RCB Fans Death: ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಆರ್‌ಸಿಬಿ
Chinnaswamy Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಸರ್ಕಾರದ ಭದ್ರತಾ ವೈಫಲ್ಯದ ಆರೋಪ ಕೇಳಿಬಂದಿದೆ. ಸರ್ಕಾರ ಸಾವನ್ನಪ್ಪಿದವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೀಗ ಆರ್‌ಸಿಬಿ ಫ್ರಾಂಚೈಸಿ ಕೂಡ ಪರಿಹಾರ ನೀಡುವುದಾಗಿ ಘೋಷಿಸಿವೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಆರ್‌ಸಿಬಿ ಅಭಿಮಾನಿಗಳು (RCB Fans) ಸಾವನ್ನಪ್ಪಿದ್ದರು. ಸರ್ಕಾರದ ಭದ್ರತಾ ವೈಫಲ್ಯದಿಂದಾಗಿ ಈ ಸಾವು ನೋವು ಉಂಟಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಸರ್ಕಾರ ಮಾತ್ರ ಇದನ್ನು ಒಪ್ಪಲು ಸಿದ್ಧವಿಲ್ಲ. ಆದಾಗ್ಯೂ ಸರ್ಕಾರದ ವತಿಯಿಂದ ಈ ಅವಘಡದಲ್ಲಿ ಸಾವಿಗೀಡದವರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ ಘೋಷಿಸಲಾಗಿತ್ತು. ಹಾಗೆಯೇ ಗಾಯಾಳುಗಳಿಗೂ ಉಚಿತ ಚಿಕಿತ್ಸೆ ನೀಡುವುದಾಗಿ ಹೇಳಿಕೊಂಡಿತ್ತು. ಸರ್ಕಾರದ ಬಳಿಕ ಕೆಎಸ್ಸಿಎ (KSCA) ಕೂಡ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ಧನವಾಗಿ 5 ಲಕ್ಷ ನೀಡುವುದಾಗಿ ಹೇಳಿತ್ತು. ಇದೀಗ ಆರ್‌ಸಿಬಿ ಫ್ರಾಂಚೈಸಿ ( RCB Management ) ಕೂಡ ಮಡಿದ ಆರ್‌ಸಿಬಿ ಅಭಿಮಾನಿಗಳ ಕುಟುಂಬಗಳ ನೆರವಿಗೆ ಮುಂದಾಗಿದೆ.ಅಲ್ಲದೆ ಈ ಅವಘಡದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಅಭಿಮಾನಿಗಳ ಚಿಕಿತ್ಸೆಗಾಗಿ ಆರ್‌ಸಿಬಿ ಕೇರ್ ನಿಧಿಯನ್ನು ಸಹ ರಚನೆ ಮಾಡಲಾಗಿದೆ.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ಸಂದರ್ಭದಲ್ಲಿ, ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುವಾಗ ಕಾಲ್ತುಳಿತ ಸಂಭವಿಸಿತು, ಇದರಲ್ಲಿ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡರೆ, 20 ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂
The unfortunate incident in Bengaluru yesterday has caused a lot of anguish and pain to the RCB family. As a mark of respect and a gesture of solidarity, RCB has announced a financial… pic.twitter.com/C50WID1FEI
— Royal Challengers Bengaluru (@RCBTweets) June 5, 2025
ಕೇವಲ ಒಂದೇ ಒಂದು ಪೋಸ್ಟ್
ವಾಸ್ತವವಾಗಿ ಅವಘಡ ನಡೆದ ಆರೇಳು ಗಂಟೆಗಳ ನಂತರ ಆರ್‌ಸಿಬಿ, ಮಡಿದವರಿಗೆ ಸಂತಾಪ ಸೂಚಿಸಿತ್ತು. ಫ್ರಾಂಚೈಸಿಯ ಈ ನಡೆ ಅಭಿಮಾನಿಗಳನ್ನು ಕೆರಳುವಂತೆ ಮಾಡಿತು. ಅಲ್ಲದೆ ಈ ಸಾವು ನೋವಿನ ನಡುವೆಯೂ ಕ್ರೀಡಾಂಗಣದ ಒಳಗೆ 15 ನಿಮಿಷಗಳ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಇದು ಕೂಡ ಕನ್ನಡಿಗರನ್ನು ಕೋಪಗೊಳ್ಳುವಂತೆ ಮಾಡಿತ್ತು. ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದ ಆರ್‌ಸಿಬಿ, ಇಂದು ಮಧ್ಯಾಹ್ನ ತಂಡದ ಆಗಮನದ ನೀರಿಕ್ಷೆಯಲ್ಲಿ ಬೆಂಗಳೂರಿನವರು ಇದ್ದರು. ಆದರೆ, ಈ ವೇಳೆ ಸಂಭವಿಸಿದ ದುರದೃಷ್ಟಕರ ಘಟನೆಯಿಂದ ನಾವು ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ನಮಗೆ ಅತ್ಯಂತ ಮುಖ್ಯ ವಿಷಯ ಆಗಿದೆ. ದುರಂತದಿಂದ ಆದ ಜೀವ ಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತಿದೆ. ಸಂತ್ರಸ್ತ ಕುಟುಂಬಕ್ಕೆ ನಮ್ಮ ಸಂತಾಪ ಬರೆದುಕೊಂಡಿತ್ತು. ಇದು ಕೂಡ ಆರ್‌ಸಿಬಿ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
Virat Kohli: ಭಾರದ ಮನಸ್ಸಿನಲ್ಲಿ ಬೆಂಗಳೂರು ತೊರೆದ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ
ಆರ್‌ಸಿಬಿ ಕೇರ್ಸ್’ ನಿಧಿ ಸ್ಥಾಪನೆ
ಏಕೆಂದರೆ ಇತರೆ ತಂಡಗಳಿಗೆ ಹೊಲಿಸಿದರೆ, ತನ್ನ ಪಂದ್ಯಗಳ ಟಿಕೆಟ್ ಬೆಲೆಯನ್ನು ದುಪ್ಪಾಟ್ಟು ಮಾಡುವ ಆರ್‌ಸಿಬಿ ಫ್ರಾಂಚೈಸಿ, ತನ್ನ ಅಭಿಮಾನಿಗಳು ಸಾವನ್ನಪ್ಪಿದಾಗ ಕೇವಲ 1 ಪೋಸ್ಟ್ ಮೂಲಕ ಸಂತಾಪ ಸೂಚಿಸಿದ್ದು, ಮಡಿದವರ ಕುಟುಂಬಗಳಿಗೆ ಹಾಗೂ ಗಾಯಾಳುಗಳ ನೆರವಿಗೆ ಬರದಿರುವುದು ಅಭಿಮಾನಿಗಳು ಕೋಪಗೊಳ್ಳುವಂತೆ ಮಾಡಿತ್ತು. ಆದರೆ ಘಟನೆ ನಡೆದ ಒಂದು ದಿನದ ಬಳಿಕ ಮೃತರಿಗೆ ಆರ್ಥಿಕ ಪರಿಹಾರವನ್ನು ಘೋಷಿಸಿರುವ ಫ್ರಾಂಚೈಸಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿ ಮೃತರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ. ಇದಲ್ಲದೆ, ಫ್ರಾಂಚೈಸಿ ‘ಆರ್‌ಸಿಬಿ ಕೇರ್ಸ್’ ಎಂಬ ನಿಧಿಯನ್ನು ರಚಿಸುವುದಾಗಿ ಘೋಷಿಸಿದೆ. ಅದರ ಮೂಲಕ ಈ ದುರಂತದಲ್ಲಿ ಗಾಯಗೊಂಡ ಅಭಿಮಾನಿಗಳಿಗೂ ಸಹ ಸಹಾಯ ಮಾಡಲಾಗುವುದು ಎಂದು ತಿಳಿಸಿದೆ.
Published On - 4:11 pm, Thu, 5 June 25
