
ಕ್ರಿಕೆಟ್ ಆಸ್ಟ್ರೇಲಿಯಾ 2025ರ ಟೆಸ್ಟ್ ಇಲೆವೆನ್ನ್ನು ಹೆಸರಿಸಿದ್ದಾರೆ. ಈ ಇಲೆವೆನ್ನಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಇನ್ನು 12ನೇ ಆಟಗಾರನಾಗಿಯೂ ಆಯ್ಕೆಯಾಗಿರುವುದು ಭಾರತದ ಆಲ್ರೌಂಡರ್ ಎಂಬುದು ವಿಶೇಷ.
ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಹೆಸರಿಸಿರುವ ಟೆಸ್ಟ್ ಇಲೆವೆನ್ನಲ್ಲಿ ಆರಂಭಿಕರಾಗಿ ಆಯ್ಕೆಯಾಗಿರುವುದು ಭಾರತದ ಕೆಎಲ್ ರಾಹುಲ್ ಹಾಗೂ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್. ಇನ್ನು ಮೂರನೇ ಕ್ರಮಾಂಕಕ್ಕೆ ಇಂಗ್ಲೆಂಡ್ನ ಜೋ ರೂಟ್ ಅವರನ್ನು ಹೆಸರಿಸಿದ್ದಾರೆ.
ನಾಲ್ಕನೇ ಕ್ರಮಾಂಕಕ್ಕೆ ಭಾರತ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ವರ್ಷದ ಟೆಸ್ಟ್ ಇಲೆವೆನ್ನ ಕ್ಯಾಪ್ಟನ್ ಆಗಿ ಸೌತ್ ಆಫ್ರಿಕಾದ ನಾಯಕ ಟೆಂಬಾ ಬವುಮಾ ಅವರನ್ನು ಹೆಸರಿಸಿದ್ದಾರೆ.
ಈ ಪ್ಲೇಯಿಂಗ್ ಇಲೆವೆನ್ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿರುವುದು ಆಸ್ಟ್ರೇಲಿಯಾದ ಅಲೆಕ್ಸ್ ಕ್ಯಾರಿ. ಇನ್ನು ಆಲ್ರೌಂಡರ್ ಆಗಿ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಆಯ್ಕೆಯಾಗಿದ್ದಾರೆ.
ವೇಗಿಗಳಾಗಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್ ಮತ್ತು ಟೀಮ್ ಇಂಡಿಯಾ ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್ ಆಗಿ ಸೌತ್ ಆಫ್ರಿಕಾದ ಸೈಮನ್ ಹರ್ಮರ್ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: 310ರ ಸ್ಟ್ರೈಕ್ ರೇಟ್ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ…
ಇನ್ನು 12ನೇ ಆಟಗಾರನಾಗಿ ಭಾರತ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೆಸರಿಲಾಗಿದೆ. ಅದರಂತೆ ಕ್ರಿಕೆಟ್ ಆಸ್ಟ್ರೇಲಿಯಾದ 2025ರ ಟೆಸ್ಟ್ ಇಲೆವೆನ್ ಈ ಕೆಳಗಿನಂತಿದೆ…