ಕೂಚ್ ಬೆಹಾರ್ ಟ್ರೋಫಿ ಫೈನಲ್​ನಲ್ಲಿ ಅಜೇಯ 404 ರನ್ ಸಿಡಿಸಿ ಇತಿಹಾಸ ಸೃಷ್ಟಿಸಿದ ಕನ್ನಡಿಗ ಪ್ರಖರ್ ಚತುರ್ವೇದಿ..!

Cooch Behar Trophy: ಬೆಂಗಳೂರಿನ ಕೆಎಸ್​ಸಿಎ ಮೈದಾನದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈ ನಡುವಿನ ಕೂಚ್ ಬೆಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಆರಂಭಿಕ ಆಟಗಾರ ಪ್ರಖರ್ ಚತುರ್ವೇದಿ ಏಕಾಂಗಿಯಾಗಿ 400 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಕೂಚ್ ಬೆಹಾರ್ ಟ್ರೋಫಿ ಫೈನಲ್​ನಲ್ಲಿ ಅಜೇಯ 404 ರನ್ ಸಿಡಿಸಿ ಇತಿಹಾಸ ಸೃಷ್ಟಿಸಿದ ಕನ್ನಡಿಗ ಪ್ರಖರ್ ಚತುರ್ವೇದಿ..!
ಪ್ರಖರ್ ಚತುರ್ವೇದಿ
Follow us
|

Updated on:Jan 15, 2024 | 5:27 PM

ಬೆಂಗಳೂರಿನ ಕೆಎಸ್​ಸಿಎ ಮೈದಾನದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈ (Karnataka vs Mumbai) ನಡುವಿನ ಕೂಚ್ ಬೆಹಾರ್ ಟ್ರೋಫಿಯ (Cooch Behar Trophy) ಫೈನಲ್ ಪಂದ್ಯದಲ್ಲಿ ಕರ್ನಾಟಕದ ಆರಂಭಿಕ ಆಟಗಾರ ಪ್ರಖರ್ ಚತುರ್ವೇದಿ (Prakhar Chaturvedi) ಏಕಾಂಗಿಯಾಗಿ 400 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೂಲಕ ಈ ಟೂರ್ನಿಯ ಇತಿಹಾಸದಲ್ಲಿ ಇಲ್ಲಿಯವರೆಗೆ ಆಡಿದ ಫೈನಲ್‌ ಪಂದ್ಯದಲ್ಲಿ 400ಕ್ಕೂ ಅಧಿಕ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 380 ರನ್ ಕಲೆಹಾಕಿತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಪ್ರಖರ್ ಚತುರ್ವೇದಿ ಅವರ 404 ರನ್ ಹಾಗೂ ಹರ್ಷಿಲ್ ಧರ್ಮನಿ ಅವರ 169 ರನ್​ಗಳ ಆಧಾರದ ಮೇಲೆ 8 ವಿಕೆಟ್ ನಷ್ಟಕ್ಕೆ 890 ರನ್ ಕಲೆಹಾಕಿತು. ಅಂತಿಮವಾಗಿ ಫೈನಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದ್ದು, ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

380 ರನ್​ಗಳಿಗೆ ಮುಂಬೈ ಆಲೌಟ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಕರ್ನಾಟಕ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಇನ್ನಿಂಗ್ಸ್ ಆರಂಭಿಸಿದ ಮುಂಬೈ ತಂಡದ ಪರ ಆರಂಭಿಕ ಆಯುಷ್ ಮ್ಹಾತ್ರೆ 145 ರನ್​ಗಳ ಇನ್ನಿಂಗ್ಸ್ ಆಡಿದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನೂತನ್ 44 ರನ್​ಗಳ ಕೊಡುಗೆ ನೀಡಿದರು. ಹಾಗೆಯೇ ಆರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ಆಯುಷ್ ಸಚಿನ್ ವರ್ತಕ್ 73 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂವರಲ್ಲದೆ ತಂಡದ ಇತರರ ಬ್ಯಾಟಿಂಗ್ ಆಧಾರದ ಮೇಲೆ ಮುಂಬೈ ತಂಡ 380 ರನ್​ಗಳಿಗೆ ಆಲೌಟ್ ಆಗಿ ಮೊದಲ ಇನ್ನಿಂಗ್ಸ್ ಮುಗಿಸಿತು.

169 ರನ್ ಸಿಡಿಸಿದ ಹರ್ಷಿಲ್ ಧರ್ಮನಿ

380 ರನ್​ಗಳಿಗೆ ಮುಂಬೈ ತಂಡವನ್ನು ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಪ್ರಖರ್ ಕೊನೆಯವರೆಗೂ ಅಜೇಯರಾಗಿ ಉಳಿದು ಬರೋಬ್ಬರಿ 404 ರನ್ ಕಲೆಹಾಕಿದರು. ಇವರೊಂದಿಗೆ ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿದಿದ್ದ ಕಾರ್ತಿಕ್ ಎಸ್ ಯು ಕೂಡ 50 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಇಬ್ಬರು ಮೊದಲ ವಿಕೆಟ್​ಗೆ 109 ರನ್​ಗಳ ಜೊತೆಯಾಟ ಹಂಚಿಕೊಂಡರು. ಮೊದಲ ವಿಕೆಟ್ ಪತನದ ಬಳಿಕ ಜೊತೆಯಾದ ಪ್ರಖರ್ ಹಾಗೂ ಹರ್ಷಿಲ್ ಧರ್ಮನಿ ತಲಾ ಶತಕ ಸಿಡಿಸುವ ಮೂಲಕ ತಂಡವನ್ನು 399 ರನ್​ಗಳಿಗೆ ಕೊಂಡೊಯ್ದರು. ಈ ವೇಳೆ 169 ರನ್ ಕಲೆಹಾಕಿದ್ದ ಹರ್ಷಿಲ್ ವಿಕೆಟ್ ಪತನವಾಯಿತು.

ದಾಖಲೆಯ 890 ರನ್

ಹರ್ಷಿಲ್ ನಂತರ ಬಂದ ಕಾರ್ತಿಕೇಯ ಕೂಡ ಪ್ರಖರ್ ಜೊತೆ ಅದ್ಭುತ ಜೊತೆಯಾಟ ನಡೆಸಿದರು. ಹಾಗೆಯೇ ವೈಯಕ್ತಿಕವಾಗಿ 72 ರನ್​ಗಳ ಕೊಡುಗೆ ಸಹ ನೀಡಿದರು. ಇನ್ನು 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ರಾಜ್ 51 ರನ್ ಹಾಗೂ 10ನೇ ಕ್ರಮಾಂಕದಲ್ಲಿ ಆಡಿದ ಸಮರ್ಥ್​ ಅಜೇಯ 55 ರನ್ ಕಲೆಹಾಕುವ ಮೂಲಕ ಪ್ರಖರ್​ಗೆ ಉತ್ತಮ ಸಾಥ್ ನೀಡಿದರು. ಹೀಗಾಗಿ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ದಾಖಲೆಯ 890 ರನ್ ಕಲೆಹಾಕಿತು.

638 ಎಸೆತಗಳಲ್ಲಿ 404 ರನ್

ಈ ಪಂದ್ಯದಲ್ಲಿ ಪ್ರಖರ್ ಚತುರ್ವೇದಿ 638 ಎಸೆತಗಳನ್ನು ಅಂದರೆ ಬರೋಬ್ಬರಿ 106 ಓವರ್​ಗಳನ್ನುಎದುರಿಸಿ 46 ಬೌಂಡರಿ ಹಾಗೂ 3 ಸಿಕ್ಸರ್‌ಗ ಒಳಗೊಂಡಂತೆ 404 ರನ್ ಗಳಿಸಿದರು. ಕರ್ನಾಟಕದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಪ್ರಖರ್ ಚತುರ್ವೇದಿ ಇಡೀ ಇನ್ನಿಂಗ್ಸ್ ಆಡಿದಲ್ಲದೆ ಕೊನೆಯವರೆಗೂ ಅಜೇಯರಾಗಿ ಉಳಿದರು ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Mon, 15 January 24

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ