AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಬ್ಯಾಟ್ ಹಿಡಿದು ಮೈದಾನಕ್ಕಿಳಿಯುವ ಮುನ್ನವೇ ಪರೀಕ್ಷೆ ಕಡ್ಡಾಯ: ಐಸಿಸಿ ಹೊಸ ರೂಲ್ಸ್

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಟರ್‌ಗಳ ಬ್ಯಾಟ್‌ಗಳಿಗೆ ಇನ್ಮುಂದೆ ಕಡ್ಡಾಯ ಪರೀಕ್ಷೆ ಜಾರಿಯಾಗಲಿದೆ. ಐಸಿಸಿ ಹೊಸ ನಿಯಮದ ಪ್ರಕಾರ, ಬ್ಯಾಟ್‌ಗಳ ಗಾತ್ರವು ನಿಗದಿತ ಅಳತೆ ಮೀರಬಾರದು. ಸೌರವ್ ಗಂಗೂಲಿ ನೇತೃತ್ವದ ಸಮಿತಿಯ ಶಿಫಾರಸಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ ಮಾದರಿಯಲ್ಲಿ, ಪಂದ್ಯಕ್ಕೂ ಮುನ್ನ ಅಂಪೈರ್‌ಗಳು ಬ್ಯಾಟ್‌ಗಳನ್ನು ಪರಿಶೀಲಿಸಲಿದ್ದಾರೆ. ಇದು ಕ್ರಿಕೆಟ್‌ನಲ್ಲಿ ಬ್ಯಾಟ್-ಬಾಲ್ ಸಮತೋಲನ ಕಾಯ್ದುಕೊಳ್ಳಲು ನೆರವಾಗಲಿದೆ.

ಇನ್ಮುಂದೆ ಬ್ಯಾಟ್ ಹಿಡಿದು ಮೈದಾನಕ್ಕಿಳಿಯುವ ಮುನ್ನವೇ ಪರೀಕ್ಷೆ ಕಡ್ಡಾಯ: ಐಸಿಸಿ ಹೊಸ ರೂಲ್ಸ್
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Nov 23, 2026 | 9:27 PM

Share

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಟರ್‌ಗಳು ಬಳಸುವ ಬ್ಯಾಟ್‌ಗಳಿಗೂ ಇನ್ಮುಂದೆ ಪರೀಕ್ಷೆ ಕಡ್ಡಾಯವಾಗಲಿದೆ. ಆಟಗಾರರು ನಿಗದಿತ ಅಳತೆಗಿಂತ ದೊಡ್ಡ ಬ್ಯಾಟ್‌ಗಳನ್ನು ಬಳಸುವುದಕ್ಕೆ ಕಡಿವಾಣ ಹಾಕಲು ಐಸಿಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಆಟಗಾರರು ಮೈದಾನಕ್ಕೆ ಇಳಿಯುವ ಮುನ್ನ ಪಂದ್ಯಾಧಿಕಾರಿಗಳು ಅವರ ಬ್ಯಾಟ್‌ಗಳನ್ನು ಅಳೆದು ಪರಿಶೀಲಿಸಲಿದ್ದಾರೆ. ಈಗಾಗಲೇ ಐಪಿಎಲ್‌ನಲ್ಲಿ ಈ ನಿಯಮ ಜಾರಿಯಲ್ಲಿದೆ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈವರೆಗೆ ಇಂತಹ ಪರೀಕ್ಷೆ ಇರಲಿಲ್ಲ. ಇದೀಗ ಐಸಿಸಿ ಕೂಡ ಐಪಿಎಲ್ ಮಾದರಿಯಲ್ಲೇ ಬ್ಯಾಟ್ ಪರಿಶೀಲನೆ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.

ನಿಯಮಗಳೇನು?

ಐಸಿಸಿ ಕ್ರಿಕೆಟ್ ಸಮಿತಿಯ ಶಿಫಾರಸಿನ ಮೇರೆಗೆ ಈ ಹೊಸ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಈ ಸಮಿತಿಯ ಅಧ್ಯಕ್ಷತೆಯನ್ನು ಸೌರವ್ ಗಂಗೂಲಿ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಬಾಲಿಯಲ್ಲಿ ನಡೆದ ಐಸಿಸಿ ಆಡಳಿತ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕರ ಸಮಿತಿ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಅಂಪೈರ್‌ಗಳಿಗೆ ಅಗತ್ಯ ಸೂಚನೆ ನೀಡಿದ ಬಳಿಕ ನಿಯಮವನ್ನು ಜಾರಿಗೆ ತರಲಾಗುತ್ತದೆ. ಕಳೆದ ವರ್ಷದ ಐಪಿಎಲ್‌ನಲ್ಲೇ ಈ ನಿಯಮವನ್ನು ಅನುಷ್ಠಾನಗೊಳಿಸಲಾಗಿತ್ತು.

ಬ್ಯಾಟ್‌ಗೆ ಸಂಬಂಧಿಸಿದ ನಿಯಮಗಳೇನು?

ಎಂಸಿಸಿ ಕ್ರಿಕೆಟ್ ನಿಯಮಗಳ 5ನೇ ನಿಯಮದ ಪ್ರಕಾರ, ಬ್ಯಾಟ್‌ನ ಅಂಚಿನ ದಪ್ಪ 1.56 ಇಂಚು, ಡೆಪ್ತ್ 2.64 ಇಂಚು ಹಾಗೂ ಅಗಲ 4.25 ಇಂಚು ಮೀರಬಾರದು. ಈ ಅಳತೆಗಳನ್ನು ಮೀರಿದ ಬ್ಯಾಟ್‌ಗಳನ್ನು ಆಟಗಾರರು ಬಳಸುವಂತಿಲ್ಲ. ಐಪಿಎಲ್‌ನಲ್ಲಿ ಸುನಿಲ್ ನರೈನ್, ರವೀಂದ್ರ ಜಡೇಜಾ ಮತ್ತು ರಿಯಾನ್ ಪರಾಗ್ ಅವರಂತಹ ಆಟಗಾರರು ಬ್ಯಾಟ್ ಗೇಜ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ಹೀಗಾಗಿ ಅವರು ತಮ್ಮ ಬ್ಯಾಟ್‌ಗಳನ್ನು ಬದಲಾಯಿಸಬೇಕಾದ ಪರಿಸ್ಥಿತಿ ಎದುರಾಗಿತ್ತು.

ಈ ಬದಲಾವಣೆ ಯಾಕೆ ಅಗತ್ಯ?

ಟಿ20 ಕ್ರಿಕೆಟ್‌ನಲ್ಲಿ ವರ್ಷದಿಂದ ವರ್ಷಕ್ಕೆ ಸಿಕ್ಸರ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬ್ಯಾಟಿಂಗ್‌ಗೆ ಪೂರಕವಾದ ಪಿಚ್‌ಗಳು ಹಾಗೂ ಚಿಕ್ಕ ಬೌಂಡರಿಗಳು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಇದರ ಜೊತೆಗೆ ಬ್ಯಾಟ್‌ಗಳ ಗಾತ್ರವೂ ಚರ್ಚೆಯ ವಿಷಯವಾಗಿದೆ. ಈ ವರ್ಷದ ಐಪಿಎಲ್‌ನಲ್ಲಿ ಪ್ರತಿ ಪಂದ್ಯಕ್ಕೆ ಸರಾಸರಿ 19.27 ಸಿಕ್ಸರ್‌ಗಳು ದಾಖಲಾಗಿದ್ದರೆ, 2008ರಲ್ಲಿ ಪ್ರತಿ ಪಂದ್ಯಕ್ಕೆ ಕೇವಲ 8.88 ಸಿಕ್ಸರ್‌ಗಳು ಮಾತ್ರ ದಾಖಲಾಗಿದ್ದವು. ಅಗಲವಾದ ಅಥವಾ ಹೆಚ್ಚು ತೂಕ ಹೊಂದಿರುವ ಬ್ಯಾಟ್‌ಗಳು ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದರ ಜೊತೆಗೆ ಬೌಲರ್‌ಗಳಿಗೆ ಅನ್ಯಾಯವಾಗಬಹುದು. ಇದರಿಂದ ಬ್ಯಾಟ್ ಮತ್ತು ಚೆಂಡಿನ ನಡುವಿನ ಸಮತೋಲನ ಹಾಳಾಗುವ ಸಾಧ್ಯತೆಯಿದೆ ಎಂಬ ಅಭಿಪ್ರಾಯವಿದೆ.

ಈ ಹಿಂದೆ ಪಂದ್ಯ ಆರಂಭಕ್ಕೂ ಮುನ್ನವೇ ಬ್ಯಾಟ್‌ಗಳನ್ನು ಪರಿಶೀಲಿಸಲಾಗುತ್ತಿತ್ತು. ಆದರೆ ಆಟಗಾರರ ಕಿಟ್ ಬ್ಯಾಗ್‌ನಲ್ಲಿರುವ ಎಲ್ಲ ಬ್ಯಾಟ್‌ಗಳನ್ನು ಕಡ್ಡಾಯವಾಗಿ ಪರೀಕ್ಷಿಸಲಾಗುತ್ತಿರಲಿಲ್ಲ. ಹೀಗಾಗಿ ಪರಿಶೀಲನೆಗೆ ಒಳಪಡದ ಬ್ಯಾಟ್‌ಗಳನ್ನು ಆಟಗಾರರು ಪಂದ್ಯದಲ್ಲಿ ಬಳಸುವ ಸಾಧ್ಯತೆಯಿತ್ತು. ಆದರೆ ಹೊಸ ನಿಯಮದ ಪ್ರಕಾರ ಕಟ್ಟುನಿಟ್ಟಿನ ಪರಿಶೀಲನೆ ನಡೆಯಲಿದ್ದು, ನಿಯಮ ಉಲ್ಲಂಘನೆಗೆ ಅವಕಾಶ ಕಡಿಮೆಯಾಗಲಿದೆ. ಈ ಬದಲಾವಣೆಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಐಸಿಸಿ ನಿಯಮ ಉಲ್ಲಂಘಿಸಿದ ಟೀಂ ಇಂಡಿಯಾ; ಪ್ರತಿ ಆಟಗಾರನಿಗೆ 2.10 ಲಕ್ಷ ರೂ. ದಂಡ

ಚೆಂಡಿನ ಗುಣಮಟ್ಟ ಸುಧಾರಣೆಗೂ ಐಸಿಸಿ ಚಿಂತನೆ

ಬ್ಯಾಟ್‌ಗಳ ಪರಿಶೀಲನೆ ಮಾತ್ರವಲ್ಲದೆ ಕ್ರಿಕೆಟ್ ಚೆಂಡಿನ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲೂ ಐಸಿಸಿ ಕ್ರಿಕೆಟ್ ಸಮಿತಿ ಕೆಲಸ ಆರಂಭಿಸಿದೆ. ಇದರ ಭಾಗವಾಗಿ 2029 ಮತ್ತು 2030ರಲ್ಲಿ ನಡೆಯಲಿರುವ 19 ವರ್ಷದೊಳಗಿನವರ ವಿಶ್ವಕಪ್‌ನಿಂದಲೇ ವಯೋಮಾನದ ಕ್ರಿಕೆಟ್‌ನಲ್ಲಿ ವಿಭಿನ್ನ ಮಾದರಿಯ ಚೆಂಡುಗಳನ್ನು ಪರೀಕ್ಷಿಸುವಂತೆ ಶಿಫಾರಸು ಮಾಡಲಾಗಿದೆ. ಸದ್ಯ ಐಸಿಸಿಯ ಪ್ರಮುಖ ಸೀಮಿತ ಓವರ್‌ಗಳ ಪಂದ್ಯಾವಳಿಗಳಲ್ಲಿ ಬಿಳಿ ಕೂಕಬುರಾ ಚೆಂಡುಗಳನ್ನು ಬಳಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚೆಂಡಿನ ಗುಣಮಟ್ಟದಲ್ಲೂ ಬದಲಾವಣೆ ತರುವ ಮೂಲಕ ಕ್ರಿಕೆಟ್‌ನಲ್ಲಿ ಬ್ಯಾಟ್ ಮತ್ತು ಬಾಲ್ ನಡುವಿನ ಸಮತೋಲನ ಕಾಪಾಡಲು ಐಸಿಸಿ ಮುಂದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಸಾಮಾನ್ಯ ಹಾಲ್ಮಾರ್ಕ್ ಪರೀಕ್ಷೆಗೂ ಸಿಗದ ನಕಲಿ ಚಿನ್ನದ ಜಾಲ
ಬೆನ್ನುನೋವು: ಜೈಲಿನ ಹೊರಗಡೆ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಅರ್ಜಿ
ಬೆನ್ನುನೋವು: ಜೈಲಿನ ಹೊರಗಡೆ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಅರ್ಜಿ
ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿರುವುದು ಕಾಂಗ್ರೆಸ್​ಗೆ ಮಾರಕ: ರಾಜಣ್ಣ
ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸದಿರುವುದು ಕಾಂಗ್ರೆಸ್​ಗೆ ಮಾರಕ: ರಾಜಣ್ಣ
ಶಾಸಕ ಸ್ಥಾನಕ್ಕೆ ರಾಜೀನಾಮೆ: ನುಡಿದಂತೆ ನಡೆದ ನಯನಾ ಮೋಟಮ್ಮ!
ಶಾಸಕ ಸ್ಥಾನಕ್ಕೆ ರಾಜೀನಾಮೆ: ನುಡಿದಂತೆ ನಡೆದ ನಯನಾ ಮೋಟಮ್ಮ!
ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಗೆ ಬದುಕಿನ ಸಂಕಷ್ಟ
ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಗೆ ಬದುಕಿನ ಸಂಕಷ್ಟ