Shabaash Mithu Trailer: ಶಭಾಷ್ ಮಿಥು ಸಿನಿಮಾದ ಟ್ರೇಲರ್ ಬಿಡುಗಡೆ; ಮಿಥಾಲಿ ರಾಜ್ ಬಯೋಪಿಕ್​ನಲ್ಲಿ ಮಿಂಚಿದ ತಾಪ್ಸಿ

Shabaash Mithu Trailer: ಈ ತಿಂಗಳ ಜೂನ್ 8 ರಂದು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದಂತಕಥೆ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಿಗೆ ನಿವೃತ್ತಿ ಘೋಷಿಸಿದರು.

Shabaash Mithu Trailer: ಶಭಾಷ್ ಮಿಥು ಸಿನಿಮಾದ ಟ್ರೇಲರ್ ಬಿಡುಗಡೆ; ಮಿಥಾಲಿ ರಾಜ್ ಬಯೋಪಿಕ್​ನಲ್ಲಿ ಮಿಂಚಿದ ತಾಪ್ಸಿ
Shabash Mithu trailer released
Follow us
TV9 Web
| Updated By: ಪೃಥ್ವಿಶಂಕರ

Updated on: Jun 20, 2022 | 7:44 PM

ಭಾರತದಲ್ಲಿ ಪುರುಷರ ಕ್ರಿಕೆಟ್ ಮಾತ್ರವಲ್ಲದೆ ಮಹಿಳಾ ಕ್ರಿಕೆಟ್ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೆಣ್ಣು ಮಕ್ಕಳೂ ಈ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಇದನ್ನೇ ಗಮನದಲ್ಲಿಟ್ಟುಕೊಂಡು ಬಾಲಿವುಡ್​ನಲ್ಲಿ ಕೇವಲ ಪುರುಷ ಕ್ರಿಕೆಟಿಗರ ಬಯೋಪಿಕ್ ಅಲ್ಲದೆ ಮಹಿಳಾ ಕ್ರಿಕೆಟಿಗರ ಕುರಿತ ಚಿತ್ರಗಳೂ ಸಹ ಜನರ ಗಮನ ಸೆಳೆಯಲು ಮುಂದಾಗುತ್ತಿವೆ. ಈ ಸಂಚಿಕೆಯಲ್ಲಿ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ (Mitali Raj) ಆಧಾರಿತ ಶಭಾಶ್ ಮಿಥು (Shabaash Mithu) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ತಾಪ್ಸಿ ಪನ್ನು (Bollywood actress Taapsee Pannu), ಮಿಥಾಲಿ ರಾಜ್ ಪಾತ್ರದಲ್ಲಿ ತುಂಬಾ ಪರಿಣಾಮಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ಕೂಡ ಸಾಕಷ್ಟು ಲೈಕ್ಸ್ ಪಡೆಯುತ್ತಿದೆ.

ಚಿತ್ರದ ಟ್ರೇಲರ್ ಹಂಚಿಕೊಂಡ ತಾಪ್ಸಿ

ಇದನ್ನೂ ಓದಿ
Image
Virat Test Debut: ವಿರಾಟ್ ಟೆಸ್ಟ್ ಬದುಕಿಗೆ ಭರ್ತಿ 11 ವರ್ಷ! ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿಯ ಅವಿಸ್ಮರಣೀಯ ಇನ್ನಿಂಗ್ಸ್​ಗಳಿವು
Image
ವಿಶ್ವಕಪ್​ನಲ್ಲಿ ಸಚಿನ್- ಸೆಹ್ವಾಗ್ ವಿಕೆಟ್ ಕಬಳಿಸಿದ್ದ ಸ್ಟಾರ್ ಬೌಲರ್​ ಕ್ರಿಕೆಟ್​ಗೆ ಹಠಾತ್ ವಿದಾಯ..!

ಬಾಲಿವುಡ್ ನಟಿ ತಾಪ್ಸಿ ಪನ್ನು ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶಭಾಶ್ ಮಿಥು ಚಿತ್ರದ ಟ್ರೇಲರ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ “ಮಿಥಾಲಿ ರಾಜ್ ಹೆಸರು ನಿಮಗೆ ಗೊತ್ತು, ಈಗ ಅವರ ಬದುಕಿನ ಬಗ್ಗೆ ತಿಳಿಯಲು ಸಿದ್ಧರಾಗಿರಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Mithali Raj: ಕ್ರಿಕೆಟ್​ ಬದುಕಿಗೆ ವಿದಾಯ ಹೇಳಿದ ಲೇಡಿ ಸಚಿನ್ ಮಿಥಾಲಿ ರಾಜ್ ಎಷ್ಟು ಕೋಟಿಯ ಒಡತಿ ಗೊತ್ತಾ?

ವಿಶ್ವದಲ್ಲಿ ಮಹಿಳಾ ಕ್ರಿಕೆಟ್‌ಗೆ ವಿಶಿಷ್ಟ ಸ್ಥಾನವಿದೆ

ಈ ಚಿತ್ರದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಬಾಲ್ಯದಿಂದಲೂ ಕ್ರಿಕೆಟ್ ಆಡುವ ಕನಸು ಮತ್ತು ಅದನ್ನು ಈಡೇರಿಸುವ ಮೂಲಕ ಅವರು ಭಾರತ ಕ್ರಿಕೆಟ್ ತಂಡದ ನಾಯಕಿ ಮಾತ್ರವಲ್ಲದೆ ಮಹಿಳಾ ಕ್ರಿಕೆಟ್ ಅನ್ನು ಬೇರೆಯ ಹಂತಕ್ಕೆ ಕೊಂಡೊಯ್ದ ಸಂಪೂರ್ಣ ಕಥೆಯನ್ನು ಚೆನ್ನಾಗಿ ತೋರಿಸಲಾಗಿದೆ ಎಂದು ತಾಪ್ಸಿ ಹೇಳಿದ್ದಾರೆ. ಚಿತ್ರದ ಟ್ರೇಲರ್‌ಗೆ ಸಾಕಷ್ಟು ಲೈಕ್‌ಗಳು ಸಹ ಬರುತ್ತಿವೆ.

View this post on Instagram

A post shared by Taapsee Pannu (@taapsee)

ಈ ದಿನದಂದು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ

ಶ್ರೀಜಿತ್ ಮುಖರ್ಜಿ ನಿರ್ದೇಶನದ ಶಭಾಷ್ ಮಿಥು, ಚಿತ್ರ ಮಿಥಾಲಿ ರಾಜ್ ಜೀವನಾಧಾರಿತವಾಗಿದೆ. ಇದರಲ್ಲಿ ತಾಪ್ಸಿ ಪನ್ನು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಟ್ರೈಲರ್ ಜೂನ್ 20 ರಂದು ಬಿಡುಗಡೆಯಾಗಿದೆ. ಚಿತ್ರವು ಜುಲೈ 15, 2022 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ತಾಪ್ಸಿ ಹೊರತುಪಡಿಸಿ, ಮುಮ್ತಾಜ್ ಸರ್ಕಾರ್ ಚಿತ್ರದಲ್ಲಿ ಜುಲ್ಹಾನ್ ಗೋಸ್ವಾಮಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಿಥಾಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ

ಈ ತಿಂಗಳ ಜೂನ್ 8 ರಂದು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದಂತಕಥೆ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಿಗೆ ನಿವೃತ್ತಿ ಘೋಷಿಸಿದರು. 39 ವರ್ಷದ ಕ್ರಿಕೆಟರ್ 16 ನೇ ವಯಸ್ಸಿನಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಿದರು. ಅವರ ಸುದೀರ್ಘ ಕ್ರಿಕೆಟ್ ವೃತ್ತಿಜೀವನದಲ್ಲಿ ಅವರು 12 ಟೆಸ್ಟ್‌ಗಳಲ್ಲಿ 699 ರನ್, 232 ODIಗಳಲ್ಲಿ 7805 ರನ್ ಮತ್ತು 89 T20I ಗಳಲ್ಲಿ 2364 ರನ್ ಗಳಿಸಿದ್ದಾರೆ. ಅವರು 2000, 2005, 2009, 2013 ಮತ್ತು 2017 ರ ಮಹಿಳಾ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡದ ನಾಯಕತ್ವವನ್ನು ವಹಿಸಿದ್ದರು. ಆದರೆ ಅವರ ನಾಯಕತ್ವದಲ್ಲಿ ಭಾರತವು ಒಂದೇ ಒಂದು ವಿಶ್ವಕಪ್ ಗೆಲ್ಲಲು ಸಾಧ್ಯವಾಗಲಿಲ್ಲ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ