AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಬೌಲರ್​ನ ಎದುರಿಸುವಾಗ ಕ್ರಿಸ್ ಗೇಲ್​ ಕಾಲುಗಳು ನಡುಗುತ್ತಿದ್ದವು..!

Chris Gayle: ಐಪಿಎಲ್​ನ ಸರ್ವಶ್ರೇಷ್ಠ ಬ್ಯಾಟರ್​ಗಳಲ್ಲಿ ವೆಸ್ಟ್ ಇಂಡೀಸ್​ ದಾಂಡಿಗ ಕ್ರಿಸ್ ಗೇಲ್ ಕೂಡ ಒಬ್ಬರು. 141 ಐಪಿಎಲ್ ಇನಿಂಗ್ಸ್ ಆಡಿರುವ ಗೇಲ್ 6 ಶತಕ ಹಾಗೂ 31 ಅರ್ಧಶತಕಗಳೊಂದಿಗೆ ಒಟ್ಟು 4965 ರನ್ ಕಲೆಹಾಕಿದ್ದಾರೆ. ಈ ವೇಳೆ 148.97 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಅವರು ಒಬ್ಬ ಬೌಲರ್ ವಿರುದ್ಧ ರನ್ ಗಳಿಸಲು ತಡಕಾಡುತ್ತಿದ್ದರು.

CSK ಬೌಲರ್​ನ ಎದುರಿಸುವಾಗ ಕ್ರಿಸ್ ಗೇಲ್​ ಕಾಲುಗಳು ನಡುಗುತ್ತಿದ್ದವು..!
Chris Gayle
ಝಾಹಿರ್ ಯೂಸುಫ್
|

Updated on: Mar 19, 2025 | 9:53 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದ ಅತ್ಯಂತ ವಿನಾಶಕಾರಿ ಬ್ಯಾಟ್ಸ್​ಮನ್ ಎಂದರೆ ಅದು ಕ್ರಿಸ್ ಗೇಲ್. ಇದಕ್ಕೆ ಸಾಕ್ಷಿ ಅವರು ಐಪಿಎಲ್​ನಲ್ಲಿ ಸಿಡಿಸಿರುವ ಸಿಕ್ಸ್​ಗಳ ಸಂಖ್ಯೆ. ಐಪಿಎಲ್​ನಲ್ಲಿ 141 ಇನಿಂಗ್ಸ್ ಆಡಿರುವ ಗೇಲ್ ಬರೋಬ್ಬರಿ 357 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ ಕ್ರಿಸ್ ಗೇಲ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ 300 ಸಿಕ್ಸ್​ಗಳ ಗಡಿ ಮುಟ್ಟಿಲ್ಲ.  ಬೌಲರ್​ಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದ ಗೇಲ್, ರವಿಚಂದ್ರನ್ ಅಶ್ವಿನ್ ಅವರನ್ನು ಎದುರಿಸಲು ತಡಕಾಡುತ್ತಿದ್ದರು. ಅದರಲ್ಲೂ ಅಶ್ವಿನ್ ದಾಳಿಗೆ ಇಳಿದರೆ ಸಾಕು, ಕ್ರಿಸ್ ಗೇಲ್ ಅವರ ಕಾಲುಗಳು ನಡುಗುತ್ತಿದ್ದವು. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಟೀಮ್ ಇಂಡಿಯಾದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್.

ಚೆನ್ನೈನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕ್ರಿಸ್ ಶ್ರೀಕಾಂತ್, ಕ್ರಿಸ್ ಗೇಲ್ ಬೌಂಡರಿ ಮತ್ತು ಸಿಕ್ಸರ್ ಬಾರಿಸಬಲ್ಲರು, ಆದರೆ ಅವರು ಆರ್. ಅಶ್ವಿನ್ ಅವರನ್ನು ನಿಭಾಯಿಸಲು ಸಾಧ್ಯವಾಗಲೇ ಇಲ್ಲ. ಗೇಲ್ ಅವರನ್ನು ಔಟ್ ಮಾಡಲು ಅಶ್ವಿನ್ ಅವರಿಗೆ ಕೇವಲ ನಾಲ್ಕು ಎಸೆತಗಳು ಸಾಕಾಗಿದ್ದವು.

ರವಿಚಂದ್ರನ್ ಅಶ್ವಿನ್ ದಾಳಿಗಿಳಿದರೆ ಸಾಕು, ಕ್ರಿಸ್ ಗೇಲ್ ಅವರ ಕಾಲುಗಳು ನಡುಗುತ್ತಿದ್ದವು. ಅಶ್ವಿನ್ ಅಂತಹ ಪ್ರತಿಭಾವಂತ ಬೌಲರ್. ಅವರನ್ನು ಚಾಂಪಿಯನ್ ಬೌಲರ್ ಆಗಿ ಮಾಡಿದ್ದಕ್ಕಾಗಿ ಶ್ರೀಕಾಂತ್, ಎಂಎಸ್ ಧೋನಿ ಅವರನ್ನು ಶ್ಲಾಘಿಸಿದರು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಧೋನಿ ಟಿ20 ಕ್ರಿಕೆಟ್‌ನಲ್ಲಿ ಅಶ್ವಿನ್ ಅವರ ಪ್ರತಿಭೆಯನ್ನು ಗುರುತಿಸಿದರು. ಅಲ್ಲದೆ ಅವರನ್ನು ಮ್ಯಾಚ್ ವಿನ್ನರ್ ಬೌಲರ್ ಆಗಿ ರೂಪಿಸಿದರು. ನಂತರ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಶ್ರೇಷ್ಠತೆಯನ್ನು ತೋರಿಸಿದರು. ಅಶ್ವಿನ್ ಉತ್ತಮ ಬೌಲರ್ ಮಾತ್ರವಲ್ಲ, ಅತ್ಯುತ್ತಮ ಬ್ಯಾಟ್ಸ್‌ಮನ್ ಕೂಡ ಎಂದು ಶ್ರೀಕಾಂತ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕ್ರಿಸ್ ಗೇಲ್ vs ಅಶ್ವಿನ್:

ಐಪಿಎಲ್​ನಲ್ಲಿ ಕ್ರಿಸ್ ಗೇಲ್, ಅಶ್ವಿನ್ ಅವರ 64 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 53 ರನ್​ಗಳು ಮಾತ್ರ. ಅಂದರೆ ಅಶ್ವಿನ್ ವಿರುದ್ಧ ಗೇಲ್ ಅಬ್ಬರಿಸಿಯೇ ಇಲ್ಲ ಎನ್ನಬಹುದು.

ಏಕೆಂದರೆ ಅಶ್ವಿನ್ ವಿರುದ್ಧ ಕ್ರಿಸ್ ಗೇಲ್ ಅವರ ಸ್ಟ್ರೈಕ್ ರೇಟ್ ಕೇವಲ 82.8. ಹಾಗೆಯೇ 10.6 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ. ಇದರ ನಡುವೆ ಅಶ್ವಿನ್ 5 ಬಾರಿ ಕ್ರಿಸ್ ಗೇಲ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ಅತ್ಯುತ್ತಮ ಪ್ರತಿಸ್ಪರ್ಧಿಯಾಗಿ ಅಶ್ವಿನ್ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

ಇದೀಗ ರವಿಚಂದ್ರನ್ ಅಶ್ವಿನ್ ಅಶ್ವಿನ್ 10 ವರ್ಷಗಳ ನಂತರ ಚೆನ್ನೈ ಸೂಪರ್ ಕಿಂಗ್ಸ್​ಗೆ ಮರಳಲಿದ್ದಾರೆ. ಅನುಭವಿ ಆಲ್‌ರೌಂಡರ್ ಅವರನ್ನು ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿ 9.75 ಕೋಟಿ ರೂ.ಗೆ ಖರೀದಿಸಿದ್ದಾರೆ. ಹೀಗಾಗಿ ಈ ಬಾರಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ