AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ದ್ವಿತೀಯಾರ್ಧದ ಐಪಿಎಲ್​ಗೆ ಬರ್ತಾರೆ ಇಂಗ್ಲೆಂಡ್- ಆಸ್ಟ್ರೇಲಿಯಾ ಆಟಗಾರರು! ಮಂಡಳಿಯಿಂದ ಗ್ರೀನ್ ಸಿಗ್ನಲ್

IPL 2021: ಕ್ರಿಕೆಟ್ ಆಸ್ಟ್ರೇಲಿಯಾ (CA) ಮತ್ತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB)ಅಧಿಕೃತ ಹೇಳಿಕೆ ನೀಡಿದ್ದು, ತನ್ನ ಆಟಗಾರರಿಗೆ ಐಪಿಎಲ್​ನಲ್ಲಿ ಭಾಗವಹಿಸಲು ಅವಕಾಶ ನೀಡಿದೆ.

IPL 2021: ದ್ವಿತೀಯಾರ್ಧದ ಐಪಿಎಲ್​ಗೆ ಬರ್ತಾರೆ ಇಂಗ್ಲೆಂಡ್- ಆಸ್ಟ್ರೇಲಿಯಾ ಆಟಗಾರರು! ಮಂಡಳಿಯಿಂದ ಗ್ರೀನ್ ಸಿಗ್ನಲ್
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.
TV9 Web
| Edited By: |

Updated on: Aug 14, 2021 | 4:40 PM

Share

ಕೋವಿಡ್‌ನಿಂದಾಗಿ ಐಪಿಎಲ್ -14 ಅನ್ನು ಮಧ್ಯದಲ್ಲಿ ನಿಲ್ಲಿಸಲಾಯಿತು. ಈ ಪಂದ್ಯಾವಳಿಯು ಮುಂದಿನ ತಿಂಗಳಿನಿಂದ ಆರಂಭವಾಗುತ್ತಿದೆ. ರಾಷ್ಟ್ರೀಯ ತಂಡದೊಂದಿಗಿನ ಬದ್ಧತೆಯಿಂದಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನ ಆಟಗಾರರು ದ್ವಿತೀಯಾರ್ಧದ ಐಪಿಎಲ್​ನಲ್ಲಿ ಕಾಣಸಿಕೊಳ್ಳುವುದಿಲ್ಲ ಎಂಬ ಮಾತು ಕೇಳಿಬಂದಿತ್ತು. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ (CA) ಮತ್ತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB)ಅಧಿಕೃತ ಹೇಳಿಕೆ ನೀಡಿದ್ದು, ತನ್ನ ಆಟಗಾರರಿಗೆ ಐಪಿಎಲ್​ನಲ್ಲಿ ಭಾಗವಹಿಸಲು ಅವಕಾಶ ನೀಡಿದೆ. ಕ್ರಿಕ್‌ಬಜ್‌ ವೆಬ್‌ಸೈಟ್‌ನ ವರದಿಯ ಪ್ರಕಾರ, ಎರಡೂ ಮಂಡಳಿಗಳು ಬಿಸಿಸಿಐಗೆ ಲೀಗ್‌ನ ಉಳಿದ ಪಂದ್ಯಗಳನ್ನು ಆಡಲು ತಮ್ಮ ಆಟಗಾರರಿಗೆ ಅವಕಾಶ ನೀಡುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿವೆ. ಲೀಗ್‌ನ 14 ನೇ ಸೀಸನ್‌ನ ಉಳಿದ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

ಬಿಸಿಸಿಐ ಈ ಕುರಿತು ಫ್ರಾಂಚೈಸಿಗಳಿಗೆ ಮಾಹಿತಿ ನೀಡಿದಾಗ ಇದು ದೃಢಪಟ್ಟಿದೆ. ಐಪಿಎಲ್ ಸಿಒಒ ಹೇಮಂಗ್ ಅಮಿನ್ ಶುಕ್ರವಾರ ಎಲ್ಲಾ ಫ್ರಾಂಚೈಸಿಗಳಿಗೆ ಕರೆ ಮಾಡಿ ಎರಡೂ ಮಂಡಳಿಗಳ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು. ಈಗ ಅವರು ಭಾಗವಹಿಸಬೇಕೆ ಅಥವಾ ಬೇಡವೇ ಎಂಬುದು ಆಟಗಾರರಿಗೆ ಬಿಟ್ಟದ್ದು. ಪಂದ್ಯಾವಳಿ ಮುಗಿಯುವವರೆಗೂ ಆಟಗಾರರು ಇರುತ್ತಾರೆ ಎಂದು ಬಿಸಿಸಿಐ ಅಧಿಕಾರಿ ತಂಡಗಳಿಗೆ ತಿಳಿಸಿದ್ದಾರೆ. ಈ ಎರಡು ಮಂಡಳಿಗಳ ಮೊದಲು, ನ್ಯೂಜಿಲ್ಯಾಂಡ್ ಕ್ರಿಕೆಟ್ ಕೂಡ ಐಪಿಎಲ್ -14 ರ ಉಳಿದ ಪಂದ್ಯಗಳಿಗೆ ತನ್ನ ಆಟಗಾರರು ಹಾಜರಿರುತ್ತಾರೆ ಎಂದು ಸ್ಪಷ್ಟಪಡಿಸಿತ್ತು.

ಫ್ರಾಂಚೈಸಿ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿದೆ ದುಬೈ ತಲುಪಿರುವ ಮೂರು ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ನ ಸಿಇಒ ಕಾಶಿ ವಿಶ್ವನಾಥನ್ ಮಾತನಾಡಿ, ನಮಗೆ ಐಪಿಎಲ್ ಕಚೇರಿಯಿಂದ ಕರೆ ಬಂದಿದೆ. ಮಂಡಳಿಗಳು ತಮ್ಮ ಆಟಗಾರರು ಭಾಗವಹಿಸುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿವೆ ಎಂದರು. ಈಗ ಅದು ಆಟಗಾರರಿಗೆ ಬಿಟ್ಟದ್ದು. ನಮ್ಮ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಟಗಾರರು (ಜೇಸನ್ ಬೆಹ್ರೆಂಡೋರ್ಫ್, ಸ್ಯಾಮ್ ಕುರ್ರನ್, ಮೊಯೀನ್ ಅಲಿ) ಲಭ್ಯವಿರುತ್ತಾರೆ ಎಂದಿದ್ದಾರೆ.

ಈ ಆಟಗಾರರು ದೃಢಪಡಿಸಿದ್ದಾರೆ ಸನ್ರೈಸರ್ಸ್ ಡೇವಿಡ್ ವಾರ್ನರ್ ಅವರು ಲೀಗ್ ನಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂಗ್ಲೆಂಡ್ ನ ಜೇಸನ್ ರಾಯ್ ಮತ್ತು ಜಾನಿ ಬೈರ್ ಸ್ಟೋ ಈ ತಂಡದಲ್ಲಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ಪರ ಆಡುವ ಸ್ಟೀವ್ ಸ್ಮಿತ್ ಮತ್ತು ಮಾರ್ಕಸ್ ಸ್ಟೋಯಿನಿಸ್ ಕೂಡ ತಾವು ಆಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ -2021 ರಲ್ಲಿ ಇಂಗ್ಲೆಂಡ್‌ನ ಒಟ್ಟು 14 ಆಟಗಾರರು ಮತ್ತು ಆಸ್ಟ್ರೇಲಿಯಾದ 20 ಆಟಗಾರರು ಆಡುತ್ತಿದ್ದಾರೆ.

ಇದನ್ನೂ ಓದಿ:IPL 2021: ಐಪಿಎಲ್ ಫೀವರ್ ಶುರು: ದುಬೈ ತಲುಪಿದ ಧೋನಿ ಸೈನ್ಯ: ಇಲ್ಲಿದೆ ಫೋಟೋಗಳು

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!