AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೊದಲ ಪರ್ತ್, ಈಗ ಅಡಿಲೇಡ್; ಮತ್ತೆ ಸೊನ್ನೆ ಸುತ್ತಿದ ಯಶಸ್ವಿ ಜೈಸ್ವಾಲ್

Yashasvi Jaiswal Duck: ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಮೊದಲು ಬ್ಯಾಟ್ ಮಾಡಲು ಆಯ್ಕೆ ಮಾಡಿಕೊಂಡಿದೆ. ಆದರೆ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಲ್ಲಿಯೇ ಮಿಚೆಲ್ ಸ್ಟಾರ್ಕ್​ಗೆ ಬಲಿಯಾದರು. ಇದು ಭಾರತಕ್ಕೆ ಆರಂಭಿಕ ಆಘಾತವಾಗಿದೆ. ಪರ್ತ್ ಪಂದ್ಯದಲ್ಲಿಯೂ ಜೈಸ್ವಾಲ್ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆಗಿದ್ದರು. ಆದಾಗ್ಯೂ, ಶುಭ್‌ಮನ್ ಗಿಲ್ ಮತ್ತು ಕೆ.ಎಲ್. ರಾಹುಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

IND vs AUS: ಮೊದಲ ಪರ್ತ್, ಈಗ ಅಡಿಲೇಡ್; ಮತ್ತೆ ಸೊನ್ನೆ ಸುತ್ತಿದ ಯಶಸ್ವಿ ಜೈಸ್ವಾಲ್
ಯಶಸ್ವಿ ಜೈಸ್ವಾಲ್
ಪೃಥ್ವಿಶಂಕರ
|

Updated on: Dec 06, 2024 | 10:35 AM

Share

ಅಡಿಲೇಡ್ ಟೆಸ್ಟ್‌ನಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಆರಂಭಿಸಿದೆ. ಆದರೆ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಗಿದೆ. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿಯೇ ಆರಂಭಿಕ ಯಶಸ್ವಿ ಜೈಸ್ವಾಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ ಮೊದಲ ಎಸೆತದಲ್ಲೇ ಜೈಸ್ವಾಲ್​ ಎಲ್​ಬಿ ಬಲೆಗೆ ಬಿದ್ದರು. ಮೊದಲ ಎಸೆತವನ್ನು ಬೌಂಡರಿಗಟ್ಟುವ ಪ್ರಯತ್ನಕ್ಕೆ ಕೈಹಾಕಿದ್ದೆ ಜೈಸ್ವಾಲ್ ವಿಕೆಟ್ ಪತನಕ್ಕೆ ಕಾರಣವಾಯಿತು. ಇನ್ನಿಂಗ್ಸ್​ನ ಮೊದಲ ಎಸೆತದಲ್ಲಿಯೇ ವಿಕೆಟ್ ಕಳೆದುಕೊಂಡಿರುವುದರಿಂದ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ.

ಮೊದಲ ಪರ್ತ್, ಈಗ ಅಡಿಲೇಡ್

ಮೊದಲ ಎಸೆತದಲ್ಲಿ ಔಟಾದ ಕಾರಣ, ಅಡಿಲೇಡ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಇದಕ್ಕೂ ಮುನ್ನ ಅವರು ಪರ್ತ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲೂ ಖಾತೆ ತೆರೆಯದೆ ಔಟಾಗಿದ್ದರು. ಎರಡೂ ಪಂದ್ಯಗಳ ಮೊದಲ ಇನ್ನಿಂಗ್ಸ್‌ನಲ್ಲಿ ಜೈಸ್ವಾಲ್​ರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಆಸೀಸ್ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದಾರೆ.

ಸ್ಟಾರ್ಕ್‌ ಕಾಲೆಳದಿದ್ದ ಜೈಸ್ವಾಲ್

ವಾಸ್ತವವಾಗಿ ಪರ್ತ್​ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಸ್ಟಾರ್ಕ್‌ಗೆ ಶೂನ್ಯಕ್ಕೆ ಔಟಾಗಿದ್ದ ಯಶಸ್ವಿ ಜೈಸ್ವಾಲ್ ಅವರು ಪರ್ತ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದರು. ಎರಡನೇ ಇನ್ನಿಂಗ್ಸ್​ನಲ್ಲಿ ಜೈಸ್ವಾಲ್, ಸ್ಟಾರ್ಕ್​ ವಿರುದ್ಧ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದರು. ಈ ವೇಳೆ ಸ್ಟಾರ್ಕ್​ರನ್ನು ಸ್ಲೆಡ್ಜ್ ಮಾಡಿ ಜೈಸ್ವಾಲ್ ಸಖತ್ ಸುದ್ದಿಯಾಗಿದ್ದರು. ಆದರೀಗ ಮತ್ತೊಮ್ಮೆ ಜೈಸ್ವಾಲ್​ರನ್ನು ಶೂನ್ಯಕ್ಕೆ ಔಟ್ ಮಾಡಿರುವ ಸ್ಟಾರ್ಕ್​, ಯುವ ಆಟಗಾರನ ವಿರುದ್ಧ ತಮ್ಮ ಸೇಡು ತೀರಿಸಿಕೊಂಡಿದ್ದಾರೆ.

ಮರುಕಳಿಸುತ್ತಾ ಹಳೆಯ ಇತಿಹಾಸ?

ಅಡಿಲೇಡ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಜೈಸ್ವಾಲ್ ವಿಕೆಟ್ ಪತನವಾಗುವುದರೊಂದಿಗೆ, ಅಡಿಲೇಡ್‌ನಲ್ಲಿ 4 ವರ್ಷಗಳ ಹಿಂದೆ ನಡೆದಿದ್ದ ಅದೊಂದು ಅವಮಾನಕರ ಘಟನೆ ಮತ್ತೆ ಮರುಕಳಿಸುತ್ತಾ ಎಂಬ ಭಯ ಟೀಂ ಇಂಡಿಯಾ ಅಭಿಮಾನಿಗಳನ್ನು ಕಾಡಲಾರಂಭಿಸಿದೆ. 4 ವರ್ಷಗಳ ಹಿಂದೆ ಅಂದರೆ ಡಿಸೆಂಬರ್ 2020 ರಲ್ಲಿ ಅಡಿಲೇಡ್‌ನಲ್ಲಿ ನಡೆದಿದ್ದ ಮೊದಲ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಭಾರತ ತಂಡವು ಕೇವಲ 36 ರನ್​ಗಳಿಗೆ ಆಲೌಟ್ ಆಗಿತ್ತು.

ಆದರೆ ಜೈಸ್ವಾಲ್ ವಿಕೆಟ್​ ಪತನದ ಬಳಿಕ ಕ್ರೀಸ್​ಗೆ ಬಂದಿರುವ ಶುಭ್​ಮನ್ ಗಿಲ್, ಸ್ಟಾರ್ಕ್‌ ಅವರ ಒಂದೇ ಓವರ್​ನಲ್ಲಿ ಎರಡು ಬೌಂಡರಿ ಬಾರಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದ್ದಾರೆ. ಗಿಲ್​ಗೆ ರಾಹುಲ್​ರಿಂದಲೂ ಉತ್ತಮ ಸಾಥ್ ಸಿಕ್ಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್