AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ ವಿರುದ್ಧದ 3ನೇ ಟೆಸ್ಟ್​ಗೆ ಪ್ಲೇಯಿಂಗ್ 11 ಪ್ರಕಟಿಸಿದ ಆಸ್ಟ್ರೇಲಿಯಾ

Australia Playing XI: ಟೀಂ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಗಾಯದಿಂದ ಚೇತರಿಸಿಕೊಂಡಿರುವ ಜೋಶ್ ಹೇಜಲ್‌ವುಡ್ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಸ್ಕಾಟ್ ಬೋಲ್ಯಾಂಡ್ ತಂಡದಿಂದ ಹೊರಬಿದ್ದಿದ್ದಾರೆ. ಉಳಿದಂತೆ ಆಸೀಸ್ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

IND vs AUS: ಭಾರತ ವಿರುದ್ಧದ 3ನೇ ಟೆಸ್ಟ್​ಗೆ ಪ್ಲೇಯಿಂಗ್ 11 ಪ್ರಕಟಿಸಿದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ತಂಡ
Follow us
ಪೃಥ್ವಿಶಂಕರ
|

Updated on: Dec 13, 2024 | 3:50 PM

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ಡಿಸೆಂಬರ್ 14 ರಿಂದ ನಡೆಯಲಿದೆ. ಸರಣಿಯಲ್ಲಿ ಉಭಯ ತಂಡಗಳು 1-1 ರಿಂದ ಸಮಬಲ ಸಾಧಿಸಿರುವುದರಿಂದ ನಾಳೆಯಿಂದ ನಡೆಯಲ್ಲಿರುವ ಮೂರನೇ ಟೆಸ್ಟ್ ಎರಡೂ ತಂಡಗಳಿಗೆ ಅತ್ಯಂತ ಮಹತ್ವದಾಗಿದೆ. ಇದೀಗ ಈ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆತಿಥೇಯ ಆಸ್ಟ್ರೇಲಿಯಾ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಆ ಪ್ರಕಾರ ಆಸ್ಟ್ರೇಲಿಯಾ ತಂಡದಲ್ಲಿ 1 ಬದಲಾವಣೆಯಾಗಿದ್ದು, ಸ್ಕಾಟ್ ಬೋಲ್ಯಾಂಡ್ ಬದಲಿಗೆ ಜೋಶ್ ಹೇಜಲ್‌ವುಡ್ ತಂಡಕ್ಕೆ ಮರಳಿದ್ದಾರೆ.

ಹೇಜಲ್‌ವುಡ್ ಇನ್, ಬೋಲ್ಯಾಂಡ್ ಔಟ್

ವಾಸ್ತವವಾಗಿ ಪರ್ತ್ ಟೆಸ್ಟ್ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಹೇಜಲ್‌ವುಡ್‌ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮೂರನೇ ಟೆಸ್ಟ್​ಗೂ ಮುನ್ನ ಚೇತರಿಸಿಕೊಂಡಿರುವ ಹೇಜಲ್​ವುಡ್​ರನ್ನು ತಂಡಕ್ಕೆ ಮತ್ತೆ ಆಯ್ಕೆ ಮಾಡಲಾಗಿದೆ. ಹೇಜಲ್‌ವುಡ್ ಆಗಮನದಿಂದಾಗಿ ಸ್ಕಾಟ್ ಬೋಲ್ಯಾಂಡ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಬೋಲ್ಯಾಂಡ್ ಅಡಿಲೇಡ್‌ನಲ್ಲಿ ಆಡಿದ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದಾಗ್ಯೂ ಹೇಜಲ್​ವುಡ್ ಆಗಮನದಿಂದಾಗಿ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗಿದೆ.

ಅಡಿಲೇಡ್​ನಲ್ಲಿ ಮಿಂಚಿದ್ದ ಬೋಲ್ಯಾಂಡ್

ಸ್ಕಾಟ್ ಬೋಲ್ಯಾಂಡ್ ಅಡಿಲೇಡ್ ಟೆಸ್ಟ್‌ನಲ್ಲಿ 5 ವಿಕೆಟ್ ಪಡೆದಿದ್ದರು. ಪಿಂಕ್ ಬಾಲ್‌ನಲ್ಲಿ ಆಡಿದ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದಿದ್ದ ಬೋಲ್ಯಾಂಡ್, ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಉರುಳಿಸಿದ್ದರು. ಇತ್ತ ಪರ್ತ್​ನಲ್ಲಿ ಗಾಯಗೊಳ್ಳುವ ಮೊದಲು ಹೇಜಲ್‌ವುಡ್ ಕೂಡ 5 ವಿಕೆಟ್‌ಗಳನ್ನು ಉರುಳಿಸಿದ್ದರು. ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದಿದ್ದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಪಡೆದಿದ್ದರು.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್

ಸರಣಿ 1-1ರಲ್ಲಿ ಸಮಬಲ

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ 295 ರನ್‌ಗಳ ಜಯ ಸಾಧಿಸಿತ್ತು. ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು. ಹೀಗಾಗಿ ಉಭಯ ತಂಡಗಳ ಸರಣಿ 1-1 ರಿಂದ ಸಮಬಲಗೊಂಡಿದೆ. ಇದೀಗ ಸರಣಿಯ ಮೂರನೇ ಟೆಸ್ಟ್ ಬ್ರಿಸ್ಬೇನ್‌ನಲ್ಲಿ ನಡೆಯಲ್ಲಿದ್ದು, ನಾಲ್ಕನೇ ಟೆಸ್ಟ್ ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಹಾಗೆಯೇ ಸರಣಿಯ ಕೊನೆಯ ಟೆಸ್ಟ್ 2025 ರ ಜನವರಿಯಲ್ಲಿ ಸಿಡ್ನಿಯಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ