
ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅದರಲ್ಲೂ ಈ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಕಾತುರತೆಯ ನಡುವೆಯೇ ಇದೀಗ ಇಂಡೊ-ಪಾಕ್ ಪಂದ್ಯದ ಟಿಕೆಟ್ ದರ ಲಕ್ಷವನ್ನು ದಾಟಿದೆ.
ಪಾಕಿಸ್ತಾನ್ ಮೂಲದ ಜಿಯೋ ನ್ಯೂಸ್ ವರದಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಟಿಕೆಟ್ ಬೆಲೆ 2,96,595 ಲಕ್ಷಕ್ಕೆ ಏರಿಕೆಯಾಗಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಟಿಕೆಟ್ಗಾಗಿ ಭಾರೀ ಬೇಡಿಕೆಯಿದ್ದು, ಇದೀಗ ಗ್ರ್ಯಾಂಡ್ ಲೌಂಜ್ ಟಿಕೆಟ್ ದರಗಳು ಮೂರು ಲಕ್ಷದ ಅಸುಪಾಸಿಗೆ ತಲುಪಿದೆ. ಇನ್ನು ಪ್ಲಾಟಿನಂ ಟಿಕೆಟ್ ದರಗಳು 2 ಸಾವಿರ ದಿರ್ಹಮ್ಗಿಂತಲೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 50 ಸಾವಿರ ರೂ.
ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ದುಬೈನಲ್ಲಿ ನಡೆಯಲಿರುವುದರಿಂದ ಐಸಿಸಿ ಈ ಪಂದ್ಯದ ಟಿಕೆಟ್ಗಳನ್ನು ದಿರ್ಹಮ್ ಮೌಲ್ಯದಲ್ಲಿ ಮಾರಾಟ ಮಾಡುತ್ತಿದೆ. ಹೀಗಾಗಿ ಭಾರತೀಯರ ಪಾಲಿಗೆ ಟಿಕೆಟ್ ಮತ್ತಷ್ಟು ದುಬಾರಿಯಾಗುತ್ತಿದೆ.
ಏಕೆಂದರೆ 1 ದಿರ್ಹಮ್ನ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 23.74 ರೂ. ಹೀಗಾಗಿ ಈ ಬಾರಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವನ್ನು ವೀಕ್ಷಿಸಲು ಭಾರತೀಯರು ದಿರ್ಹಮ್ ಮೌಲ್ಯದಲ್ಲಿ ಟಿಕೆಟ್ ಖರೀದಿಸಬೇಕಾಗುತ್ತದೆ.
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಟೀಮ್ ಇಂಡಿಯಾ ಫೆಬ್ರವರಿ 20 ರಂದು ಕಣಕ್ಕಿಳಿಯುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಫೆಬ್ರವರಿ 23 ರಂದು ಮುಖಾಮುಖಿಯಾಗಲಿದೆ. ಈ ಪಂದ್ಯವು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಭಾರತ ತಂಡವು ಮಾರ್ಚ್ 2 ರಂದು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ.