ಕೆರಿಬಿಯನ್ ಪ್ರೀಮಿಯರ್ ಲೀಗ್ನ 25ನೇ ಪಂದ್ಯದಲ್ಲಿ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಇನಿಂಗ್ಸ್ ಆರಂಭಿಸಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಆಂಡ್ರೆ ಫ್ಲೆಚರ್ ಹಾಗೂ ಕೈಲ್ ಮೇಯರ್ಸ್ ಸ್ಪೋಟಕ ಇನಿಂಗ್ಸ್ ಆಡಿದ್ದರು. ಆರಂಭಿಕನಾಗಿ ಕಣಕ್ಕಿಳಿದ ಫ್ಲೆಚರ್ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 61 ಎಸೆತಗಳಲ್ಲಿ 93 ರನ್ ಚಚ್ಚಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೈಲ್ ಮೇಯರ್ಸ್ ಟ್ರಿನ್ಬಾಗೊ ನೈಟ್ ರೈಡರ್ಸ್ ಬೌಲರ್ಗಳ ಬೆಂಡೆತ್ತಿದರು.
ಕೇವಲ 30 ಎಸೆತಗಳನ್ನು ಎದುರಿಸಿದ ಕೈಲ್ ಮೇಯರ್ಸ್ 3 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 60 ರನ್ ಬಾರಿಸಿದರು. ಈ ಮೂಲಕ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿತು.
194 ರನ್ಗಳ ಕಠಿಣ ಗುರಿ ಬೆನ್ನತ್ತಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಜೇಸನ್ ರಾಯ್ ಬಿರುಸಿನ ಆರಂಭ ನೀಡಿದ್ದರು. ಮೊದಲ ಓವರ್ನಿಂದಲೇ ಅಬ್ಬರಿಸಲಾರಂಭಿಸಿದ ರಾಯ್ 34 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 64 ರನ್ ಬಾರಿಸಿ ಬೃಹತ್ ಮೊತ್ತದ ಚೇಸಿಂಗ್ಗೆ ಭದ್ರ ಅಡಿಪಾಯ ಹಾಕಿಕೊಟ್ಟರು.
ಇದಾದ ಬಳಿಕ ಕಣಕ್ಕಿಳಿದ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದರು. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಪೂರನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಅಲ್ಲದೆ ಕೇವಲ 43 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 93 ರನ್ ಸಿಡಿಸಿದರು.
A match winning knock from Nicholas Pooran sees him pick up the @Dream11 MVP for match 25. #CPL24 #TKRvSKNP #CricketPlayedLouder #BiggestPartyInSport #Dream11 pic.twitter.com/4kGXROlIqV
— CPL T20 (@CPL) September 23, 2024
ನಿಕೋಲಸ್ ಪೂರನ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 18.3 ಓವರ್ಗಳಲ್ಲಿ 197 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೆ ಈ ಗೆಲುವಿನೊಂದಿಗೆ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು ಕೆರಿಬಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಹಂತಕ್ಕೇರಿದೆ.
ಟ್ರಿನ್ಬಾಗೊ ನೈಟ್ ರೈಡರ್ಸ್ ಪ್ಲೇಯಿಂಗ್ 11: ಜೇಸನ್ ರಾಯ್ , ಕೀಸಿ ಕಾರ್ಟಿ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಕೀರನ್ ಪೊಲಾರ್ಡ್ (ನಾಯಕ) , ಆಂಡ್ರೆ ರಸೆಲ್ , ಟಿಮ್ ಡೇವಿಡ್ , ಅಕೇಲ್ ಹೊಸೈನ್ , ಕ್ರಿಸ್ ಜೋರ್ಡನ್ , ಜೇಡನ್ ಸೀಲ್ಸ್ , ವಕಾರ್ ಸಲಾಮ್ಖೈಲ್ , ಡ್ವೇನ್ ಬ್ರಾವೋ.
ಇದನ್ನೂ ಓದಿ: IPL 2025: CSK ತಂಡ ಉಳಿಸಿಕೊಳ್ಳುವ ಐವರು ಆಟಗಾರರು ಇವರಂತೆ..!
ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪ್ಲೇಯಿಂಗ್ 11: ಎವಿನ್ ಲೂಯಿಸ್ , ಆಂಡ್ರೆ ಫ್ಲೆಚರ್ (ನಾಯಕ) , ಕೈಲ್ ಮೇಯರ್ಸ್ , ರಿಲೀ ರೋಸೌ , ಮೈಕೈಲ್ ಲೂಯಿಸ್ , ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್) , ಜೋಶ್ ಕ್ಲಾರ್ಕ್ಸನ್ , ತಬ್ರೈಜ್ ಶಮ್ಸಿ , ಅನ್ರಿಕ್ ನೋಕಿಯಾ, ಆಶ್ಮೀಡ್ ನೆಡ್ , ಜೆರೆಮಿಯಾ ಲೂಯಿಸ್.