AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: 6 ವರ್ಷಗಳ ನಂತರ ವಾರ್ನರ್‌ಗೆ ಶುಭ ಸುದ್ದಿ: ನಾಯಕತ್ವ ನಿಷೇಧ ರದ್ದು

David Warner: 2018ರ ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಆಜೀವ ನಾಯಕತ್ವ ನಿಷೇಧಕ್ಕೊಳಗಾಗಿದ್ದ ಡೇವಿಡ್ ವಾರ್ನರ್‌ರ ಮೇಲಿನ ನಿಷೇಧವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹಿಂಪಡೆದಿದೆ. ಕ್ರಿಕೆಟ್ ಆಸ್ಟ್ರೇಲಿಯಾದ ನಡವಳಿಕೆ ಆಯೋಗದ ಪರಿಶೀಲನೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ವಾರ್ನರ್ ಮತ್ತೆ ಆಸ್ಟ್ರೇಲಿಯಾ ತಂಡದ ನಾಯಕತ್ವ ವಹಿಸಬಹುದು. ಆದರೆ, ನಿವೃತ್ತಿಯ ಮುನ್ನ ಟಿ20 ವಿಶ್ವಕಪ್‌ನಲ್ಲಿ ನಾಯಕತ್ವ ವಹಿಸುವ ಅವರ ಆಸೆ ಕೊನೆಗೂ ಈಡೇರಲಿಲ್ಲ.

David Warner: 6 ವರ್ಷಗಳ ನಂತರ ವಾರ್ನರ್‌ಗೆ ಶುಭ ಸುದ್ದಿ: ನಾಯಕತ್ವ ನಿಷೇಧ ರದ್ದು
ಡೇವಿಡ್ ವಾರ್ನರ್
ಪೃಥ್ವಿಶಂಕರ
|

Updated on: Oct 25, 2024 | 11:03 AM

Share

ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದು, ಕ್ರಿಕೆಟ್ ಆಸ್ಟ್ರೇಲಿಯಾದಿಂದ ಅಜೀವ ನಾಯಕತ್ವ ನಿಷೇಧಕ್ಕೊಳಗಾಗಿದ್ದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್​ಗೆ ಕೊನೆಗೂ ಶುಭ ಸುದ್ದಿಯೊಂದು ಸಿಕ್ಕಿದೆ. ಕಳೆದ 6 ವರ್ಷದ ಹಿಂದೆ ವಾರ್ನರ್ ಮೇಲೆ ವಿಧಿಸಿದ್ದ ಆಜೀವ ನಿಷೇಧವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹಿಂಪಡೆದಿದೆ. ಕ್ರಿಕೆಟ್ ಆಸ್ಟ್ರೇಲಿಯಾ ವಿಧಿಸಿದ ಶಿಕ್ಷೆಯ ಪ್ರಕಾರ ವಾರ್ನರ್ 2018 ರಿಂದ ಆಸ್ಟ್ರೇಲಿಯಾದಲ್ಲಿ ಯಾವುದೇ ತಂಡದ ನಾಯಕತ್ವವಹಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಇದೀಗ ಕ್ರಿಕೆಟ್ ಆಸ್ಟ್ರೇಲಿಯದ ನಡುವಳಿಕೆ ಆಯೋಗ ಈ ನಿರ್ಧಾರವನ್ನು ಪರಿಶೀಲಿಸಿದ್ದು, ವಾರ್ನರ್ ಮೇಲಿನ ನಿಷೇಧವನ್ನು ಹಿಂಪಡೆಯಲು ನಿರ್ಧರಿಸಿದೆ.

ವಾರ್ನರ್ ಮೇಲೆ ಹೇರಲಾಗಿದ್ದ ಆಜೀವ ನಾಯಕತ್ವದ ನಿಷೇಧವನ್ನು ಹಿಂತೆಗೆದುಕೊಳ್ಳುವುದರಿಂದ ಅವರು ಈಗ ಮತ್ತೆ ಆಸ್ಟ್ರೇಲಿಯಾದಲ್ಲಿ ಯಾವುದೇ ತಂಡದ ನಾಯಕತ್ವವನ್ನು ವಹಿಸಿಕೊಳ್ಳಬಹುದಾಗಿದೆ. ಇದೀಗ ವಾರ್ನರ್ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದರಿಂದ ಮುಂದಿನ ಬಿಬಿಎಲ್‌ನಲ್ಲಿ ವಾರ್ನರ್ ಸಿಡ್ನಿ ಥಂಡರ್ಸ್‌ ತಂಡದ ನಾಯಕನಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ವಾಸ್ತವವಾಗಿ 2018 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್ ಮಾಡಿದ್ದಕ್ಕಾಗಿ ಡೇವಿಡ್ ವಾರ್ನರ್ ಮೇಲೆ ಈ ನಿಷೇಧ ಹೇರಲಾಗಿತ್ತು. ವಾರ್ನರ್ ಹೊರತಾಗಿ, ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸ್ಟೀವ್ ಸ್ಮಿತ್ ಕೂಡ ತಪ್ಪಿತಸ್ಥರೆಂದು ಸಾಬೀತಾಗಿದ್ದರಿಂದ ಅವರನ್ನು ಸಹ ಒಂದು ವರ್ಷ ಕ್ರಿಕೆಟ್‌ನಿಂದ ನಿಷೇಧಿಸಲಾಗಿತ್ತು.

ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದ್ದೇನು?

ವಾರ್ನರ್‌ಗೆ ನಿಷೇಧ ಹೇರಿದ ಆರು ವರ್ಷಗಳ ನಂತರ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ನಿರ್ಧಾರವನ್ನು ಹಿಂಪಡೆದಿದೆ. ಈ ಕುರಿತು ಕ್ರಿಕೆಟ್ ಆಸ್ಟ್ರೇಲಿಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಕ್ಟೋಬರ್ 25ರಂದು ವಾರ್ನರ್ ಮೇಲೆ ಹೇರಲಾಗಿದ್ದ ಆಜೀವ ನಾಯಕತ್ವ ನಿಷೇಧವನ್ನು ನೀತಿ ಆಯೋಗದ 3 ಸದಸ್ಯರ ಸಮಿತಿ ಪರಿಶೀಲಿಸಿದ್ದು, ಈ ನಿಷೇಧದ ಶಿಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

6 ವರ್ಷಗಳ ಹೋರಾಟ

ಜೀವಮಾನ ನಾಯಕತ್ವದ ನಿಷೇಧವನ್ನು ಮರು ಪರಿಶೀಲಿಸುವಂತೆ ಡೇವಿಡ್ ವಾರ್ನರ್ 2018ರಲ್ಲೇ ಮನವಿ ಮಾಡಿದ್ದರು. ಆದರೆ ಅದು ಯಾವುದೇ ಪ್ರಯೋಜನಕ್ಕೆ ಬಂದಿರಲಿಲ್ಲ. ಹೀಗಾಗಿ 2022 ರಲ್ಲಿ ತಮ್ಮ ಮೇಲ್ಮನವಿಯನ್ನು ಹಿಂತೆಗೆದುಕೊಂಡಿದ್ದರು. 6 ವರ್ಷಗಳ ಕಾಲ ಕಾದ ನಂತರ ಇದೀಗ ನಾಯಕತ್ವದ ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿದೆ. ವಾರ್ನರ್ ಮೇಲಿನ ಈ ನಿಷೇಧ ಆಸ್ಟ್ರೇಲಿಯಾಕ್ಕೆ ಮಾತ್ರ ಸೀಮಿತವಾಗಿತ್ತು. ಇದೀಗ ವಾರ್ನರ್​ಗೆ ನಿಷೇಧ ತೆರವಾದ ಖುಷಿ ಒಂದೆಡೆಯಾದರೆ, ನಿವೃತ್ತಿಯಾಗುವ ಮುನ್ನ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕತ್ವ ವಹಿಸುವ ಆಸೆ ಈಡೇರಿಲ್ಲ ಎಂಬ ವಿಷಾದ ಇನ್ನೊಂದೆಡೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ
ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ:ಕೊರಳಲ್ಲಿ ಅರಿಶಿಣ ಕೊಂಬು ಪತ್ತೆ
ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ:ಕೊರಳಲ್ಲಿ ಅರಿಶಿಣ ಕೊಂಬು ಪತ್ತೆ
ಆಶಾ ಕಾರ್ಯಕರ್ತೆಯರ 2ನೇ ಸುತ್ತಿನ ಸಭೆಯೂ ವಿಫಲ: ಶುಕ್ರವಾರದ ಸಭೆಯತ್ತ ಚಿತ್ತ
ಆಶಾ ಕಾರ್ಯಕರ್ತೆಯರ 2ನೇ ಸುತ್ತಿನ ಸಭೆಯೂ ವಿಫಲ: ಶುಕ್ರವಾರದ ಸಭೆಯತ್ತ ಚಿತ್ತ
ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟ ‘ಪವಿತ್ರ ಬಂಧನ’ದ ದೇವ್
ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟ ‘ಪವಿತ್ರ ಬಂಧನ’ದ ದೇವ್