Chris Gayle: ಯೂನಿವರ್ಸ್​ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಘೋಷಿಸಿಲ್ವಾ?

T20 World Cup 2021: ವೆಸ್ಟ್ ಇಂಡೀಸ್ ಪರ 79 ಟಿ20 ಅಂತಾರಾಷ್ಟ್ರೀಯ ಪಂದ್ಯವಾಡಿರುವ ಯೂನಿವರ್ಸ್​ ಬಾಸ್​ 1899 ರನ್ ಕಲೆಹಾಕಿದ್ದಾರೆ. ಇದರಲ್ಲಿ 2 ಶತಕ ಹಾಗೂ 14 ಅರ್ಧಶತಕಗಳು ಮೂಡಿಬಂದಿವೆ.

Chris Gayle: ಯೂನಿವರ್ಸ್​ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಘೋಷಿಸಿಲ್ವಾ?
22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು. ಕಳೆದೊಂದು ವರ್ಷದಿಂದ ಗೇಲ್ ಫಾರ್ಮ್​ ಕಳೆದುಕೊಂಡಿದ್ದು, ಇದಾಗ್ಯೂ ಲಂಕಾ ಪ್ರೀಮಿಯರ್ ಲೀಗ್ ಹಾಗೂ ಟಿ10 ಲೀಗ್​ನಲ್ಲಿ ಗೇಲ್ ಅವರನ್ನು ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.
Follow us
| Updated By: ಝಾಹಿರ್ ಯೂಸುಫ್

Updated on: Nov 06, 2021 | 10:59 PM

ಐಸಿಸಿ ಟಿ20 ವಿಶ್ವಕಪ್​ ಮೂಲಕ ವೆಸ್ಟ್ ಇಂಡೀಸ್​ ತಂಡದ ಆಲ್​ರೌಂಡರ್ ಡ್ವೇನ್ ಬ್ರಾವೋ (Dwayne Bravo) ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡ ಬ್ರಾವೋ ಗೌರವಪೂರ್ವಕ ವಿದಾಯ ಪಡೆದರು. ಆದರೆ ಮತ್ತೊಂದೆಡೆ ಇದೇ ಪಂದ್ಯದ ಮೂಲಕ ಯೂನಿವರ್ಸ್​ ಬಾಸ್ ಕ್ರಿಸ್ ಗೇಲ್ (Chris Gayle) ಕೂಡ ವಿದಾಯ ಹೇಳಿದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಗೇಲ್ ಪಂದ್ಯ ಆರಂಭಕ್ಕೂ ಮುನ್ನ ತಮ್ಮ ನಿವೃತ್ತಿಯನ್ನು ಘೋಷಿಸಿರಲಿಲ್ಲ. ಇದಾಗ್ಯೂ ಔಟ್ ಆಗಿ ಪೆವಿಲಿಯನ್ ಕಡೆ ಹಿಂತಿರುಗುತ್ತಿದ್ದ ವೇಳೆ ಗೇಲ್ ಪ್ರೇಕ್ಷಕರತ್ತ ಬ್ಯಾಟ್ ಬೀಸುತ್ತಾ ಹೆಜ್ಜೆ ಹಾಕಿದರು.

ಇತ್ತ ಪ್ರೇಕ್ಷಕರು ಕೂಡ ಎದ್ದು ನಿಂತು ಟಿ20 ಕ್ರಿಕೆಟ್​ನ ಬಾಸ್​ಗೆ ಗೌರವ ಸೂಚಿಸಿದರು. ಆ ಬಳಿಕ ಡ್ವೇನ್ ಬ್ರಾವೋ ಸೇರಿದಂತೆ ಸಹ ಆಟಗಾರರು ಕೂಡ ಗೇಲ್​ ಅವರನ್ನು ಆಲಿಂಗನದ ಮೂಲಕ ಬರ ಮಾಡಿಕೊಂಡರು. ಇನ್ನು ಆಸ್ಟ್ರೇಲಿಯಾ ಆಟಗಾರರು ಡ್ವೇನ್ ಬ್ರಾವೋ ಅವರಿಗೆ ಗೌರವ ಸೂಚಿಸುವ ವೇಳೆ ಕೂಡ ಗೇಲ್ ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಆಸೀಸ್ ಆಟಗಾರರು ಕ್ರಿಸ್ ಗೇಲ್ ಅವರೊಂದಿಗೆ ಹಸ್ತಲಾಘವ ಮಾಡಿರಲಿಲ್ಲ ಎಂಬುದು ವಿಶೇಷ.

ಇನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್​ನ ಅಧಿಕೃತ ಟ್ವಿಟರ್​ ಖಾತೆಯಲ್ಲೂ ಕ್ರಿಸ್ ಗೇಲ್ ಅವರ ವಿದಾಯದ ಕುರಿತು ಯಾವುದೇ ಪೋಸ್ಟ್​ ಕಂಡು ಬಂದಿಲ್ಲ. ಅತ್ತ ಡ್ವೇನ್ ಬ್ರಾವೋ ಅವರಿಗೆ ಧನ್ಯವಾದ ತಿಳಿಸಿ ಪೋಸ್ಟ್ ಹಾಕಲಾಗಿತ್ತು. ಅಂದರೆ ಕ್ರಿಸ್ ಗೇಲ್ ಅಧಿಕೃತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿಲ್ಲ ಎಂಬುದು ಸ್ಪಷ್ಟ. ಇದಾಗ್ಯೂ ಗೇಲ್ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಲು ಕಾರಣ ಮುಂದೆ ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಥಾನ ಸಿಗೋದು ಅನುಮಾನ ಎಂಬ ಕಾರಣಕ್ಕಾಗಿ.

ಹೌದು, ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಸಂಪೂರ್ಣ ವೈಫಲ್ಯ ಹೊಂದಿರುವ 42 ವರ್ಷದ ಗೇಲ್ ಅವರನ್ನು ಮುಂದೆ ತಂಡಕ್ಕೆ ಆಯ್ಕೆ ಮಾಡುವುದು ಅನುಮಾನ. ಅತ್ತ ಮುಂದಿನ ದಿನಗಳಲ್ಲಿ ತಂಡಕ್ಕೆ ಆಯ್ಕೆಯಾಗದಿದ್ದರೆ ವಿದಾಯ ಹೇಳುವ ಅವಕಾಶ ಇರುವುದಿಲ್ಲ ಎಂಬ ಕಾರಣಕ್ಕೆ ಪ್ರೇಕ್ಷಕರತ್ತ ಬ್ಯಾಟ್ ಬೀಸಿದ್ದರು. ಇದಾಗ್ಯೂ ಮುಂದಿನ ವರ್ಷ ಟಿ20 ವಿಶ್ವಕಪ್​ ನಡೆಯಲಿದ್ದು, ಆ ವೇಳೆಗೆ ಭರ್ಜರಿ ಫಾರ್ಮ್​ ಪ್ರದರ್ಶಿಸಿದರೆ ಗೇಲ್ ಮತ್ತೆ ವೆಸ್ಟ್ ಇಂಡೀಸ್ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಹೀಗಾಗಿ ಕ್ರಿಸ್ ಗೇಲ್ ಇನ್ನೂ ಕೂಡ ಅಧಿಕೃತವಾಗಿ ನಿವೃತ್ತಿ ಘೋಷಿಸಿಲ್ಲ ಎಂಬುದು ವಿಶೇಷ.

ವೆಸ್ಟ್ ಇಂಡೀಸ್ ಪರ 79 ಟಿ20 ಅಂತಾರಾಷ್ಟ್ರೀಯ ಪಂದ್ಯವಾಡಿರುವ ಯೂನಿವರ್ಸ್​ ಬಾಸ್​ 1899 ರನ್ ಕಲೆಹಾಕಿದ್ದಾರೆ. ಇದರಲ್ಲಿ 2 ಶತಕ ಹಾಗೂ 14 ಅರ್ಧಶತಕಗಳು ಮೂಡಿಬಂದಿವೆ. ಇದೀಗ ಟಿ20 ವಿಶ್ವಕಪ್ ಅಭಿಯಾನವನ್ನು ಮುಗಿಸಿರುವ ವೆಸ್ಟ್ ಇಂಡೀಸ್ ತಂಡದಲ್ಲಿ ಮುಂದಿನ ದಿನಗಳಲ್ಲಿ ಕ್ರಿಸ್ ಗೇಲ್ ಕಾಣಿಸಿಕೊಳ್ಳಲಿದ್ದಾರಾ? ಅಥವಾ ಆಸ್ಟ್ರೇಲಿಯಾ ವಿರುದ್ದದ ಪಂದ್ಯವೇ ಗೇಲ್ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(Chris Gayle appears to have played his last T20I for West Indies)

ತಾಜಾ ಸುದ್ದಿ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ