IND vs AUS: ಭಾರತ ಎ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ಎ ತಂಡ ಪ್ರಕಟ
IND vs AUS: ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವೆ 4 ದಿನಗಳ ಎರಡು ಟೆಸ್ಟ್ ಪಂದ್ಯಗಳು ನಡೆಯಲ್ಲಿವೆ. ಇದೀಗ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಎ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಹಲವು ಯುವ ಆಟಗಾರರಲ್ಲದೆ ಹಿರಿಯ ಆಟಗಾರರಿಗೂ ಅವಕಾಶ ನೀಡಲಾಗಿದೆ.
ಮುಂಬರುವ ನವೆಂಬರ್ ತಿಂಗಳಲ್ಲಿ ಟೀಂ ಇಂಡಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಎರಡು ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ನವೆಂಬರ್ 22 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವೆ 4 ದಿನಗಳ ಎರಡು ಟೆಸ್ಟ್ ಪಂದ್ಯಗಳು ನಡೆಯಲ್ಲಿವೆ. ಇದೀಗ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಎ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಹಲವು ಯುವ ಆಟಗಾರರಲ್ಲದೆ ಹಿರಿಯ ಆಟಗಾರರಿಗೂ ಅವಕಾಶ ನೀಡಲಾಗಿದೆ. 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತದ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ ಸ್ಕಾಟ್ ಬೋಲ್ಯಾಂಡ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ಟೋಬರ್ 31 ರಿಂದ ಪ್ರಾರಂಭ
ಆಸ್ಟ್ರೇಲಿಯಾ ಎ ಹಾಗೂ ಭಾರತ ಎ ನಡುವಿನ 2 ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 31 ರಿಂದ ನಡೆಯಲಿದ್ದು, ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ನವೆಂಬರ್ 7 ರಿಂದ ನವೆಂಬರ್ 10 ರವರೆಗೆ ನಡೆಯಲಿದೆ. ಮೇಲೆ ಹೇಳಿದಂತೆ ಈ ಟೆಸ್ಟ್ ಸರಣಿ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಆಸ್ಟ್ರೇಲಿಯಾ ತನ್ನ ತಂಡವನ್ನು ಇದೀಗ ಪ್ರಕಟಿಸಿದೆ. ಆದರೆ ಬಿಸಿಸಿಐ ಮಾತ್ರ ಇದುವರೆಗೂ ಭಾರತ ಎ ತಂಡವನ್ನು ಪ್ರಕಟಿಸಿಲ್ಲ. ಆದಾಗ್ಯೂ ಭಾರತ ಎ ತಂಡದ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್ ಅವರಿಗೆ ನೀಡಬಹುದು ಎಂದು ವರದಿಯಾಗಿದೆ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಭಾರತ ಎ ತಂಡದ ನಾಯಕತ್ವವನ್ನು ಗಾಯಕ್ವಾಡ್ ಅವರಿಗೆ ನೀಡುವ ಸಾಧ್ಯತೆಗಳಿದ್ದು, ಇವರಲ್ಲದೆ ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೂ ಭಾರತ ಎ ತಂಡದಲ್ಲಿ ಅವಕಾಶ ಸಿಗುವ ನಿರೀಕ್ಷೆ ಇದೆ.
ಬಲಿಷ್ಠ ಆಸ್ಟ್ರೇಲಿಯಾ ಎ ತಂಡ
ವೇಗದ ಬೌಲರ್ ಸ್ಕಾಟ್ ಬೋಲ್ಯಾಂಡ್ ಕೊನೆಯ ಬಾರಿಗೆ 2023 ರಲ್ಲಿ ಆಸ್ಟ್ರೇಲಿಯಾ ಪರ ಆಡಿದ್ದರು. ಇದಾದ ಬಳಿಕ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿರಲಿಲ್ಲ. ಭಾರತ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಬೋಲ್ಯಾಂಡ್ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ಭಾರತದ ಬೌಲರ್‌ಗಳಿಗೂ ಸಾಕಷ್ಟು ತೊಂದರೆ ನೀಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಬೋಲ್ಯಾಂಡ್ 2 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಅವರ ವಿಕೆಟ್ ಒಳಗೊಂಡಂತೆ 4 ವಿಕೆಟ್ ಪಡೆದಿದ್ದರು. ಬೋಲ್ಯಾಂಡ್ ಅವರ ಅದ್ಭುತ ಸ್ಪೆಲ್ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆಲ್ಲಲು ನೆರವಾಯಿತು.
Introducing our Australia A four-day squad to take on India A next month at Mackay and the MCG 🔥 pic.twitter.com/GCeNMWR4R9
— Cricket Australia (@CricketAus) October 14, 2024
ಆಸ್ಟ್ರೇಲಿಯಾ ಎ ತಂಡ
ನಾಥನ್ ಮೆಕ್‌ಸ್ವೀನಿ (ನಾಯಕ), ಕ್ಯಾಮರೂನ್ ಬ್ಯಾಂಕ್ರಾಫ್ಟ್, ಸ್ಕಾಟ್ ಬೋಲ್ಯಾಂಡ್, ಜೋರ್ಡಾನ್ ಬಕಿಂಗ್‌ಹ್ಯಾಮ್, ಕೂಪರ್ ಕೊನೊಲಿ, ಒಲ್ಲಿ ಡೇವಿಸ್, ಮಾರ್ಕಸ್ ಹ್ಯಾರಿಸ್, ಸ್ಯಾಮ್ ಕಾನ್ಸ್ಟಾಸ್, ನಾಥನ್ ಮೆಕ್‌ಆಂಡ್ರ್ಯೂ, ಮೈಕೆಲ್ ನೆಸರ್, ಟಾಡ್ ಮರ್ಫಿ, ಫರ್ಗುಸ್ ಓ’ನೀಲ್, ಜಿಮ್ಮಿ ಪಿಯರ್ಸನ್, ಮರ್ಕಿ ರೊಕ್ಕಿಪ್ಲಿ ಸ್ಟೆಕೆಟೀ, ಬ್ಯೂ ವೆಬ್‌ಸ್ಟರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ