Breaking: ಏಕದಿನ ವಿಶ್ವಕಪ್​ಗೆ 18 ಸದಸ್ಯರ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ!

World Cup 2023: ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್​ಗೆ ಕ್ರಿಕೆಟ್ ಆಸ್ಟ್ರೇಲಿಯಾ 15 ಸದಸ್ಯರನ್ನೊಳಗೊಂಡ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

Breaking: ಏಕದಿನ ವಿಶ್ವಕಪ್​ಗೆ 18 ಸದಸ್ಯರ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ!
ಆಸ್ಟ್ರೇಲಿಯಾ ತಂಡ
Follow us
ಪೃಥ್ವಿಶಂಕರ
|

Updated on:Aug 07, 2023 | 10:08 AM

ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್​ಗೆ (ODI World Cup) ಕ್ರಿಕೆಟ್ ಆಸ್ಟ್ರೇಲಿಯಾ 18 ಸದಸ್ಯರನ್ನೊಳಗೊಂಡ ಬಲಿಷ್ಠ ತಂಡವನ್ನು (Cricket Australia) ಪ್ರಕಟಿಸಿದೆ. ಈ ಬಲಿಷ್ಠ ಪಡೆಯ ನಾಯಕತ್ವ ಎಂದಿನಂತೆ ಆಲ್​ರೌಂಡರ್​ ಪ್ಯಾಟ್ ಕಮಿನ್ಸ್ (Pat Cummins) ಅವರಿಗೆ ವಹಿಸಲಾಗಿದೆ. ಇನ್ನು ಇದೇ ತಂಡ ದಕ್ಷಿಣ ಆಫ್ರಿಕಾದಲ್ಲಿ ನಡೆಯಲ್ಲಿರುವ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಆ ಬಳಿಕ ಭಾರತದಲ್ಲಿ ನಡೆಯಲ್ಲಿರುವ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ 18 ಸದಸ್ಯರ ತಂಡ ಪ್ರಕಟವಾಗಿದ್ದು, ಏಕದಿನ ವಿಶ್ವಕಪ್​ ದೃಷ್ಟಿಯಿಂದ ತಂಡವನ್ನು 15 ಸದಸ್ಯರಿಗೆ ಸೀಮಿತಗೊಳಿಸುವ ನಿರೀಕ್ಷೆ ಇದೆ. ಅನುಭವಿಗಳು ಹಾಗೂ ಯುವಕರಿಂದ ಕೂಡಿರುವ ಈ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಮಾರ್ನಸ್ ಲಬುಶೆನ್ ( Marnus Labuschagne) ವಿಫಲರಾಗಿದ್ದರೆ, ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್​ಗೆ (David Warner) ಆಯ್ಕೆ ಮಂಡಳಿ ಮತ್ತೊಮ್ಮೆ ಮಣೆ ಹಾಕಿದೆ.

ಇನ್ನು ಆ್ಯಶಸ್ ಟೆಸ್ಟ್ ಸರಣಿಯ ಐದನೇ ಟೆಸ್ಟ್ ಪಂದ್ಯದಲ್ಲಿ ಮಣಿಕಟ್ಟಿನ ಇಂಜುರಿಗೆ ತುತ್ತಾಗಿದ್ದ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂದಿನ ತಿಂಗಳು ಭಾರತದಲ್ಲಿ ನಡೆಯಲ್ಲಿರುವ ಏಕದಿನ ಸರಣಿಯಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೆ ಇದೀಗ ಏಕದಿನ ವಿಶ್ವಕಪ್​ಗೆ ತಂಡವನ್ನು ಪ್ರಕಟಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ, ತಂಡವನ್ನು ಕೇವಲ ಎರಡು ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿರುವ ಕಮಿನ್ಸ್​ಗೆ ತಂಡದ ನಾಯಕತ್ವ ನೀಡಿದೆ.

ರೋಹಿತ್ ಶರ್ಮಾ ಸೇರಿದಂತೆ ಈ 7 ಆಟಗಾರರಿಗೆ ಇದು ಕೊನೆಯ ವಿಶ್ವಕಪ್!

ಮಾರ್ನಸ್ ಲಬುಶೆನ್​ಗೆ ತಪ್ಪಿದ ಅವಕಾಶ

ತಂಡದಲ್ಲಿ ಯಾರಿಗೆಲ್ಲ ಅವಕಾಶ ಸಿಕ್ಕಿದೆ ಎಂಬುದನ್ನು ನೋಡುವುದಾದರೆ.. ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಮಾರ್ನಸ್ ಲಬುಶೆನ್​ಗೆ ನಿರಾಸೆಯೂಂಟಾಗಿದೆ. ಈ ಹಿಂದೆ ಭಾರತ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ತಂಡದಲ್ಲಿದ್ದ ಲಬುಶೆನ್ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 43 ರನ್ ಕಲೆ ಹಾಕಿದ್ದರು.ಇದುವರೆಗೆ ಆಸ್ಟ್ರೇಲಿಯಾ ಪರ 30 ಏಕದಿನ ಪಂದ್ಯಗಳನ್ನಾಡಿರುವ ಲಬುಶೆನ್ 31.37 ಸರಾಸರಿಯಲ್ಲಿ ಕೇವಲ 847 ರನ್ ಗಳಿಸಿದ್ದಾರೆ. ಇದರಲ್ಲಿ ಕೇವಲ 1 ಶತಕ ಮತ್ತು 6 ಅರ್ಧ ಶತಕಗಳು ಸೇರಿವೆ. 2020 ರಲ್ಲಿ ಏಕದಿನ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಲಬುಶೆನ್​ಗೆ ಆಸ್ಟ್ರೇಲಿಯ ತಂಡದಲ್ಲಿ ಅವಕಾಶ ಸಿಕ್ಕಿದ್ದರೆ ಮೊದಲ ಸಲ ಏಕದಿನ ವಿಶ್ವಕಪ್ ಆಡುವ ಅವಕಾಶ ಸಿಗುತ್ತಿತ್ತು. ಆದರೆ, ಅವರನ್ನು ತಂಡದಿಂದ ಕೈಬಿಡುವ ನಿರ್ಧಾರವನ್ನು ಮಂಡಳಿ ಮಾಡಿರುವುದರಿಂದ ಲಬುಶೇನ್​ಗೆ ಏಕದಿನ ವಿಶ್ವಕಪ್ ಆಡುವ ಅವಕಾಶ ಕೈತಪ್ಪಿದೆ.

ಯುವ ಆಟಗಾರರಿಗೂ ಅವಕಾಶ

ಹಾಗೆಯೇ ತಂಡದಲ್ಲಿ ಕೆಲವು ಅನನುಭವಿ ಆಟಗಾರರಿಗೂ ಅವಕಾಶ ನೀಡಲಾಗಿದ್ದು, ಅನ್‌ಕ್ಯಾಪ್ಡ್ ಲೆಗ್ ಸ್ಪಿನ್ನರ್ ತನ್ವೀರ್ ಸಂಘ ಮತ್ತು ಅನನುಭವಿ ಆಲ್‌ರೌಂಡರ್ ಆರೋನ್ ಹಾರ್ಡಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ನು ಆ್ಯಶಸ್ ಟೆಸ್ಟ್ ಸರಣಿಯಲ್ಲಿ ರನ್ ಬರ ಎದುರಿಸಿ ತಂಡದಿಂದ ಹೊರಬೀಳುವ ಆತಂಕದಲ್ಲಿದ್ದ ಡೇವಿಡ್ ವಾರ್ನರ್​ಗೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿದೆ. ಇದೀಗ ತಂಡದಲ್ಲಿ ಸ್ಥಾನ ಪಡೆದಿರುವ ವಾರ್ನರ್, ಟ್ರಾವಿಸ್ ಹೆಡ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಒಂದು ವೇಳೆ ವಿಶ್ವಕಪ್​ಗೂ ಮುನ್ನ ನಡೆಯುವ ದಕ್ಷಿಣ ಆಫ್ರಿಕಾ ಹಾಗೂ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ವಾರ್ನರ್ ತಮ್ಮ ಫಾರ್ಮ್​ ಕಂಡುಕೊಳ್ಳದಿದ್ದರೆ, ಅವರ ಸ್ಥಾನದಲ್ಲಿ ಮಿಚೆಲ್ ಮಾರ್ಷ್ ಆರಂಭಿಕ ಜವಬ್ದಾರಿಯನ್ನು ನಿರ್ವಹಿಸುವ ಸಾಧ್ಯತೆಗಳಿವೆ.

ವಿಶ್ವಕಪ್​ಗೂ ಮುನ್ನ ಭಾರತದ ಎದುರು ಸರಣಿ

ಸೆಪ್ಟೆಂಬರ್ 7 ರಂದು ಪ್ರಾರಂಭವಾಗುವ ಐದು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಳ್ಳಲ್ಲಿದೆ. ನಂತರ ಭಾರತಕ್ಕೆ ಪ್ರಯಾಣಿಸಲಿದ್ದು, ಇಲ್ಲಿ ವಿಶ್ವಕಪ್ ಆರಂಭಕ್ಕೂ ಮೊದಲು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಎದುರಿಸಲಿದೆ. ಆ ಬಳಿಕ ಸೆಪ್ಟೆಂಬರ್ ಆರಂಭದಲ್ಲಿ ಅಥವಾ ಸೆಪ್ಟೆಂಬರ್ 28 ರ ಒಳಗೆ 18 ಸದಸ್ಯರ ಏಕದಿನ ತಂಡವನ್ನು ವಿಶ್ವಕಪ್ ದೃಷ್ಟಿಯಿಂದ 15 ಸದಸ್ಯರಿಗೆ ಇಳಿಸಲಿದೆ. ಏಕೆಂದರೆ ಆ ನಂತರ ತಂಡದಲ್ಲಿ ಬದಲಾವಣೆ ಮಾಡಬೇಕೆಂದರೆ ಐಸಿಸಿಯಿಂದ ಅನುಮೋದನೆ ಪಡೆಯಬೇಕಾಗಿರುತ್ತದೆ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್​, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:22 am, Mon, 7 August 23

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು