AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೆ 15 ಸದಸ್ಯರ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ..!

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಸ್ಟಾರ್ ವೇಗಿ ಪ್ಯಾಟ್ರಿಕ್ ಕಮಿನ್ಸ್ ನೇತೃತ್ವದ 15 ಸದಸ್ಯರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಇಂದು ಪ್ರಕಟಿಸಿದೆ. ಆದರೆ ತಂಡದ ಸ್ಟಾರ್ ಆಲ್​ರೌಂಡರ್ ಆದ ಟಿಮ್ ಡೇವಿಡ್ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡದ ಪ್ರಮುಖ ಬ್ಯಾಟಿಂಗ್‌ ಬೆನ್ನೆಲುಬಾಗಿರುವ ಮಾರ್ನಸ್ ಲಬುಶೇನ್​ಗೆ ತಂಡದಲ್ಲಿ ಸ್ಥಾನವಿಲ್ಲ ಎಂಬುದು ಆಸ್ಟ್ರೇಲಿಯಾ ವಿಶ್ವಕಪ್ ತಂಡದ ಪ್ರಮುಖ ಹೈಲೈಟ್ ಆಗಿದೆ.

ODI World Cup 2023: ಏಕದಿನ ವಿಶ್ವಕಪ್​ಗೆ 15 ಸದಸ್ಯರ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ..!
ಆಸ್ಟ್ರೇಲಿಯಾ ತಂಡ
ಪೃಥ್ವಿಶಂಕರ
|

Updated on:Sep 06, 2023 | 8:20 AM

Share

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ (ODI World Cup 2023) ಸ್ಟಾರ್ ವೇಗಿ ಪ್ಯಾಟ್ ಕಮಿನ್ಸ್ (Patrick Cummins) ನೇತೃತ್ವದ 15 ಸದಸ್ಯರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ (Cricket Australia) ಇಂದು ಪ್ರಕಟಿಸಿದೆ. ಆದರೆ ತಂಡದ ಸ್ಟಾರ್ ಆಲ್​ರೌಂಡರ್ ಆದ ಟಿಮ್ ಡೇವಿಡ್ (Tim David) ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡದ ಪ್ರಮುಖ ಬ್ಯಾಟಿಂಗ್‌ ಬೆನ್ನೆಲುಬಾಗಿರುವ ಮಾರ್ನಸ್ ಲಬುಶೇನ್​ಗೆ (Marnus Labuschagne) ತಂಡದಲ್ಲಿ ಸ್ಥಾನವಿಲ್ಲ ಎಂಬುದು ಆಸ್ಟ್ರೇಲಿಯಾ ವಿಶ್ವಕಪ್ ತಂಡದ ಪ್ರಮುಖ ಹೈಲೈಟ್ ಆಗಿದೆ. ಇನ್ನು ನಿರೀಕ್ಷೆಯಂತೆ ಮಿಚೆಲ್ ಮಾರ್ಷ್, ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಸೀನ್ ಅಬಾಟ್ ಮತ್ತು ಆಶ್ಟನ್ ಅಗರ್‌ರನ್ನು ಒಳಗೊಂಡಂತೆ ತಂಡದಲ್ಲಿ ಸಾಕಷ್ಟು ಆಲ್‌ರೌಂಡರ್​ಗಳಿಗೆ ಅವಕಾಶ ನೀಡಲಾಗಿದೆ.

ವಾಸ್ತವವಾಗಿ ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಲಬುಶೇನ್​ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ತಂಡದಲ್ಲಿ ಸ್ಥಾನ ನೀಡಲಾಗಿದೆ. ಒಂದು ವೇಳೆ ಈ ಸರಣಿಯಲ್ಲಿ ಲಬುಶೇನ್ ಗಮನಾರ್ಹ ಪ್ರದರ್ಶನ ನೀಡಿದರೆ, ಅವರಿಗೆ ವಿಶ್ವಕಪ್ ತಂಡದ ಬಾಗಿಲು ತೆರೆದುಕೊಳ್ಳಲಿದೆ. ಹೇಗೆಂದರೆ? ವಿಶ್ವಕಪ್ ತಂಡದಲ್ಲಿ ಆಯ್ಕೆಯಾಗಿರುವ ಆಟಗಾರರು ಗಾಯಗೊಂಡರೆ ತಮ್ಮ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ತಂಡಗಳಿಗೆ ಇನ್ನೂ ಸೆಪ್ಟೆಂಬರ್ 28 ರವರೆಗೆ ಸಮಯಾವಕಾಶವಿದೆ. ಹೀಗಾಗಿ ಲಬುಶೇನ್​ಗೆ ವಿಶ್ವಕಪ್ ತಂಡದ ಬಾಗಿಲು ಇನ್ನು ಮುಚ್ಚಿಲ್ಲ ಎಂಬುದು ಸ್ಪಷ್ಟವಾಗಿದೆ.

AUS vs SA: 3ನೇ ಟಿ20 ಪಂದ್ಯವನ್ನೂ ಸೋತ ಆಫ್ರಿಕಾ; ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ

ಹೆಚ್ಚು ಆಲ್​ರೌಂಡರ್ಸ್​

ಆಸೀಸ್ ವಿಶ್ವಕಪ್ ತಂಡದ ಪ್ರಮುಖ ಪ್ಲಸ್ ಪಾಯಿಂಟ್ ಎಂದರೆ ತಂಡದಲ್ಲಿ ಹೆಚ್ಚು ಆಲ್-ರೌಂಡರ್​ಗಳಿಗೆ ಅವಕಾಶ ನೀಡಿದೆ. ತಂಡದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಆಷ್ಟನ್ ಅಗರ್ ಅವರಂತಹ ಸ್ಪಿನ್-ಬೌಲಿಂಗ್ ಆಲ್-ರೌಂಡ್ ಆಯ್ಕೆಗಳಿಂದ ಹಿಡಿದು ಮಿಚೆಲ್ ಮಾರ್ಷ್ ಮತ್ತು ಕ್ಯಾಮರೂನ್ ಗ್ರೀನ್ ಅವರಂತಹ ಪೇಸ್-ಬೌಲಿಂಗ್ ಆಲ್‌ರೌಂಡರ್‌ಗಳವರೆಗೆ, ಆಸೀಸ್ ತನ್ನ ತಂಡದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಹೊಂದಿದೆ. ಹಾಗೆಯೇ ವೇಗದ ಬೌಲಿಂಗ್ ವಿಭಾಗದಲ್ಲಿ ನಾಯಕ ಕಮ್ಮಿನ್ಸ್ ಜೊತೆಗೆ ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಸ್ಥಾನ ಪಡೆದಿದ್ದಾರೆ.

ಇನ್ನು ಐದು ಬಾರಿಯ ವಿಶ್ವ ಚಾಂಪಿಯನ್‌ ತನ್ನ ತಂಡದಲ್ಲಿ ಜೋಶ್ ಇಂಗ್ಲಿಸ್ ಮತ್ತು ಅಲೆಕ್ಸ್ ಕ್ಯಾರಿ ರೂಪದಲ್ಲಿ ಇಬ್ಬರು ವಿಕೆಟ್ ಕೀಪಿಂಗ್ ಆಯ್ಕೆಗಳನ್ನು ಹೊಂದಿದ್ದು ಕ್ಯಾರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

ಭಾರತದ ವಿರುದ್ಧ ಏಕದಿನ ಸರಣಿ

ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರೋಟೀಸ್ ವಿರುದ್ಧ ಕದನಕ್ಕಿಳಿಯಲ್ಲಿರುವ ಆಸ್ಟ್ರೇಲಿಯಾ, ಆ ನಂತರ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಭಾರತಕ್ಕೆ ಬರಲಿದೆ. ಬಳಿಕ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ರೋಹಿತ್ ಪಡೆಯ ವಿರುದ್ಧ ಕಣಕ್ಕಿಳಿಯುವ ಮೂಲಕ ತಮ್ಮ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.

ಆಸ್ಟ್ರೇಲಿಯಾ ವಿಶ್ವಕಪ್ ತಂಡ:

ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:04 am, Wed, 6 September 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ