AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheteshwar Pujara: ಕೌಂಟಿ ಕ್ರಿಕೆಟ್​ನ ಪದಾರ್ಪಣೆ ಪಂದ್ಯದಲ್ಲೇ ದ್ವಿಶತಕ ಸಿಡಿಸಿ ಅಬ್ಬರಿಸಿದ ಚೇತೇಶ್ವರ್ ಪೂಜಾರ

Derbyshire vs Sussex: ಕೌಂಟಿ ಕ್ರಿಕೆಟ್‌ ಚಾಂಪಿಯನ್‌ಷಿಪ್‌ನಲ್ಲಿ ಸಸೆಕ್ಸ್‌ ತಂಡದ ಪರ ಆಡುತ್ತಿರುವ ಚೇತೇಶ್ವರ್ ಪೂಜಾರ (Cheteshwar Pujara) ತಮ್ಮ ಪದಾರ್ಪಣೆಯ ಪಂದ್ಯದಲ್ಲೇ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ.

Cheteshwar Pujara: ಕೌಂಟಿ ಕ್ರಿಕೆಟ್​ನ ಪದಾರ್ಪಣೆ ಪಂದ್ಯದಲ್ಲೇ ದ್ವಿಶತಕ ಸಿಡಿಸಿ ಅಬ್ಬರಿಸಿದ ಚೇತೇಶ್ವರ್ ಪೂಜಾರ
Cheteshwar Pujara
TV9 Web
| Updated By: Digi Tech Desk|

Updated on:Apr 18, 2022 | 5:53 PM

Share

ಸತತ ಕಳಪೆ ಫಾರ್ಮ್​​ನಿಂದ ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿರುವ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ (Cheteshwar Pujara) ಇದೀಗ ಬೊಂಬಾಟ್ ಆಗಿ ಕಮ್​​ಬ್ಯಾಕ್ ಮಾಡಿದ್ದಾರೆ. ಕೌಂಟಿ ಕ್ರಿಕೆಟ್‌ ಚಾಂಪಿಯನ್‌ಷಿಪ್‌ನಲ್ಲಿ ಸಸೆಕ್ಸ್‌ (Sussex) ತಂಡದ ಪರ ಆಡುತ್ತಿರುವ ಪೂಜಾರ ತಮ್ಮ ಪದಾರ್ಪಣೆಯ ಪಂದ್ಯದಲ್ಲೇ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ. ರನ್ ಗಳಿಸಲು ಸಾಧ್ಯವಾಗದೆ ಭಾರತ ತಂಡದಿಂದ ಹೊರಬಿದ್ದಿದ್ದ ಪೂಜಾರ ರಾಷ್ಟ್ರೀಯ ತಂಡಕ್ಕೆ ಕಮ್​ಬ್ಯಾಕ್​ ಮಾಡುವುದಕ್ಕೆ ಸಾಕಷ್ಟು ಹರಸಹಾಸ ಪಡುತ್ತಿದ್ದಾರೆ. ಈ ಹಿಂದೆ ರಣಜಿ ಟ್ರೋಫಿಯಲ್ಲಿ ಆಡಿದ 2 ಪಂದ್ಯಗಳಲ್ಲಿ 2 ಅರ್ಧಶತಕ ಸಿಡಿಸಿದ್ದ ಪೂಜಾರ ಇದೀಗ ಕೌಂಟಿ ಕ್ರಿಕೆಟ್​​ನಲ್ಲಿ (County Cricket) ಸಸೆಕ್ಸ್ ಪರ ಚೊಚ್ಚಲ ಪಂದ್ಯದಲ್ಲೇ ಮಿಂಚಿ ಮತ್ತೆ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡುವ ಸಂದೇಶ ರವಾನಿಸಿದ್ದಾರೆ.

ಲಂಡನ್​​ನ ಡೆರ್ಬಿ ಕೌಂಟಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡರ್ಬಿಶೈರ್ 505 ರನ್​ಗಳಿಸಿದ ಡಿಕ್ಲೇರ್ ಘೋಷಿಸಿಕೊಂಡಿತ್ತು. ಈ ಮೊತ್ತವನ್ನು ಬೆನ್ನಟಿದ ಸಸೆಕ್ಸ್​ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 174 ರನ್​ಗಳಿಗೆ ಆಲೌಟ್ ಆಗಿತ್ತು. ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 34 ವರ್ಷದ ಬಲಗೈ ಬ್ಯಾಟರ್‌ ಚೇತೇಶ್ವರ್‌ ಪೂಜಾರ 15 ಎಸೆತಗಳಲ್ಲಿ 6 ರನ್‌ ಗಳಿಸಿ, ಭಾರತೀಯ ಸಂಜಾತ ಬ್ರಿಟನ್‌ ಆಟಗಾರ ಹಾಗೂ ಆಲ್‌ರೌಂಡರ್‌ ಅನುಜ್‌ ಕೈಲಾಶ್‌ ದಾಲ್‌ ಅವರಿಗೆ ವಿಕೆಟ್‌ ಒಪ್ಪಿಸಿದ್ದರು. ಡೆರ್ಬಿಶೈರ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 505/8 ರನ್‌ ದಾಖಲಿಸಿ ಡಿಕ್ಲೇರ್‌ ಮಾಡಿಕೊಂಡಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್‌ನಲ್ಲಿ ಸಸೆಕ್ಸ್‌ ತಂಡ 56.3 ಓವರ್‌ಗಳಲ್ಲಿ ಕೇವಲ 174 ರನ್‌ಗಳಿಗೆ ಆಲ್‌ಔಟ್‌ ಆಗಿ ಫಾಲೋ ಆನ್‌ ಪಡೆದಿತ್ತು.

ನಂತರ ಎರಡನೇ ಇನಿಂಗ್ಸ್‌ನಲ್ಲಿ ಸಸೆಕ್ಸ್‌ ಕ್ಯಾಪ್ಟನ್‌ ಟಾಮ್‌ ಹೈನೆಸ್‌ ಮತ್ತು ಚೇತೇಶ್ವರ್‌ ಪೂಜಾರ 3ನೇ ವಿಕೆಟ್‌ಗೆ 713 ಎಸೆತಗಳಲ್ಲಿ 351 ರನ್‌ಗಳ ಅಮೋಘ ಜೊತೆಯಾಟ ಕಟ್ಟಿ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದರು. ನಾಯಕನ ಆಟವಾಡಿದ ಟಾಮ್‌ ಹೈನೆಸ್‌, 491 ಎಸೆತಗಳಲ್ಲಿ 22 ಫೋರ್‌ ಒಳಗೊಂಡ 243 ರನ್‌ ದಾಖಲಿಸಿದರು. ಪೂಜಾರ 387 ಎಸೆತಗಳಲ್ಲಿ 23 ಫೋರ್‌ಗಳೊಂದಿಗೆ 201 ರನ್‌ ಗಳಿಸುವ ಮೂಲಕ ಔಟಾಗದೆ ಉಳಿದು ತಂಡ ಡ್ರಾ ಸಾಧಿಸುವಲ್ಲಿ ಮುಖ್ಯ ಪಾತ್ರವಹಿಸಿದರು.

2020ರಲ್ಲಿ ಕೂಡ ಚೇತೇಶ್ವರ್ ಪೂಜಾರ ಗ್ಲೌಸ್ಟರ್‌ಶೈರ್ ಪರವಾಗಿ 6 ಪಂದ್ಯಗಳನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಈ ಒಪ್ಪಂದ ರದ್ದಾಗಿತ್ತು. ಇದೀಗ ಮತ್ತೊಮ್ಮೆ ಪೂಜಾರ ಕೌಂಟಿ ಕ್ರಿಕೆಟ್‌ ಆಡಿ ಫಾರ್ಮ್​​ಗೆ ಮರಳಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಗಾಗಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪೂಜಾರ ಅವರನ್ನು ಯಾವ ತಂಡ ಕೂಡ ಖರೀದಿಸಿರಲಿಲ್ಲ. ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿಯೂ ಇವರು ನೀರಸ ಪ್ರದರ್ಶನ ನೀಡಿದ್ದರು. ಹೀಗಾಗಿ ಪೂಜಾರ ಜೊತೆ ಅಜಿಂಕ್ಯಾ ರಹಾನೆ ಅವರನ್ನೂ ಭಾರತ ಟೆಸ್ಟ್ ತಂಡದಿಂದ ಕೈಬಿಡಲಾಗಿತ್ತು.

IPL 2022: ಐಪಿಎಲ್​ಗೆ ಮತ್ತೆ ವಕ್ಕರಿಸಿದ ಕೊರೊನಾ: ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಕೋವಿಡ್ ಪಾಸಿಟಿವ್

Vishwa Deenadayalan: 18 ವರ್ಷದ ಭರವಸೆಯ ಟೇಬಲ್ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು

Published On - 12:57 pm, Mon, 18 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?