ಪೂರನ್ ಪವರ್: 250 ರನ್ ಬಾರಿಸಿ ಗೆದ್ದು ಬೀಗಿದ TKR
CPL 2024: ಕೆರಿಬಿಯನ್ ಪ್ರೀಮಿಯರ್ ಲೀಗ್ನ ಮೂರನೇ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು 44 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟಿಕೆಆರ್ ತಂಡವು 20 ಓವರ್ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಸ್ಎನ್ಪಿ ತಂಡ 206 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ನಿಕೋಲಸ್ ಪೂರನ್ ಸಿಡಿಲಬ್ಬರ ಮುಂದುವರೆದಿದೆ. ಪ್ರಸ್ತುತ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನ 3ನೇ ಪಂದ್ಯದಲ್ಲೂ ಪೂರನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೇಂಟ್ ಕಿಟ್ಸ್ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಇನಿಂಗ್ಸ್ ಆರಂಭಿಸಿದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಜೇಸನ್ ರಾಯ್ ಕೇವಲ 6 ರನ್ಗಳಿಸಿ ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕ್ರೀಸ್ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಪೂರನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್ ಫೋರ್ಗಳ ಸುರಿಮಳೆಗೈದರು.
ಅಲ್ಲದೆ ಕೇವಲ 43 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 97 ರನ್ ಸಿಡಿಸಿ ವಿಕೆಟ್ ಒಪ್ಪಿಸುವ ಮೂಲಕ ಪೂರನ್ ಶತಕ ವಂಚಿತರಾದರು. ಮತ್ತೊಂದೆಡೆ ಕೀಸಿ ಕಾರ್ಟಿ 35 ಎಸೆತಗಳಲ್ಲಿ 3 ಸಿಕ್ಸ್, 9 ಫೋರ್ಗಳೊಂದಿಗೆ ಅಜೇಯ 73 ರನ್ ಬಾರಿಸಿದರು. ಈ ಮೂಲಕ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 250 ರನ್ ಕಲೆಹಾಕಿತು.
251 ರನ್ಗಳ ಕಠಿಣ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಮೈಕೆಲ್ ಲೂಯಿಸ್ 38 ಎಸೆತಗಳಲ್ಲಿ 56 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಲ್ಲದೆ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 206 ರನ್ಗಳಿಸುವ ಮೂಲಕ 44 ರನ್ಗಳಿಂದ ಸೋಲೊಪ್ಪಿಕೊಂಡಿತು.