AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾನ ‘ಡುಮ್ಮ’ ಎಂದು ಕರೆದ ಕಾಂಗ್ರೆಸ್ ನಾಯಕಿ..!

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರುದ್ಧ ಕೇರಳದ ಕಣ್ಣೂರಿನ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ನಾಲಿಗೆ ಹರಿಬಿಟ್ಟಿದ್ದಾರೆ. ಅದು ಸಹ ಬಾಡಿ ಶೇಮಿಂಗ್ ಮಾಡುವ ಮೂಲಕ. ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿಫಲರಾಗಿರುವ ರೋಹಿತ್ ಶರ್ಮಾ ಅವರನ್ನು ಪ್ರದರ್ಶನವನ್ನು ವಿಮರ್ಶಿಸಿ ಕಾಂಗ್ರೆಸ್ ನಾಯಕಿ ಮಾಡಿದ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ರೋಹಿತ್ ಶರ್ಮಾನ 'ಡುಮ್ಮ' ಎಂದು ಕರೆದ ಕಾಂಗ್ರೆಸ್ ನಾಯಕಿ..!
Rohit Sharma - Shama
ಝಾಹಿರ್ ಯೂಸುಫ್
|

Updated on: Mar 03, 2025 | 1:54 PM

Share

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಡುಮ್ಮ ಎಂದು ಕರೆದು ಕಾಂಗ್ರೆಸ್ ಪಕ್ಷದ ನಾಯಕಿ ಡಾ. ಶಮಾ ಮೊಹಮ್ಮದ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್​ನಲ್ಲಿ ರೋಹಿತ್ ಶರ್ಮಾ ಅವರ ದೇಹದ ಬಗ್ಗೆ ಪ್ರಸ್ತಾಪಿಸಿದ ಶಮಾ, ಹಿಟ್​ಮ್ಯಾನ್ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿರುವ ಶಮಾ ಮೊಹಮ್ಮದ್ ಅವರ ಈ ಹೇಳಿಕೆಗೆ ಇದೀಗ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪವನ್ ಖೇರಾ ಸೂಚಿಸಿದ್ದು, ಅದರಂತೆ ಇದೀಗ ಬಾಡಿ ಶೇಮಿಂಗ್ ಬರಹವನ್ನು ಸಾಮಾಜಿಕ ಜಾಲತಾಣದಿಂದ ಅಳಿಸಿ ಹಾಕಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಪವನ್ ಖೇರಾ, ತಮ್ಮ ಪಕ್ಷದ ರಾಷ್ಟ್ರೀಯ ವಕ್ತಾರೆ ಡಾ. ಶಮಾ ಮೊಹಮ್ಮದ್ ಅವರು ದಿಗ್ಗಜ ಕ್ರಿಕೆಟಿಗನ ಬಗ್ಗೆ ಮಾಡಿದ ಕಾಮೆಂಟ್‌ಗಳು ಪಕ್ಷದ ಅಧಿಕೃತ ದೃಷ್ಟಿಕೋನವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್​ ಅನ್ನು ಅಳಿಸಿ ಹಾಕುವಂತೆ ಈಗಾಗಲೇ ಸೂಚಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಪೋಸ್ಟ್‌ಗಳನ್ನು ಹಾಕದಂತೆ ಸಲಹೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್, ಪಕ್ಷವು ಯಾರಿಗೂ ಇಂತಹ ಅಸಭ್ಯ ಹೇಳಿಕೆಗಳನ್ನು ನೀಡಲು ಅವಕಾಶ ನೀಡುವುದಿಲ್ಲ. ಪಕ್ಷದ ವಕ್ತಾರರಾಗಿ ಅವರು ಹೀಗೆ ಹೇಳಬಾರದಿತ್ತು. ಈ ವಿಷಯದಲ್ಲಿ ಪಕ್ಷವು ಖಂಡಿತವಾಗಿಯೂ ಅವರಿಂದ ಉತ್ತರವನ್ನು ಬಯಸುತ್ತದೆ ಎಂದು ತಿಳಿಸಿದ್ದಾರೆ.

ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 17 ಎಸೆತಗಳಲ್ಲಿ 15 ರನ್ ಬಾರಿಸಿ ಔಟಾಗಿದ್ದರು. ಹೀಗೆ ನಿರಾಯಾಸವಾಗಿ ವಿಕೆಟ್ ಒಪ್ಪಿಸಿದ ರೋಹಿತ್ ಶರ್ಮಾ ಅವರ ಪ್ರದರ್ಶನವನ್ನು ವಿಮರ್ಶಿಸಿ ಶಮಾ ಮೊಹಮ್ಮದ್ ಎಕ್ಸ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

ರೋಹಿತ್ ಶರ್ಮಾ ತುಂಬಾ ದಪ್ಪಗಿರುವ ಕ್ರೀಡಾಪಟು! ತೂಕ ಇಳಿಸಿಕೊಳ್ಳಬೇಕು! ಖಂಡಿತವಾಗಿಯೂ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಹೇಳುವೆ ಎಂದು ಶಮಾ ಮೊಹಮ್ಮದ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

ಇದನ್ನೂ ಓದಿ: IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

ಇದರ ಬೆನ್ನಲ್ಲೇ, ಹಿಂದಿನ ಆಟಗಾರರಿಗೆ ಹೋಲಿಸಿದರೆ ಅವರಲ್ಲಿ ವಿಶ್ವ ದರ್ಜೆಯದ್ದೇನಿದೆ? ಅವರು ಸಾಧಾರಣ ನಾಯಕ ಮತ್ತು ಭಾರತ ತಂಡದ ನಾಯಕನಾಗಲು ಅದೃಷ್ಟ ಪಡೆದ ಸಾಧಾರಣ ಆಟಗಾರ ಎಂದು ಮತ್ತೊಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು. ಶಮಾ ಮೊಹಮ್ಮದ್ ಅವರ ಈ ಪೋಸ್ಟ್​ಗಳು ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಅವರು ಪೋಸ್ಟ್​ಗಳನ್ನು ಡಿಲೀಟ್ ಮಾಡಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್