India vs Australia T20I: ಭಾರತ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ಆಸ್ಟ್ರೇಲಿಯಾ ತಂಡ ಪ್ರಕಟ: ಪಂದ್ಯ ಯಾವಾಗ?

|

Updated on: Oct 28, 2023 | 10:01 AM

Australia Squad for T20I series vs India: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಮುಗಿದ ಬಳಿಕ ನಡೆಯಲಿರುವ ಭಾರತ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಹೆಸರಿಸಿರುವ ತಂಡದಲ್ಲಿ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಮ್ಯಾಥ್ಯೂ ವೇಡ್ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

India vs Australia T20I: ಭಾರತ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ಆಸ್ಟ್ರೇಲಿಯಾ ತಂಡ ಪ್ರಕಟ: ಪಂದ್ಯ ಯಾವಾಗ?
AUS Squad for IND T20I
Follow us on

ಭಾರತದಲ್ಲಿ ಸದ್ಯ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಸಾಗುತ್ತಿದೆ. 10 ತಂಡಗಳು ಇದರಲ್ಲಿ ಸೆಣೆಸಾಡುತ್ತಿರುವ ಮಧ್ಯೆ ಕ್ರಿಕೆಟ್ ಆಸ್ಟ್ರೇಲಿಯಾ ಭಾರತ (India vs Australia) ವಿರುದ್ಧದ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ವಿಶ್ವಕಪ್ 2023 ರ ನಂತರ ಟೀಮ್ ಇಂಡಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ 15 ಸದಸ್ಯರ ತಂಡವನ್ನು ಹೆಸರಿಸಿದೆ. ಈ ಸರಣಿಯು ನವೆಂಬರ್ 23 ರಂದು ಪ್ರಾರಂಭವಾಗಲಿದ್ದು, ಮೊದಲ ಟಿ20 ಪಂದ್ಯ ವಿಶಾಖಪಟ್ಟಣಂನ ACA-VDCA ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ.

ಭಾರತ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡದಲ್ಲಿ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಮ್ಯಾಥ್ಯೂ ವೇಡ್ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಟ್ರಾವಿಸ್ ಹೆಡ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
ಪಾಕ್ ವಿರುದ್ಧ ಆಫ್ರಿಕಾ ಜಯ ಸಾಧಿಸಿದಾಗ ಚೆನ್ನೈ ಅಭಿಮಾನಿಗಳು ಏನು ಮಾಡಿದ್ರು?
ಭಾರತಕ್ಕೆ ಹಾಲಿ ಚಾಂಪಿಯನ್ನರ ಸವಾಲು; ಪಂದ್ಯ ಎಷ್ಟು ಗಂಟೆಗೆ ಆರಂಭ?
ಪಾಕ್ ವಿರುದ್ಧ ಜಯ ಸಾಧಿಸಿದ ಬಳಿಕ ಜೈ ಶ್ರೀ ಹನುಮಾನ್ ಎಂದ ಕೇಶವ್ ಮಹರಾಜ್
ಇಂಗ್ಲೆಂಡ್ ವಿರುದ್ಧ ನಾಯಕನಾಗಿ ಶತಕ ಬಾರಿಸಲಿದ್ದಾರೆ ರೋಹಿತ್..!

ಭಾರತ ವಿರದ್ಧದ ಟಿ20 ಸರಣಿಗೆ ಪ್ರಕಟವಾದ ಆಸ್ಟ್ರೇಲಿಯಾ ತಂಡ:

 

”ನ್ಯಾಷನಲ್ ಸೆಲೆಕ್ಷನ್ ಪ್ಯಾನೆಲ್ (NSP) ನವೆಂಬರ್/ಡಿಸೆಂಬರ್‌ನಲ್ಲಿ ನಡೆಯಲಿರುವ ಕ್ವಾಂಟಾಸ್ T20 ಟೂರ್ ಆಫ್ ಇಂಡಿಯಾಗೆ 15 ಆಟಗಾರರ ಪುರುಷರ ತಂಡವನ್ನು ಹೆಸರಿಸಿದೆ. 2023 ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ನಂತರ ಆಸ್ಟ್ರೇಲಿಯಾವು ಭಾರತದ ವಿರುದ್ಧ ಐದು ಟಿ 20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡುತ್ತದೆ,” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕ್ ವಿರುದ್ಧ ಜಯ ಸಾಧಿಸಿದ ಬಳಿಕ ಜೈ ಶ್ರೀ ಹನುಮಾನ್ ಎಂದ ಆಫ್ರಿಕಾ ಆಟಗಾರ ಕೇಶವ್ ಮಹರಾಜ್

”ಮ್ಯಾಥ್ಯೂ ವೇಡ್ ಅವರನ್ನು ಈ ಸರಣಿಗೆ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಅವರನ್ನು ತಂಡಕ್ಕೆ ಸೇರಿಕೊಳ್ಳಲಾಗಿದೆ. ಗಾಯದ ಕಾರಣ ಆಷ್ಟನ್ ಅಗರ್ ಅವರನ್ನು ಪರಿಗಣಿಸಲಾಗಿಲ್ಲ. ಮಲ್ಟಿ-ಫಾರ್ಮ್ಯಾಟ್ ಆಲ್-ರೌಂಡರ್‌ಗಳಾದ ಕ್ಯಾಮರೂನ್ ಗ್ರೀನ್ ಮತ್ತು ಮಿಚೆಲ್ ಮಾರ್ಷ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹ್ಯಾಜಲ್‌ವುಡ್ ಪರ್ತ್‌ನಲ್ಲಿ ಪ್ರಾರಂಭವಾಗುವ ಟೆಸ್ಟ್ ಸರಣಿಗೆ ತಯಾರಿ ನಡೆಸಲಿದ್ದಾರೆ,” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಾರತ-ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂನ ACA-VDCA ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ. ದ್ವಿತೀಯ ಪಂದ್ಯ ನ. 26 ರಂದು ತಿರುವನಂತರಪುರಂ, ಮೂರನೇ ಪಂದ್ಯ ನ. 28 ರಂದು ಗುವಾಹಟಿ, ನಾಲ್ಕನೇ ಹಾಗೂ ಐದನೇ ಪಂದ್ಯ ಕ್ರಮವಾಗಿ ಡಿ. 1 (ನಾಗ್ಪುರ), ಡಿ. 3 ರಂದು ಹೈದರಾಬಾದ್​ನಲ್ಲಿ ನಡೆಯಲಿದೆ.

ಭಾರತ ವಿರುದ್ಧ T20I ಸರಣಿಗೆ ಆಸ್ಟ್ರೇಲಿಯಾ ತಂಡ:

ಮ್ಯಾಥ್ಯೂ ವೇಡ್ (ನಾಯಕ), ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೋನಿಸ್ ಡೇವಿಡ್ ವಾರ್ನರ್, ಆ್ಯಡಂ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ