ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಿಂದ ಚೇತೇಶ್ವರ ಪೂಜಾರ ಅಮಾನತು..!

Cheteshwar Pujara: ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿರುವ ಪೂಜಾರ ಕೊನೆಯ ಬಾರಿಗೆ ಭಾರತ ಪರ ಆಡಿದ್ದು ಟೆಸ್ಟ್ ವಿಶ್ವ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಪೂಜಾರ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಿಂದ ಚೇತೇಶ್ವರ ಪೂಜಾರ ಅಮಾನತು..!
Cheteshwar Pujara
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 18, 2023 | 10:43 PM

ಇಂಗ್ಲೆಂಡ್​ನಲ್ಲಿ ಪ್ರಸ್ತುತ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ನಡವಳಿಕೆಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚೇತೇಶ್ವರ ಪೂಜಾರ ಅವರನ್ನು ಇಸಿಬಿ (ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ) ಅಮಾನತುಗೊಳಿಸಿದೆ. ಸಸೆಕ್ಸ್ ಕೌಂಟಿ ಕ್ರಿಕೆಟ್ ಕ್ಲಬ್‌ನ ನಾಯಕರಾಗಿರುವ ಪೂಜಾರ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಲಾಗಿದೆ. ಅಲ್ಲದೆ ನಿಯಮಗಳ ಉಲ್ಲಂಘನೆಗಾಗಿ 12 ಅಂಕಗಳನ್ನು ಕಡಿತ ಮಾಡಲಾಗಿದೆ.

ಪೂಜಾರ ಅವರ ಈ ಅಮಾನತಿಗೆ ಮುಖ್ಯ ಕಾರಣ ಸಹ ಆಟಗಾರರಾದ ಜಾಕ್ ಕಾರ್ಸನ್ ಮತ್ತು ಟಾಮ್ ಹೈನ್ಸ್ ಅವರ ಕ್ರೀಡಾಹೀನ ವರ್ತನೆ. ಹೋವ್‌ನಲ್ಲಿ ನಡೆದ ಲೀಸೆಸ್ಟರ್‌ಶೈರ್ ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ.

ಪೂಜಾರ ಇಸಿಬಿಯ ವೃತ್ತಿಪರ ನಡವಳಿಕೆಯ ನಿಯಮಾವಳಿಗಳನ್ನು ಮುರಿಯದಿದ್ದರೂ ನಾಯಕನಾಗಿ ಕಾರ್ಸನ್ ಮತ್ತು ಹೈನ್ಸ್ ಅವರ ನಡವಳಿಕೆಯನ್ನು ತಡೆಯುವಲ್ಲಿ ವಿಫಲವಾಗಿರುವುದು ಅವರ ಅಮಾನತಿಗೆ ಕಾರಣವಾಗಿದೆ.

ಪೂಜಾರ ಅವರ ಅಮಾನತು ಮತ್ತು 12-ಪಾಯಿಂಟ್ ಕಡಿತದ ಹೊರತಾಗಿ, ಸೆಪ್ಟೆಂಬರ್ 19 ರಂದು ಡರ್ಬಿಶೈರ್ ವಿರುದ್ಧ ಸಸೆಕ್ಸ್‌ನ ಮುಂದಿನ ಪಂದ್ಯದಿಂದ ಹೈನ್ಸ್ ಮತ್ತು ಕಾರ್ಸನ್ ಅವರನ್ನು ಕೈಬಿಡಲಾಗಿದೆ.

ಈ ಬಾರಿಯ ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಚೇತೇಶ್ವರ ಪೂಜಾರ ಸಸೆಕ್ಸ್ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಇದುವರೆಗೆ ಆಡಿದ ಪಂದ್ಯಗಳಲ್ಲಿ ಮೂರು ಶತಕಗಳನ್ನು ದಾಖಲಿಸಿದ್ದಾರೆ. ಅಲ್ಲದೆ 54.08 ರ ಪ್ರಭಾವಶಾಲಿ ಬ್ಯಾಟಿಂಗ್ ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ.

ಇದೀಗ ಪೂಜಾರ ಅನುಪಸ್ಥಿತಿಯಲ್ಲಿ, ಟಾಮ್ ಅಲ್ಸೋಪ್ ಮುಂಬರುವ ಡರ್ಬಿಶೈರ್ ವಿರುದ್ಧದ ಪಂದ್ಯಕ್ಕೆ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಪೂಜಾರ ಅಂತಿಮ ಸುತ್ತಿನ ಪಂದ್ಯಗಳಲ್ಲಿ ಮತ್ತೊಮ್ಮೆ ಆಯ್ಕೆಗೆ ಲಭ್ಯವಾಗಲಿದ್ದಾರೆ. ಹೀಗಾಗಿ ಮಂಗಳವಾರದ ಬಳಿಕ ನಡೆಯುವ ಸಸೆಕ್ಸ್​ನ ಉಳಿದ ಪಂದ್ಯಗಳಲ್ಲಿ ಚೇತೇಶ್ವರ ಪೂಜಾರ ಕಣಕ್ಕಿಳಿಯಬಹುದು.

ಟೀಮ್ ಇಂಡಿಯಾ ಪರ ಪೂಜಾರ:

ಭಾರತ ತಂಡದ ಪರ 103 ಟೆಸ್ಟ್ ಪಂದ್ಯಗಳನ್ನಾಡಿರುವ ಚೇತೇಶ್ವರ ಪೂಜಾರ 176 ಇನಿಂಗ್ಸ್​ಗಳಿಂದ ಒಟ್ಟು 7195 ರನ್ ಕಲೆಹಾಕಿದ್ದಾರೆ. ಈ ವೇಳೆ 19 ಶತಕ, 3 ದ್ವಿಶತಕ ಹಾಗೂ 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು 5 ಏಕದಿನ ಪಂದ್ಯಗಳಿಂದ ಕೇವಲ 51 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಸುಂದರ್, ಅಶ್ವಿನ್ ಆಯ್ಕೆ: ವಿಶ್ವಕಪ್​ ತಂಡದಲ್ಲಿ ಬದಲಾವಣೆ ಸಾಧ್ಯತೆ

ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿರುವ ಪೂಜಾರ ಕೊನೆಯ ಬಾರಿಗೆ ಭಾರತ ಪರ ಆಡಿದ್ದು ಟೆಸ್ಟ್ ವಿಶ್ವ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಪೂಜಾರ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಮುಂಬರುವ ಟೆಸ್ಟ್ ಸರಣಿಗಳಿಗೆ 35 ವರ್ಷದ ಪೂಜಾರ ಅವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ. ಇದೇ ಕಾರಣದಿಂದಾಗಿ ಇದೀಗ ಕೌಂಟಿ ಚಾಂಪಿಯನ್​ಶಿಪ್​ ಮೂಲಕ ಚೇತೇಶ್ವರ ಪೂಜಾರ ತಮ್ಮ ಫಾರ್ಮ್ ಅನ್ನು ಮರಳಿ ಪಡೆಯುವಲ್ಲಿ ನಿರತರಾಗಿದ್ದಾರೆ.

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ