AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ದು ಕೆಟ್ಟ ತಂಡವಲ್ಲ, ಇದು ಬದಲಾವಣೆ ಅಷ್ಟೇ: ಗೌತಮ್ ಗಂಭೀರ್!

ಕೆಲವೇ ತಿಂಗಳುಗಳ ಹಿಂದೆ ಟಿ20 ವಿಶ್ವಕಪ್ ಗೆದ್ದು ಬೀಗಿದ್ದ ಭಾರತೀಯ ಕ್ರಿಕೆಟ್ ತಂಡ, ಈಗ ದಿಢೀರನೆ ಸತತ ಸೋಲುಗಳ ಸುಳಿಗೆ ಸಿಲುಕಿರುವುದು ಇಡೀ ಕ್ರೀಡಾ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದೆ. ಯುಕೆ ಪ್ರವಾಸದಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಲ್ಲಿ ಅನುಭವಿಸಿದ ಭಾರಿ ಮುಖಭಂಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ನಮ್ದು ಕೆಟ್ಟ ತಂಡವಲ್ಲ, ಇದು ಬದಲಾವಣೆ ಅಷ್ಟೇ: ಗೌತಮ್ ಗಂಭೀರ್!
Gautam GambhirImage Credit source: x.com
ಝಾಹಿರ್ ಯೂಸುಫ್
|

Updated on: Jul 11, 2026 | 2:10 PM

Share

ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ್ದ ಟೀಮ್ ಇಂಡಿಯಾ, ಇದೀಗ ವಿದೇಶದಲ್ಲಿ ಸತತ ಸೋಲುಗಳ ಸುಳಿಗೆ ಸಿಲುಕಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಲ್ಲಿ ಅನುಭವಿಸಿದ ಭಾರಿ ಹಿನ್ನಡೆ, ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 76 ರನ್‌ಗಳಿಗೆ ಆಲೌಟ್ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಚರ್ಚೆಗಳ ನಡುವೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ನಮ್ದು ಕೆಟ್ಟ ತಂಡವಲ್ಲ, ಇದು ಬದಲಾವಣೆಯ ಪ್ರಕ್ರಿಯೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೌತಮ್ ಗಂಭೀರ್, ಅಭಿಮಾನಿಗಳು ಮತ್ತು ವಿಮರ್ಶಕರಲ್ಲಿ ತಾಳ್ಮೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಜಸ್ಪ್ರಿತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಪ್ರಮುಖ ಮ್ಯಾಚ್ ವಿನ್ನರ್‌ಗಳು ಸದ್ಯದ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲ.

ಭವಿಷ್ಯದ ದೃಷ್ಟಿಯಿಂದ 15 ವರ್ಷದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಮತ್ತು ತಮ್ಮ ಎರಡನೇ ಟಿ20 ಪಂದ್ಯವಾಡುತ್ತಿರುವ ವೇಗಿ ಪ್ರಿನ್ಸ್ ಯಾದವ್ ಅವರಂತಹ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ.

ತಂಡವು ದೊಡ್ಡ ಸ್ಕೋರ್ ಕಲೆಹಾಕುವ ನಿಟ್ಟಿನಲ್ಲಿ ಭಯವಿಲ್ಲದ, ಹೆಚ್ಚಿನ ರಿಸ್ಕ್ ಒಳಗೊಂಡ ಆಟದ ಶೈಲಿಯನ್ನು ಅಳವಡಿಸಿಕೊಂಡಿದೆ. ಇಂತಹ ಶೈಲಿಯಲ್ಲಿ ಆರಂಭದಲ್ಲಿ ವೈಫಲ್ಯಗಳು ಸಹಜ ಎಂದು ಗೌತಮ್ ಗಂಭೀರ್ ಸ್ಪಷ್ಟಪಡಿಸಿದ್ದಾರೆ.

ಐರ್ಲೆಂಡ್ ಪ್ರವಾಸದಿಂದಲೂ ತಂಡವು ಪಿಚ್ ಪರಿಸ್ಥಿತಿ ಮತ್ತು ಮೈದಾನದ ಆಯಾಮಗಳನ್ನು ಸರಿಯಾಗಿ ಗ್ರಹಿಸುವಲ್ಲಿ ತಪ್ಪು ಮಾಡಿದೆ ಎಂಬುದನ್ನು ಒಪ್ಪಿಕೊಂಡ ಗಂಭೀರ್, ಮುಂಬರುವ ದಿನಗಳಲ್ಲಿ ಇದನ್ನು ಸುಧಾರಿಸುವುದಾಗಿ ಹೇಳಿದ್ದಾರೆ.

ಪರಿವರ್ತನೆಯ ಹಂತ!

ಕೋಚ್ ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾದ ಈ ಸೋಲನ್ನು ಪರಿವರ್ತನೆಯ ಹಂತ ಎಂದು ವಿಶ್ಲೇಷಿಸಿದ್ದಾರೆ. ಇದಾಗ್ಯೂ ಭಾರತ ತಂಡದ ಒಳಗೆ ಮತ್ತು ಹೊರಗೆ ಪರಿಸ್ಥಿತಿ ಅಂದುಕೊಂಡಂತೆ ಇಲ್ಲ ಎಂಬುದೇ ಸತ್ಯ.

ಏಕೆಂದರೆ ಕೋಚ್ ಅವರ ಶಾಂತ ಹೇಳಿಕೆಗೆ ವಿರುದ್ಧವಾಗಿ ಪ್ರತಿಕ್ರಿಯಿಸಿರುವ ಟಿ20 ನಾಯಕ ಶ್ರೇಯಸ್ ಅಯ್ಯರ್, ತಂಡದ ಸತತ ಬ್ಯಾಟಿಂಗ್ ಕುಸಿತವನ್ನು “ಅತಿ ಘೋರ ಮತ್ತು ಒಪ್ಪಿಕೊಳ್ಳಲು ಅಸಾಧ್ಯ” ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಈ ವ್ಯತಿರಿಕ್ತ ಹೇಳಿಕೆಗಳು ಕೂಡ ಚರ್ಚೆಗೆ ಕಾರಣವಾಗಿದ್ದು, ಇಲ್ಲಿ ಕೋಚ್ ಹಾಗೂ ನಾಯಕನ ನಡುವೆ ಹೊಂದಾಣಿಕೆ ಇಲ್ಲವಾ ಎಂಬ ಪ್ರಶ್ನೆಯೊಂದನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: 6,6,6,6,6,6,6,4: ದಾಖಲೆಯ ಹಾಫ್ ಸೆಂಚುರಿ ಸಿಡಿಸಿದ ವೈದ್ಯಕೀಯ ವಿದ್ಯಾರ್ಥಿ!

ಒಟ್ಟಾರೆಯಾಗಿ, ಗೌತಮ್ ಗಂಭೀರ್ ಅವರ ಈ ‘ಮರು ನಿರ್ಮಾಣ’ ಪ್ರಯೋಗವು ಸದ್ಯಕ್ಕೆ ದೊಡ್ಡ ಟೀಕೆಗಳಿಗೆ ಗುರಿಯಾಗಿದ್ದರೂ, ಭಾರತೀಯ ಕ್ರಿಕೆಟ್‌ನ ಭವಿಷ್ಯದ ದೃಷ್ಟಿಯಿಂದ ಇದು ಮಹತ್ವದ ಹೆಜ್ಜೆಯಾಗಿದೆ. ಯುವ ಆಟಗಾರರ ಸಾಮರ್ಥ್ಯದ ಮೇಲಿಟ್ಟಿರುವ ಈ ಭರವಸೆ ನಿಜವಾಗುತ್ತದೆಯೇ ಅಥವಾ ಬಿಸಿಸಿಐನ ಕಠಿಣ ನಿರ್ಧಾರಗಳಿಗೆ ಹಾದಿ ಮಾಡಿಕೊಡುತ್ತದೆಯೇ ಎಂಬುದನ್ನು ಮುಂಬರುವ ಪಂದ್ಯಗಳೇ ನಿರ್ಧರಿಸಲಿವೆ. ಅಲ್ಲಿಯವರೆಗೆ, ಟೀಮ್ ಇಂಡಿಯಾ ಈ ಕಠಿಣ ಪರಿಸ್ಥಿತಿಯಿಂದ ಹೇಗೆ ಹೊರಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ