T20 World Cup 2024: ಟಿ20 ವಿಶ್ವಕಪ್‌ಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಪ್ರಕಟ
T20 World Cup 2024: 2024ರ ಟಿ20 ವಿಶ್ವಕಪ್‌ಗೆ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ತಂಡದ ನಾಯಕತ್ವವನ್ನು ಸ್ಫೋಟಕ ಬ್ಯಾಟರ್ ರೋವ್‌ಮನ್ ಪೊವೆಲ್‌ಗೆ ಹಸ್ತಾಂತರಿಸಲಾಗಿದೆ. ತಂಡದ ಉಪ ನಾಯಕತ್ವದ ಜವಾಬ್ದಾರಿಯನ್ನು ಅಲ್ಜಾರಿ ಜೋಸೆಫ್ಗೆ ನೀಡಲಾಗಿದೆ.

2024ರ ಟಿ20 ವಿಶ್ವಕಪ್‌ಗೆ (T20 World Cup 2024) ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ (West Indies) ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ತಂಡದ ನಾಯಕತ್ವವನ್ನು ಸ್ಫೋಟಕ ಬ್ಯಾಟರ್ ರೋವ್‌ಮನ್ ಪೊವೆಲ್‌ಗೆ (Rovman Powell) ಹಸ್ತಾಂತರಿಸಲಾಗಿದೆ. ತಂಡದ ಉಪ ನಾಯಕತ್ವದ ಜವಾಬ್ದಾರಿಯನ್ನು ಅಲ್ಜಾರಿ ಜೋಸೆಫ್ಗೆ ನೀಡಲಾಗಿದೆ. ಅಲ್ಲದೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್‌ನಲ್ಲಿ ಯಾವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೋ ಅವರೆಲ್ಲರಿಗೂ ಈ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇದಲ್ಲದೆ ಹಲವು ಸ್ಟಾರ್ ಆಟಗಾರರಿಗೂ ತಂಡದಲ್ಲಿ ಅವಕಾಶ ಸಿಕ್ಕಿದೆ. ಈ ಬಾರಿಯ ಟೂರ್ನಿಯನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಕಾರಣ ತಾಯ್ನಾಡಿನಲ್ಲಿ ದಾಖಲೆಯ ಮೂರನೇ ಬಾರಿಗೆ ಚಾಂಪಿಯನ್ ಪಟ್ಟದ ಮೇಲೆ ವಿಂಡೀಸ್ ಕಣ್ಣಿಟ್ಟಿದೆ.
ವೆಸ್ಟ್ ಇಂಡೀಸ್ ತಂಡ ಹೀಗಿದೆ: ರೋವ್ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರುದರ್ಫೋರ್ಡ್, ರೊಮಾರಿಯೋ ಶೆಫರ್ಡ್.
Your #MenInMaroon for the 2024 Men’s T20 World Cup! 🌴🏆#WIREADY | #T20WC pic.twitter.com/uyS1zoDZeg
— Windies Cricket (@windiescricket) May 3, 2024
ಸಿ ಗುಂಪಿನಲ್ಲಿ ವಿಂಡೀಸ್ ತಂಡ
2024ರ ಟಿ20 ವಿಶ್ವಕಪ್‌ನಲ್ಲಿ ಬರೋಬ್ಬರಿ 20 ತಂಡಗಳು ಪಾಲ್ಗೊಳ್ಳುತ್ತಿವೆ. ಈ ಇಪ್ಪತ್ತು ತಂಡಗಳ ನಡುವೆ 55 ಪಂದ್ಯಗಳು ನಡೆಯಲಿವೆ. ಈ ಎಲ್ಲ ತಂಡಗಳನ್ನು ತಲಾ 5ರಂತೆ 4 ಗುಂಪುಗಳಾಗಿ ವಿಂಗಡಿಸಲಾಗಿದೆ. ವೆಸ್ಟ್ ಇಂಡೀಸ್ ತಂಡ ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಉಗಾಂಡಾ ಮತ್ತು ಪಪುವಾ ನ್ಯೂಗಿನಿಯಾ ತಂಡಗಳು ಸೇರಿವೆ. ವೆಸ್ಟ್ ಇಂಡೀಸ್ ತನ್ನ ಮೊದಲ ಪಂದ್ಯದಲ್ಲಿ ಪಪುವಾ ನ್ಯೂಗಿನಿ ತಂಡವನ್ನು ಎದುರಿಸಲಿದೆ. ಈ ಪಂದ್ಯ ಗಯಾನಾದಲ್ಲಿ ನಡೆಯಲಿದೆ.
T20 World Cup 2024: ಅಮೆರಿಕಕ್ಕೆ ಹಾರಲಿದೆ ಪ್ರಮುಖ 6 ಆಟಗಾರರ ಮೊದಲ ಬ್ಯಾಚ್
4 ಗುಂಪುಗಳು ಹೀಗಿವೆ
ಗುಂಪು ಎ: ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಅಮೆರಿಕ
ಗುಂಪು ಬಿ: ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಓಮನ್
ಗುಂಪು ಸಿ: ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡಾ, ಪಪುವಾ ನ್ಯೂ ಗಿನಿಯಾ
ಗುಂಪು ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್, ನೇಪಾಳ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
