Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್

ಝಾಹಿರ್ ಯೂಸುಫ್
|

Updated on: Oct 03, 2024 | 6:11 PM

Chris Gayle: ವೆಸ್ಟ್ ಇಂಡೀಸ್ ಪರ 483 ಪಂದ್ಯಗಳನ್ನಾಡಿರುವ ಕ್ರಿಸ್ ಗೇಲ್ 551 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 42 ಶತಕ ಹಾಗೂ 105 ಅರ್ಧಶತಕಗಳೊಂದಿಗೆ 19817 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿಂಡೀಸ್ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ ಕ್ರಿಸ್ ಗೇಲ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಜಮೈಕಾ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಭಾರತಕ್ಕೆ ಭೇಟಿ ನೀಡಿದ್ದು, ಅವರೊಂದಿಗೆ ಗೇಲ್ ಕೂಡ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವ ಕ್ರಿಸ್ ಗೇಲ್, ಅವರೊಂದಿಗಿನ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವುದು ಗೌರವ. ಜಮೈಕಾ ಟು ಇಂಡಿಯಾ” ಎಂಬ ಶೀರ್ಷಿಕೆಯೊಂದಿಗೆ “OneLove” ಹ್ಯಾಶ್‌ಟ್ಯಾಗ್‌ನೊಂದಿಗೆ ಗೇಲ್ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಕ್ರೀಸ್​ ಗೇಲ್ ಕೂಡ ಜಮೈಕಾದವರಾಗಿದ್ದು, ಹೀಗಾಗಿ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಅವರೊಂದಿಗೆ ನಾಲ್ಕು ದಿನಗಳ ಭೇಟಿಗಾಗಿ ನವದೆಹಲಿಗೆ ಆಗಮಿಸಿದ್ದಾರೆ. ವಿಶೇಷ ಎಂದರೆ ಇದೇ ಮೊದಲ ಬಾರಿಗೆ ಜಮೈಕಾದ ನಾಯಕರೊಬ್ಬರು ಭಾರತಕ್ಕೆ ದ್ವಿಪಕ್ಷೀಯ ಚರ್ಚೆಗಾಗಿ ಭೇಟಿ ನೀಡಿದ್ದಾರೆ.

ಅತ್ತ ಭಾರತೀಯರಿಗೆ ಚಿರಪರಿಚಿತರಾಗಿರುವ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರನ್ನು ಸಹ ಪ್ರವಾಸದಲ್ಲಿ ಜಮೈಕಾ ಪ್ರಧಾನಿ ತಮ್ಮದೊಂದಿಗೆ ಸೇರಿಸಿಕೊಂಡಿದ್ದಾರೆ. ಏಕೆಂದರೆ ಜಮೈಕಾ ಮೂಲದವರಾಗಿರುವ ಗೇಲ್ ಕೇವಲ ಆಟಗಾರನಾಗಿ ಉಳಿದಿಲ್ಲ. ಕೆರಿಬಿಯನ್ ದ್ವೀಪದ ಐಕಾನ್ ಆಗಿ ಗುರುತಿಸಿಕೊಂಡಿದ್ದಾರೆ. ಇತ್ತ ಭಾರತದಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಕಾರಣ ಗೌರವಾನ್ವಿತರಾಗಿ ಕ್ರಿಸ್ ಗೇಲ್ ಅವರನ್ನು ಜಮೈಕಾ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ತಮ್ಮ ಭಾರತದ ಭೇಟಿಗೆ ಆಹ್ವಾನಿಸಿದ್ದರು.