AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಆಯ್ಕೆ ಸಮಿತಿ ಅಧ್ಯಕ್ಷರು ಹೇಳಿದ್ದೇನು?

Hardik Pandya: ಹಾರ್ದಿಕ್ ಪಾಂಡ್ಯ ಈ ಬಾರಿ ರಣಜಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದರೆ ಐಪಿಎಲ್-2022 ರಲ್ಲಿ ಆಡುವುದನ್ನು ಈಗಾಗಲೇ ಖಚಿತಪಡಿಸಿದ್ದಾರೆ.

Hardik Pandya: ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಆಯ್ಕೆ ಸಮಿತಿ ಅಧ್ಯಕ್ಷರು ಹೇಳಿದ್ದೇನು?
Hardik Pandya
TV9 Web
| Updated By: ಝಾಹಿರ್ ಯೂಸುಫ್|

Updated on:Feb 20, 2022 | 2:34 PM

Share

ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಹಾಗೂ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡಗಳಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೆಸರು ಕಾಣಿಸಿಕೊಂಡಿಲ್ಲ. ಅಂದರೆ ಟಿ20 ವಿಶ್ವಕಪ್ ಬಳಿಕ ಹಾರ್ದಿಕ್ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಅತ್ತ ಪಾಂಡ್ಯ ರಣಜಿ ಟ್ರೋಫಿಯಲ್ಲೂ ಭಾಗವಹಿಸುತ್ತಿಲ್ಲ. ಹೀಗಾಗಿಯೇ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಬಗ್ಗೆ ಪ್ರಶ್ನೆಗಳು ಮೂಡಿವೆ. ಈ ಎಲ್ಲಾ ಪ್ರಶ್ನೆಗಳಿಗೆ ಟೀಮ್ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಉತ್ತರ ನೀಡಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಚೇತನ್ ಶರ್ಮಾ, ಅವರು ಈಗ ಬೌಲಿಂಗ್‌ಗೆ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಇನ್ನು ಆಯ್ಕೆಗೆ ಅವರು ತಯಾರಿರುವುದು ಖಚಿತವಾದಾಗ ಮಾತ್ರ ಆಯ್ಕೆ ಸಮಿತಿಯು ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಹಾರ್ದಿಕ್ ಪಾಂಡ್ಯ ರಣಜಿ ಟ್ರೋಫಿಯಲ್ಲಿ ಏಕೆ ಆಡುತ್ತಿಲ್ಲ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಚೇತನ್ ಶರ್ಮಾ, “ಯಾರಾದರೂ ಆಡಲು ಬಯಸದಿದ್ದರೆ, ಆಯ್ಕೆ ಸಮಿತಿಯು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ರಣಜಿ ಟ್ರೋಫಿಯಲ್ಲಿ ಏಕೆ ಆಡುತ್ತಿಲ್ಲ ಎಂದು ನೀವು ಹಾರ್ದಿಕ್ ಅವರನ್ನು ಕೇಳಬಹುದು. ರಣಜಿಯಲ್ಲಿ ಆಡುವ ಮತ್ತು ಉತ್ತಮ ಪ್ರದರ್ಶನ ನೀಡುವುದು ಅವರಿಗೆ ಬಿಟ್ಟಿದ್ದು. ದೇಶೀಯ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರ ಮೇಲೆ ಆಯ್ಕೆ ಸಮಿತಿ ಕಣ್ಣಿಟ್ಟಿರುತ್ತದೆ ಎಂದು ಚೇತನ್ ಶರ್ಮಾ ಹೇಳಿದರು.

ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು. ಏಕೆಂದರೆ ಅವರು ಭಾರತ ತಂಡದ ಪ್ರಮುಖ ಭಾಗವಾಗಿದ್ದರು. ಆದರೆ ಗಾಯಗೊಂಡ ನಂತರ, ಅವರು 100 ರಷ್ಟು ಫಿಟ್ ಆಗಿದ್ದರೆ, ಆಡಲು ಸಿದ್ಧರಾಗಿದ್ದರೆ ಮತ್ತು ಅವರು ಬೌಲಿಂಗ್ ಮಾಡಲು ಫಿಟ್​ನೆಸ್ ಹೊಂದಿದ್ದರೆ ಮಾತ್ರ ನಾವು ಹಾರ್ದಿಕ್ ಪಾಂಡ್ಯ ಅವರ ಹೆಸರನ್ನು ಪರಿಗಣಿಸುತ್ತೇವೆ. ಹೀಗಾಗಿ ಅವರು ತಮ್ಮ ಫಿಟ್​ನೆಸ್​ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ ಎಂದು ಇದೇ ವೇಳೆ ಚೇತನ್ ಶರ್ಮಾ ಸ್ಪಷ್ಟಪಡಿಸಿದರು.

ಐಪಿಎಲ್ 2022 ಮೂಲಕ ಕಂಬ್ಯಾಕ್: ಹಾರ್ದಿಕ್ ಪಾಂಡ್ಯ ಈ ಬಾರಿ ರಣಜಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದರೆ ಐಪಿಎಲ್-2022 ರಲ್ಲಿ ಆಡುವುದನ್ನು ಈಗಾಗಲೇ ಖಚಿತಪಡಿಸಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್‌ಗೆ ನಾಯಕರಾಗಿ ಪಾಂಡ್ಯ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಅನ್ನು ಸಾಬೀತುಪಡಿಸಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಆಯ್ಕೆಯಾಗುವ ವಿಶ್ವಾಸದಲ್ಲಿ ಪಾಂಡ್ಯ. ಅದರಂತೆ ಟಿ20 ವಿಶ್ವಕಪ್​ ವೇಳೆಗೆ ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದಾರೆ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(Chief Selector Chetan Sharma Provides Update On Hardik Pandya’s Return)

Published On - 2:33 pm, Sun, 20 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ