AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಸಿಕ್ಸ್, 6 ಫೋರ್: ಪೂರನ್ ಸಿಡಿಲಬ್ಬರಕ್ಕೆ ಎದುರಾಳಿ ತಂಡ ತತ್ತರ

CPL 2024: ನಿಕೋಲಸ್ ಪೂರನ್ ಅವರ ಈ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 18.3 ಓವರ್​ಗಳಲ್ಲಿ 197 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಹಂತಕ್ಕೇರಿದೆ.

7 ಸಿಕ್ಸ್, 6 ಫೋರ್: ಪೂರನ್ ಸಿಡಿಲಬ್ಬರಕ್ಕೆ ಎದುರಾಳಿ ತಂಡ ತತ್ತರ
Nicholas Pooran
ಝಾಹಿರ್ ಯೂಸುಫ್
|

Updated on: Sep 23, 2024 | 11:40 AM

Share

ಕೆರಿಬಿಯನ್ ಪ್ರೀಮಿಯರ್ ಲೀಗ್​​ನ 25ನೇ ಪಂದ್ಯದಲ್ಲಿ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಆಂಡ್ರೆ ಫ್ಲೆಚರ್ ಹಾಗೂ ಕೈಲ್ ಮೇಯರ್ಸ್ ಸ್ಪೋಟಕ ಇನಿಂಗ್ಸ್ ಆಡಿದ್ದರು. ಆರಂಭಿಕನಾಗಿ ಕಣಕ್ಕಿಳಿದ ಫ್ಲೆಚರ್ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ಎಸೆತಗಳಲ್ಲಿ 93 ರನ್​ ಚಚ್ಚಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೈಲ್ ಮೇಯರ್ಸ್ ಟ್ರಿನ್​ಬಾಗೊ ನೈಟ್ ರೈಡರ್ಸ್ ಬೌಲರ್​ಗಳ ಬೆಂಡೆತ್ತಿದರು.

ಕೇವಲ 30 ಎಸೆತಗಳನ್ನು ಎದುರಿಸಿದ ಕೈಲ್ ಮೇಯರ್ಸ್ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಈ ಮೂಲಕ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿತು.

194 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಜೇಸನ್ ರಾಯ್ ಬಿರುಸಿನ  ಆರಂಭ ನೀಡಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ರಾಯ್ 34 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 64 ರನ್ ಬಾರಿಸಿ ಬೃಹತ್ ಮೊತ್ತದ ಚೇಸಿಂಗ್​ಗೆ ಭದ್ರ ಅಡಿಪಾಯ ಹಾಕಿಕೊಟ್ಟರು.

ಇದಾದ ಬಳಿಕ ಕಣಕ್ಕಿಳಿದ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಪೂರನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.  ಅಲ್ಲದೆ ಕೇವಲ 43 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 93 ರನ್​ ಸಿಡಿಸಿದರು.

ನಿಕೋಲಸ್ ಪೂರನ್ ವಿಡಿಯೋ;

ನಿಕೋಲಸ್ ಪೂರನ್ ಅವರ ಈ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 18.3 ಓವರ್​ಗಳಲ್ಲಿ 197 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಹಂತಕ್ಕೇರಿದೆ.

ಟ್ರಿನ್​ಬಾಗೊ ನೈಟ್ ರೈಡರ್ಸ್ ಪ್ಲೇಯಿಂಗ್ 11: ಜೇಸನ್ ರಾಯ್ , ಕೀಸಿ ಕಾರ್ಟಿ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಕೀರನ್ ಪೊಲಾರ್ಡ್ (ನಾಯಕ) , ಆಂಡ್ರೆ ರಸೆಲ್ , ಟಿಮ್ ಡೇವಿಡ್ , ಅಕೇಲ್ ಹೊಸೈನ್ , ಕ್ರಿಸ್ ಜೋರ್ಡನ್ , ಜೇಡನ್ ಸೀಲ್ಸ್ , ವಕಾರ್ ಸಲಾಮ್ಖೈಲ್ , ಡ್ವೇನ್ ಬ್ರಾವೋ.

ಇದನ್ನೂ ಓದಿ: IPL 2025: CSK ತಂಡ ಉಳಿಸಿಕೊಳ್ಳುವ ಐವರು ಆಟಗಾರರು ಇವರಂತೆ..!

ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪ್ಲೇಯಿಂಗ್ 11: ಎವಿನ್ ಲೂಯಿಸ್ , ಆಂಡ್ರೆ ಫ್ಲೆಚರ್ (ನಾಯಕ) , ಕೈಲ್ ಮೇಯರ್ಸ್ , ರಿಲೀ ರೋಸೌ , ಮೈಕೈಲ್ ಲೂಯಿಸ್ , ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್) , ಜೋಶ್ ಕ್ಲಾರ್ಕ್ಸನ್ , ತಬ್ರೈಜ್ ಶಮ್ಸಿ , ಅನ್ರಿಕ್ ನೋಕಿಯಾ, ಆಶ್ಮೀಡ್ ನೆಡ್ , ಜೆರೆಮಿಯಾ ಲೂಯಿಸ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು