IND vs ENG: ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ತಂಡದ ಸ್ಟಾರ್ ವೇಗಿಗೆ ಇಂಜುರಿ..! ಆಡುವುದು ಅನುಮಾನ

T20 World Cup 2022: ಮಾರ್ಕ್​ವುಡ್ ವೇಗದ ಎಸೆತಗಳಿಗೆ ಹೆಸರುವಾಸಿಯಾಗಿದ್ದು, ಈ ಟೂರ್ನಿಯಲ್ಲಿ 154.74kph ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ನಿರ್ಮಿಸಿದ್ದಾರೆ.

IND vs ENG: ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ತಂಡದ ಸ್ಟಾರ್ ವೇಗಿಗೆ ಇಂಜುರಿ..! ಆಡುವುದು ಅನುಮಾನ
ಮಾರ್ಕ್​ವುಡ್​ಗೆ ಇಂಜುರಿ
Follow us
TV9 Web
| Updated By: ಪೃಥ್ವಿಶಂಕರ

Updated on:Nov 10, 2022 | 12:33 PM

ಟಿ20 ವಿಶ್ವಕಪ್​ನ (T20 World Cup 2022) ಎರಡನೇ ಸೆಮಿಫೈನಲ್ ಪಂದ್ಯ ಇಂದು ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ( India and England) ನಡುವೆ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಅಡಿಲೇಡ್ ಮೈದಾನದಲ್ಲಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಹಣಾಹಣಿಯನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿರುವ ಪಂದ್ಯದತ್ತ ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಗಮನ ಹರಿಸಿದ್ದಾರೆ. ನಿನ್ನೆ ನಡೆದ ಸೆಮಿಫೈನಲ್‌ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಈಗಾಗಲೇ ಫೈನಲ್ ತಲುಪಿದೆ.

ಮಾರ್ಕ್​ವುಡ್​ಗೆ ಇಂಜುರಿ

ಇಂದು ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ವೇಗದ ಬೌಲರ್​ ಇಂಜುರಿಗೊಂಡಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ತಂಡದ ಪ್ರಮುಖ ಬೌಲರ್ ಮಾರ್ಕ್​ವುಡ್ ಗಾಯಗೊಂಡಿದ್ದು, ಅವರೀಗ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ESPN Cricinfo ವರದಿ ಮಾಡಿದೆ. ಮಾರ್ಕ್​ವುಡ್ ವಿಶ್ವಕಪ್‌ನಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು ಅದರಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಮಾರ್ಕ್​ವುಡ್ ವೇಗದ ಎಸೆತಗಳಿಗೆ ಹೆಸರುವಾಸಿಯಾಗಿದ್ದು, ಈ ಟೂರ್ನಿಯಲ್ಲಿ 154.74kph ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಒಂದು ವೇಳೆ ಮಾರ್ಕ್​ವುಡ್ ಇಂದಿನ ಪಂದ್ಯದಲ್ಲಿ ಆಡದೇ ಇದ್ದರೆ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಇದನ್ನೂ ಓದಿ: India vs England: ಹೈವೋಲ್ಟೇಜ್ ಸೆಮೀಸ್ ಪಂದ್ಯಕ್ಕೆ 1 ದೊಡ್ಡ ಬದಲಾವಣೆ: ಇಲ್ಲಿದೆ ಭಾರತದ ಸಂಭಾವ್ಯ ಪ್ಲೇಯಿಂಗ್ XI

ಜೋರ್ಡಾನ್​ಗೆ ಅವಕಾಶ?

ESPN Cricinfo ಪ್ರಕಾರ, ಇಂಗ್ಲೆಂಡ್ ತಂಡವು ಈಗಾಗಲೇ ಮಾರ್ಕ್​ವುಡ್ ಬದಲಿಗೆ ಇನ್ನೊಬ್ಬ ಆಟಗಾರನನ್ನು ಆಡಿಸಲು ತಯಾರಿ ನಡೆಸುತ್ತಿದೆ. ಇಂದಿನ ಪಂದ್ಯದಲ್ಲಿ ಕ್ರಿಸ್ ಜೋರ್ಡಾನ್​ಗೆ ಅವಕಾಶ ಸಿಗಲಿದೆ ಎಂದು ವರದಿಯಾಗಿದೆ. ಕುತೂಹಲಕಾರಿ ವಿಚಾರವೆಂದರೆ ಕ್ರಿಸ್ ಜೋರ್ಡಾನ್​ ಈ ವಿಶ್ವಕಪ್‌ನಲ್ಲಿ ಇನ್ನೂ ಒಂದೇ ಒಂದು ಪಂದ್ಯ ಆಡಿಲ್ಲ.

ಟೀಮ್ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಅಲೆಕ್ಸ್ ಹೇಲ್ಸ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Thu, 10 November 22

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ