಾಗೋಷ್ಠಿಯಲ್ಲೂ ಪಸ್ತಾಪವಾಗಿತ್ತು. 2ನೇ ದಿನದಾಟ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್​ಗೆ ಪೂಜಾರ ಹಾಗೂ ರಹಾನೆ ಫಾರ್ಮ್​ ಬಗ್ಗೆ ಕೇಳಲಾಯಿತು.

ಈ ಬಗ್ಗೆ ಮಾತನಾಡಿದ ಕೆಎಲ್​ಆರ್​, ಚೇತಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಭಾರತಕ್ಕಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು. ಅವರು ವಿಶ್ವ ದರ್ಜೆಯ ಮತ್ತು ಅನುಭವಿ ಆಟಗಾರರಾಗಿರುವುದರಿಂದ ಕಳಪೆ ಫಾರ್ಮ್​ನಿಂದ ಚೇತರಿಸಿಕೊಳ್ಳುವುದು ಹೇಗೆ ಎಂಬುದು ಅವರಿಗೆ ತಿಳಿದಿದೆ. ಹೀಗಾಗಿ ಶೀಘ್ರದಲ್ಲೇ ಅವರು ಕಂಬ್ಯಾಕ್ ಮಾಡಲಿದ್ದಾರೆ ಎಂದು ರಾಹುಲ್ ತಿಳಿಸಿದರು.

ಅಷ್ಟೇ ಅಲ್ಲದೆ ಟೀಕೆ ಮಾಡುವ ಮುನ್ನ ಪೂಜಾರ ಹಾಗೂ ರಹಾನೆ ಕಷ್ಟದ ಪರಿಸ್ಥಿತಿಯಲ್ಲಿ ಆಡುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಇಂಗ್ಲೆಂಡ್ ಪರಿಸ್ಥಿತಿಗಳಲ್ಲಿ ಬ್ಯಾಟಿಂಗ್ ಯಾವಾಗಲೂ ಸವಾಲಿನದ್ದಾಗಿದೆ. ನೀವು ಉತ್ತಮ ಎಸೆತಗಳನ್ನು ಎದುರಿಸಬೇಕಾಗುತ್ತದೆ. ಇಲ್ಲಿ ಪ್ರತಿ ಇನ್ನಿಂಗ್ಸ್‌ನಲ್ಲಿ ರನ್ ಗಳಿಸಲು ಸಾಧ್ಯವಿಲ್ಲ. ಆದರೆ ನೀವು ಉತ್ತಮ ಆರಂಭವನ್ನು ಪಡೆದರೆ, ನೀವು ಅದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ರಾಹುಲ್ ಅಭಿಪ್ರಾಯಪಟ್ಟರು.

ಇನ್ನು ಲಾರ್ಡ್ಸ್​ ಮೈದಾನದಲ್ಲಿ ಚೊಚ್ಚಲ ಶತಕ ಬಾರಿಸಿದ ರಾಹುಲ್ ತಮ್ಮ 129 ರನ್​ಗಳ ಕೊಡುಗೆಯ ಹೊರತಾಗಿಯೂ ತಂಡವನ್ನು ಮೊತ್ತವನ್ನು ಬೃಹತ್ ಮೊತ್ತವನ್ನಾಗಿಸುವಲ್ಲಿ ವಿಫಲರಾಗಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ಸದ್ಯ ಮೂರನೇ ದಿನಕ್ಕೆ ಕಾಲಿಟ್ಟಿರುವ ಇಂಗ್ಲೆಂಡ್-ಭಾರತ 2ನೇ ಟೆಸ್ಟ್​ ಪಂದ್ಯದಲ್ಲಿ ಆಂಗ್ಲರು ಸೆಕೆಂಡ್ ಇನಿಂಗ್ಸ್ ಆಡುತ್ತಿದ್ದಾರೆ. ಸದ್ಯದ ಮಾಹಿತಿಯಂತೆ ಇಂಗ್ಲೆಂಡ್​ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಳೆದುಕೊಂಡು 119 ರನ್​ಗಳಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ- ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ – ರೋರಿ ಬರ್ನ್ಸ್, ಡೊಮ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್, ಮೊಯೀನ್ ಅಲಿ, ಸ್ಯಾಮ್ ಕರನ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಅಂಡರ್ಸನ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ