ಟಿ20 ವಿಶ್ವಕಪ್ ತಂಡ ಹೆಸರಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ರೋಹಿತ್ ಶರ್ಮಾಗೆ ಇಲ್ಲ ನಾಯಕತ್ವ

|

Updated on: Jun 29, 2024 | 10:20 AM

T20 World Cup 2024: ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಸೌತ್ ಆಫ್ರಿಕಾ ತಂಡವು ಐಡೆನ್ ಮಾರ್ಕ್ರಾಮ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ಟಿ20 ವಿಶ್ವಕಪ್​ನ ಬೆಸ್ಟ್ ಪ್ಲೇಯಿಂಗ್ ಇಲೆವೆನ್​ಗೆ ಈ ಇಬ್ಬರು ಕೂಡ ನಾಯಕರಾಗಿಲ್ಲ ಎಂಬುದೇ ಅಚ್ಚರಿ.

ಟಿ20 ವಿಶ್ವಕಪ್ ತಂಡ ಹೆಸರಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ರೋಹಿತ್ ಶರ್ಮಾಗೆ ಇಲ್ಲ ನಾಯಕತ್ವ
Jones-Stoinis-Rashid
Follow us on

T20 World Cup 2024: ಟಿ20 ವಿಶ್ವಕಪ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಮೊದಲೆರಡು ಸುತ್ತುಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಸೌತ್ ಆಫ್ರಿಕಾ ಮತ್ತು ಭಾರತ ತಂಡಗಳು ಸೆಮಿಫೈನಲ್​ನಲ್ಲಿ ಗೆದ್ದು ಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಶನಿವಾರ (ಜೂ.29) ನಡೆಯಲಿರುವ ಟಿ20 ವಿಶ್ವಕಪ್​ನ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಟಿ20 ವಿಶ್ವಕಪ್ ತಂಡವನ್ನು ಹೆಸರಿಸಿದೆ. ಅಂದರೆ ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಒಳಗೊಂಡ ಪ್ಲೇಯಿಂಗ್ ಇಲೆವೆನ್​ ಅನ್ನು ಆಯ್ಕೆ ಮಾಡಿದ್ದಾರೆ.

ಅಚ್ಚರಿ ಎಂದರೆ ಈ ತಂಡದ ನಾಯಕರಾಗಿ ರೋಹಿತ್ ಶರ್ಮ ಅಥವಾ ಐಡೆನ್ ಮಾರ್ಕ್ರಾಮ್ ಆಯ್ಕೆಯಾಗಿಲ್ಲ. ಬದಲಾಗಿ ಅಫ್ಘಾನಿಸ್ತಾನ್ ತಂಡದ ಕ್ಯಾಪ್ಟನ್ ರಶೀದ್ ಖಾನ್ ಅವರನ್ನು ಕ್ಯಾಪ್ಟನ್ ಆಗಿ ಹೆಸರಿಸಿದ್ದಾರೆ.

ಇನ್ನು ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಭಾರತದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ್ ತಂಡಗಳ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. ಇವರ ಜೊತೆಗೆ ಯುಎಸ್​ಎ ತಂಡ ಆರೋನ್ ಜೋನ್ಸ್ ಕೂಡ ಕಾಣಿಸಿಕೊಂಡಿದ್ದಾರೆ.

ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಆಯ್ಕೆಯಾದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ನಿಕೋಲಸ್ ಪೂರನ್ ಆಯ್ಕೆಯಾಗಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಮಾರ್ಕಸ್ ಸ್ಟೋಯಿನಿಸ್ ಹಾಗೂ ಹಾರ್ದಿಕ್ ಪಾಂಡ್ಯರನ್ನು ಹೆಸರಿಸಲಾಗಿದೆ.

ಅದೇ ರೀತಿ ಸ್ಪಿನ್ನರ್​ಗಳಾಗಿ ರಶೀದ್ ಖಾನ್ ಹಾಗೂ ರಿಶಾದ್ ಹೊಸೈನ್ ಕಾಣಿಸಿಕೊಂಡರೆ, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಅನ್ರಿಕ್ ನೋಕಿಯಾ ಹಾಗೂ ಎಡಗೈ ವೇಗಿ ಫಝಲ್​ಹಕ್ ಫಾರೂಖಿ ಸ್ಥಾನ ಪಡೆದಿದ್ದಾರೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ಟಿ20 ವಿಶ್ವಕಪ್​ನ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಇದನ್ನೂ ಓದಿ: Shafali Verma: ದಾಖಲೆಗಳ ಮೇಲೆ ದಾಖಲೆ ಬರೆದ ಶಫಾಲಿ ವರ್ಮಾ

  1. ರೋಹಿತ್ ಶರ್ಮಾ (ಭಾರತ)
  2. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)
  3. ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್)
  4. ಆರೋನ್ ಜೋನ್ಸ್ (ಯುಎಸ್​ಎ)
  5. ಮಾರ್ಕಸ್ ಸ್ಟೋಯಿನಿಸ್ (ಆಸ್ಟ್ರೇಲಿಯಾ)
  6. ಹಾರ್ದಿಕ್ ಪಾಂಡ್ಯ (ಭಾರತ)
  7. ರಶೀದ್ ಖಾನ್ (C) (ಅಫ್ಘಾನಿಸ್ತಾನ್)
  8. ರಿಶಾದ್ ಹೊಸೈನ್ (ಬಾಂಗ್ಲಾದೇಶ್)
  9. ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)
  10. ಜಸ್​ಪ್ರೀತ್ ಬುಮ್ರಾ (ಭಾರತ)
  11. ಫಝಲ್​ಹಕ್ ಫಾರೂಖಿ (ಅಫ್ಘಾನಿಸ್ತಾನ್)

 

 

Published On - 9:29 am, Sat, 29 June 24