Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಪಾಕಿಸ್ತಾನ್ ಪಂದ್ಯದ ಟಿಕೆಟ್ ಬೆಲೆ ಕೇಳಿದ್ರೆ ಹುಬ್ಬೇರಿಸುವುದು ಗ್ಯಾರಂಟಿ

ICC Champions Trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಆರಂಭವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅದರಂತೆ ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದ್ದು, ಉಳಿದ ಮ್ಯಾಚ್​ಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಈ ಟೂರ್ನಿಯ ಭಾರತದ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

ಭಾರತ vs ಪಾಕಿಸ್ತಾನ್ ಪಂದ್ಯದ ಟಿಕೆಟ್ ಬೆಲೆ ಕೇಳಿದ್ರೆ ಹುಬ್ಬೇರಿಸುವುದು ಗ್ಯಾರಂಟಿ
Ind Vs Pak
Follow us
ಝಾಹಿರ್ ಯೂಸುಫ್
|

Updated on: Feb 05, 2025 | 12:30 PM

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅದರಲ್ಲೂ ಈ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಕಾತುರತೆಯ ನಡುವೆಯೇ ಇದೀಗ ಇಂಡೊ-ಪಾಕ್ ಪಂದ್ಯದ ಟಿಕೆಟ್ ದರ ಲಕ್ಷವನ್ನು ದಾಟಿದೆ.

ಪಾಕಿಸ್ತಾನ್ ಮೂಲದ ಜಿಯೋ ನ್ಯೂಸ್ ವರದಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಟಿಕೆಟ್ ಬೆಲೆ 2,96,595 ಲಕ್ಷಕ್ಕೆ ಏರಿಕೆಯಾಗಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಟಿಕೆಟ್​ಗಾಗಿ ಭಾರೀ ಬೇಡಿಕೆಯಿದ್ದು, ಇದೀಗ ಗ್ರ್ಯಾಂಡ್ ಲೌಂಜ್ ಟಿಕೆಟ್ ದರಗಳು ಮೂರು ಲಕ್ಷದ ಅಸುಪಾಸಿಗೆ ತಲುಪಿದೆ. ಇನ್ನು ಪ್ಲಾಟಿನಂ ಟಿಕೆಟ್ ದರಗಳು 2 ಸಾವಿರ ದಿರ್ಹಮ್​ಗಿಂತಲೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 50 ಸಾವಿರ ರೂ.

ರೂಪಾಯಿ ಟು ದಿರ್ಹಮ್:

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ದುಬೈನಲ್ಲಿ ನಡೆಯಲಿರುವುದರಿಂದ ಐಸಿಸಿ ಈ ಪಂದ್ಯದ ಟಿಕೆಟ್​ಗಳನ್ನು ದಿರ್ಹಮ್​ ಮೌಲ್ಯದಲ್ಲಿ ಮಾರಾಟ ಮಾಡುತ್ತಿದೆ. ಹೀಗಾಗಿ ಭಾರತೀಯರ ಪಾಲಿಗೆ ಟಿಕೆಟ್ ಮತ್ತಷ್ಟು ದುಬಾರಿಯಾಗುತ್ತಿದೆ.

ಏಕೆಂದರೆ 1 ದಿರ್ಹಮ್​ನ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 23.74 ರೂ. ಹೀಗಾಗಿ ಈ ಬಾರಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವನ್ನು ವೀಕ್ಷಿಸಲು ಭಾರತೀಯರು ದಿರ್ಹಮ್ ಮೌಲ್ಯದಲ್ಲಿ ಟಿಕೆಟ್ ಖರೀದಿಸಬೇಕಾಗುತ್ತದೆ.

ಭಾರತ ಮತ್ತು ಪಾಕಿಸ್ತಾನ್ ಪಂದ್ಯ ಯಾವಾಗ?

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಟೀಮ್ ಇಂಡಿಯಾ ಫೆಬ್ರವರಿ 20 ರಂದು ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಇನ್ನು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಫೆಬ್ರವರಿ 23 ರಂದು ಮುಖಾಮುಖಿಯಾಗಲಿದೆ. ಈ ಪಂದ್ಯವು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಭಾರತ ತಂಡವು ಮಾರ್ಚ್​ 2 ರಂದು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ.

ಇಂಡೊ-ಪಾಕ್ ತಂಡಗಳು:

ಪಾಕಿಸ್ತಾನ್ ತಂಡ: ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಝ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಇದನ್ನೂ ಓದಿ: ಬ್ರಾವೊ ವಿಶ್ವ ದಾಖಲೆ ಬೌಲ್ಡ್: ಹೊಸ ಇತಿಹಾಸ ನಿರ್ಮಿಸಿದ ರಶೀದ್ ಖಾನ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.