AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಕೋಟಿ ಕೋಟಿ ಆದಾಯ, ಆಶಸ್‌ನಿಂದ 134 ಕೋಟಿ ನಷ್ಟ; ಕ್ರಿಕೆಟ್ ಆಸ್ಟ್ರೇಲಿಯಾಗೆ ಶಾಕ್

ಕ್ರಿಕೆಟ್ ಆಸ್ಟ್ರೇಲಿಯಾ 2025-26ರ ಹಣಕಾಸು ವರ್ಷದಲ್ಲಿ ದಾಖಲೆ ಆದಾಯ ಗಳಿಸಿದ್ದರೂ, ಆಶಸ್ ಸರಣಿಯ ಎರಡು ಟೆಸ್ಟ್ ಪಂದ್ಯಗಳು ಕೇವಲ ಎರಡು ದಿನಗಳಲ್ಲೇ ಮುಗಿದ ಕಾರಣ ₹134 ಕೋಟಿ (AUD 2 ಕೋಟಿ) ನಷ್ಟ ಅನುಭವಿಸಿದೆ. ಟಿಕೆಟ್ ಮತ್ತು ವಾಣಿಜ್ಯ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಆದಾಗ್ಯೂ, ಪ್ರಸಾರ ಹಕ್ಕು ಮತ್ತು ಪ್ರಾಯೋಜಕತ್ವದಿಂದ ಆದಾಯವನ್ನು ಸರಿದೂಗಿಸಲಾಗಿದೆ. ಮುಂದಿನ ಸರಣಿಗಳಿಂದ ಆದಾಯ ಕುಸಿತದ ಆತಂಕವಿದ್ದು, ವೆಚ್ಚ ಕಡಿತ ಮತ್ತು ಹೊಸ ಆದಾಯ ಮೂಲಗಳತ್ತ ಗಮನ ಹರಿಸಲಾಗುತ್ತಿದೆ.

ಭಾರತದಿಂದ ಕೋಟಿ ಕೋಟಿ ಆದಾಯ, ಆಶಸ್‌ನಿಂದ 134 ಕೋಟಿ ನಷ್ಟ; ಕ್ರಿಕೆಟ್ ಆಸ್ಟ್ರೇಲಿಯಾಗೆ ಶಾಕ್
ಆಸ್ಟ್ರೇಲಿಯಾ ತಂಡ
ಪೃಥ್ವಿಶಂಕರ
|

Updated on: Oct 28, 2026 | 3:59 PM

Share

2025-26ರ ಹಣಕಾಸು ವರ್ಷದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಇತಿಹಾಸದಲ್ಲೇ ಗರಿಷ್ಠ ವಾರ್ಷಿಕ ಆದಾಯವನ್ನು ದಾಖಲಿಸಿದೆ. ಭಾರತ ವಿರುದ್ಧದ ಸರಣಿಯಿಂದ ಮಂಡಳಿಗೆ ಭರ್ಜರಿ ಆದಾಯ ಹರಿದುಬಂದಿದೆ. ಆದರೆ, ಇಷ್ಟೊಂದು ದೊಡ್ಡ ಮೊತ್ತದ ಗಳಿಕೆಯ ನಡುವೆಯೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸುಮಾರು 2 ಕೋಟಿ ಆಸ್ಟ್ರೇಲಿಯನ್ ಡಾಲರ್ ಅಂದರೆ ಸುಮಾರು 134 ಕೋಟಿ ರೂ. ನಷ್ಟ ಅನುಭವಿಸಿರುವುದಾಗಿ ಹೇಳಿಕೊಂಡಿದೆ. ಆಶಸ್ ಟೆಸ್ಟ್ ಸರಣಿಯ ಎರಡು ಪ್ರಮುಖ ಪಂದ್ಯಗಳು ಕೇವಲ ಎರಡು ದಿನಗಳಲ್ಲೇ ಮುಕ್ತಾಯಗೊಂಡಿದ್ದೇ ಈ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಬಳಿಕ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಕೂಡ ಎರಡೇ ದಿನಗಳಲ್ಲಿ ಮುಗಿದಿತ್ತು. ಇದರಿಂದ ಟಿಕೆಟ್ ಮಾರಾಟ ಸೇರಿದಂತೆ ಪಂದ್ಯಗಳ ಮೂಲಕ ನಿರೀಕ್ಷಿಸಿದ್ದ ಆದಾಯಕ್ಕೆ ಹೊಡೆತ ಬಿದ್ದಿದೆ.

ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ ಭಾರೀ ನಷ್ಟ

ಕ್ರಿಕೆಟ್ ಆಸ್ಟ್ರೇಲಿಯಾದ ನೂತನ ಅಧ್ಯಕ್ಷ ಮೈಕ್ ಬೇರ್ಡ್ ಈ ಬಗ್ಗೆ ಮಾತನಾಡಿದ್ದು, ಆಶಸ್ ಸರಣಿಯ ವೇಳೆ ಎಂಸಿಜಿಯಲ್ಲಿ ದಾಖಲೆಯ 94,000 ಪ್ರೇಕ್ಷಕರು ಪಂದ್ಯ ವೀಕ್ಷಿಸಲು ಆಗಮಿಸಿದ್ದರು. ಆದರೆ, ಪಂದ್ಯ ಕೇವಲ ಎರಡು ದಿನಗಳಲ್ಲೇ ಮುಕ್ತಾಯಗೊಂಡಿದ್ದರಿಂದ ಮಂಡಳಿಗೆ ನಿರೀಕ್ಷಿತ ಆದಾಯ ಲಭಿಸಲಿಲ್ಲ ಎಂದು ತಿಳಿಸಿದ್ದಾರೆ.

ಎಂಸಿಜಿಯಲ್ಲಿ ನಡೆದ ಟೆಸ್ಟ್ ಪಂದ್ಯದಿಂದ ಆರಂಭದಲ್ಲಿ ಅಂದಾಜಿಸಿದ್ದ ನಷ್ಟಕ್ಕಿಂತ ಹೆಚ್ಚಿನ ಆರ್ಥಿಕ ಹೊಡೆತ ಉಂಟಾಗಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಾಡ್ ಗ್ರೀನ್‌ಬರ್ಗ್ ಅವರ ಪ್ರಕಾರ, ಪರ್ತ್ ಮತ್ತು ಮೆಲ್ಬೋರ್ನ್‌ನಲ್ಲಿ ನಡೆದ ಈ ಎರಡು ಟೆಸ್ಟ್ ಪಂದ್ಯಗಳಿಂದ ಒಟ್ಟಾರೆ ಸುಮಾರು 2 ಕೋಟಿ ಆಸ್ಟ್ರೇಲಿಯನ್ ಡಾಲರ್ ನಷ್ಟವಾಗಿದೆ. ದಾಖಲೆಯ ಸಂಖ್ಯೆಯಲ್ಲಿ ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬಂದಿದ್ದರೂ, ಪಂದ್ಯಗಳು ಬೇಗನೆ ಮುಗಿದ ಕಾರಣ ಟಿಕೆಟ್ ಮಾರಾಟ ಮತ್ತು ಇತರ ವಾಣಿಜ್ಯ ಚಟುವಟಿಕೆಗಳಿಂದ ಬರಬೇಕಿದ್ದ ಆದಾಯ ಕಡಿಮೆಯಾಗಿದೆ.

ನಷ್ಟದ ನಡುವೆಯೂ ಆದಾಯ

ಎರಡು ಟೆಸ್ಟ್ ಪಂದ್ಯಗಳಿಂದ ನಷ್ಟ ಉಂಟಾದರೂ, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಒಟ್ಟಾರೆ ಹಣಕಾಸಿನ ಗುರಿಗಳನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಟಾಡ್ ಗ್ರೀನ್‌ಬರ್ಗ್ ಹೇಳಿದ್ದಾರೆ. ಪ್ರಸಾರ ಹಕ್ಕುಗಳು, ಪ್ರಾಯೋಜಕತ್ವ ಮತ್ತು ಇತರ ಆದಾಯದ ಮೂಲಗಳಿಂದ ಉತ್ತಮ ಗಳಿಕೆ ಬಂದಿದ್ದರಿಂದ ಟೆಸ್ಟ್ ಪಂದ್ಯಗಳಿಂದ ಉಂಟಾದ ನಷ್ಟವನ್ನು ಸರಿದೂಗಿಸಲು ಸಾಧ್ಯವಾಯಿತು ಎಂದು ಅವರು ತಿಳಿಸಿದ್ದಾರೆ.

2024-25ರ ಹಣಕಾಸು ವರ್ಷದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾದ ವಾರ್ಷಿಕ ಆದಾಯ 45.56 ಕೋಟಿ ಆಸ್ಟ್ರೇಲಿಯನ್ ಡಾಲರ್ ಆಗಿತ್ತು. 2025-26ರಲ್ಲಿ ಇದು 60.11 ಕೋಟಿ ಆಸ್ಟ್ರೇಲಿಯನ್ ಡಾಲರ್‌ಗೆ ಏರಿಕೆಯಾಗಿದೆ. ಆಶಸ್ ಸರಣಿಯ ಬೇಸಿಗೆಯಲ್ಲಿ ಪ್ರಸಾರಕರು, ಟಿಕೆಟ್ ಖರೀದಿದಾರರು ಮತ್ತು ವಾಣಿಜ್ಯ ಪಾಲುದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಮುಂದಿನ ಸರಣಿಗಳಿಂದ ಆದಾಯ ಕುಸಿಯುವ ಆತಂಕ

ಇತ್ತೀಚಿನ ವರ್ಷಗಳಲ್ಲಿ ಆಸ್ಟ್ರೇಲಿಯಾ ತಂಡ ಭಾರತ ಮತ್ತು ಇಂಗ್ಲೆಂಡ್ ವಿರುದ್ಧ ಹಲವು ಪ್ರಮುಖ ಸರಣಿಗಳನ್ನು ಆಡಿದೆ. ಕಳೆದ ವರ್ಷ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆದ ಭಾರತ ವಿರುದ್ಧದ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಆದರೆ, ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಜಯ ಸಾಧಿಸಿತ್ತು.

ಮುಂದಿನ ಕೆಲವು ವರ್ಷಗಳಲ್ಲಿ ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿವೆ. ಈ ಸರಣಿಗಳಿಂದ ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಿಗೆ ಹೋಲಿಸಿದರೆ ಕಡಿಮೆ ಆದಾಯ ಬರಬಹುದೆಂಬ ಆತಂಕ ಕ್ರಿಕೆಟ್ ಆಸ್ಟ್ರೇಲಿಯಾವನ್ನು ಕಾಡುತ್ತಿದೆ. ಹೀಗಾಗಿ, ಮಂಡಳಿಯು ವೆಚ್ಚ ಕಡಿತದತ್ತ ಗಮನ ಹರಿಸುವ ಅಗತ್ಯವಿದೆ. ಇದರ ಜೊತೆಗೆ, ಆದಾಯದ ಹೊಸ ಮೂಲಗಳನ್ನು ಕಂಡುಕೊಳ್ಳುವುದೂ ಅನಿವಾರ್ಯವಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ಭಾರತದ್ದೇ ದರ್ಬಾರ್: ಒಂದೇ ಪಂದ್ಯದಲ್ಲಿ ಮೂರು ವಿಶ್ವದಾಖಲೆ..!

ಬಿಬಿಎಲ್​ನಿಂದ ಆದಾಯದ ನಿರೀಕ್ಷೆ

ಕ್ರಿಕೆಟ್ ಆಸ್ಟ್ರೇಲಿಯಾ ಅಧ್ಯಕ್ಷ ಮೈಕ್ ಬೇರ್ಡ್ ಮಾತನಾಡಿ, ಮಂಡಳಿಯು ದೀರ್ಘಾವಧಿಯಲ್ಲಿ ಆರ್ಥಿಕವಾಗಿ ಸುಸ್ಥಿರವಾಗಿರುವ ಗುರಿಯನ್ನು ಹೊಂದಿದೆ ಎಂದಿದ್ದಾರೆ. ‘ಬಿಗ್ ಬ್ಯಾಷ್ ಲೀಗ್‌ನಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವುದರಿಂದ ಪಂದ್ಯಾವಳಿಯ ಸಾಮರ್ಥ್ಯ ಹೆಚ್ಚುವುದರ ಜೊತೆಗೆ, ಅಭಿಮಾನಿಗಳಿಗೆ ಉತ್ತಮ ಅನುಭವ ನೀಡಲು ಸಾಧ್ಯವಾಗಲಿದೆ. ಇದರಿಂದ ಕ್ರಿಕೆಟ್ ಆಟದ ಬೆಳವಣಿಗೆಗೂ ಉತ್ತೇಜನ ಸಿಗಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ, ಭಾರತ ವಿರುದ್ಧದ ಸರಣಿಗಳಿಂದ ಉತ್ತಮ ಆದಾಯ ಗಳಿಸುತ್ತಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಆಶಸ್‌ನ ಎರಡು ಟೆಸ್ಟ್ ಪಂದ್ಯಗಳು ಬೇಗನೆ ಮುಕ್ತಾಯಗೊಂಡಿದ್ದರಿಂದ ದೊಡ್ಡ ನಷ್ಟ ಅನುಭವಿಸಿದೆ. ಮುಂದಿನ ದಿನಗಳಲ್ಲಿ ಆದಾಯವನ್ನು ಹೆಚ್ಚಿಸುವುದರ ಜೊತೆಗೆ ವೆಚ್ಚವನ್ನು ನಿಯಂತ್ರಿಸುವುದು ಮಂಡಳಿಗೆ ಪ್ರಮುಖ ಸವಾಲಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!
ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!
ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!
ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!
'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ
'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ
'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'
'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'
ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​
ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​
ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್!
ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್!
ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆಶಿ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ
ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆಶಿ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ವ್ಹೀಲ್ ಚೇರ್‌ನಲ್ಲಿ ಕಸ ಸಾಗಾಟ!
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ವ್ಹೀಲ್ ಚೇರ್‌ನಲ್ಲಿ ಕಸ ಸಾಗಾಟ!
ಬಿಗ್ ಬಾಸ್ ಮನೆಗೆ ಕಾಲಿಟ್ಟ ರಕ್ಷಿತಾ ಶೆಟ್ಟಿ; ಶೆಟ್ಟಿ ಕುಟುಂಬದಲ್ಲಿ ಹರ್ಷ
ಬಿಗ್ ಬಾಸ್ ಮನೆಗೆ ಕಾಲಿಟ್ಟ ರಕ್ಷಿತಾ ಶೆಟ್ಟಿ; ಶೆಟ್ಟಿ ಕುಟುಂಬದಲ್ಲಿ ಹರ್ಷ