AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ನಿರ್ಣಾಯಕ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾಗೆ ಶಾಕ್; ಇಬ್ಬರು ಆಟಗಾರರು ತವರಿಗೆ ವಾಪಸ್!

ಕೇಪ್ ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ. 1-1 ಸಮಬಲವಾಗಿರುವ ಸರಣಿಯ ಈ ನಿರ್ಣಾಯಕ ಪಂದ್ಯಕ್ಕೆ ಮ್ಯಾಡಿಸನ್ ಬದಲಿಗೆ ಮ್ಯಾಟ್ ರೆನ್‌ಶಾ ಹೊಸ ಆರಂಭಿಕರಾಗುವ ಸಾಧ್ಯತೆ ಇದೆ. ಪ್ರಮುಖ ಆಟಗಾರ ಸ್ಟೀವ್ ಸ್ಮಿತ್ ಕುತ್ತಿಗೆ ನೋವಿನಿಂದ ಬಳಲುತ್ತಿದ್ದು, ಅವರ ಲಭ್ಯತೆ ಇನ್ನೂ ಖಚಿತವಾಗಿಲ್ಲ. ಈ ಬದಲಾವಣೆಗಳು ಪಂದ್ಯದ ಫಲಿತಾಂಶದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬ ಕುತೂಹಲವಿದೆ.

ಸರಣಿ ನಿರ್ಣಾಯಕ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾಗೆ ಶಾಕ್; ಇಬ್ಬರು ಆಟಗಾರರು ತವರಿಗೆ ವಾಪಸ್!
ಆಸ್ಟ್ರೇಲಿಯಾ ತಂಡ (ಪ್ರಾತಿನಿಧಿಕ ಚಿತ್ರ)
ಪೃಥ್ವಿಶಂಕರ
|

Updated on: Oct 26, 2026 | 5:08 PM

Share

ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್‌ಟೌನ್‌ನಲ್ಲಿ ನಡೆಯಲಿರುವ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಈಗಾಗಲೇ 1-1ರಿಂದ ಸಮಬಲದಲ್ಲಿದೆ. ಹೀಗಾಗಿ ಅಕ್ಟೋಬರ್ 27ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳ ಪಾಲಿಗೆ ನಿರ್ಣಾಯಕವಾಗಿದೆ. ಈ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಹೊಸ ಆರಂಭಿಕ ಜೋಡಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಇಬ್ಬರಿಗೆ ವಿಶ್ರಾಂತಿ, ತವರಿಗೆ ವಾಪಸ್

ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದಿಂದ ನಿಕ್ ಮ್ಯಾಡಿಸನ್ ಮತ್ತು ಮೀಸಲು ವಿಕೆಟ್‌ಕೀಪರ್ ಸ್ಯಾಮ್ ಹಾರ್ಪರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಈ ಇಬ್ಬರೂ ಆಟಗಾರರು ತವರಿಗೆ ಮರಳಿದ್ದು, ಅಲ್ಲಿನ ದೇಶೀಯ ಕ್ರಿಕೆಟ್ ಟೂರ್ನಿಯಾದ ಶೆಫೀಲ್ಡ್ ಶೀಲ್ಡ್‌ನಲ್ಲಿ ಆಡಲಿದ್ದಾರೆ.

3ನೇ ಟೆಸ್ಟ್‌ನಲ್ಲಿ ಹೊಸ ಆರಂಭಿಕ ಜೋಡಿ?

ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿಕ್ ಮ್ಯಾಡಿಸನ್ ಮತ್ತು ಟ್ರಾವಿಸ್ ಹೆಡ್ ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಇದೀಗ ಮ್ಯಾಡಿಸನ್ ತಂಡದಿಂದ ಹೊರಗುಳಿದಿರುವುದರಿಂದ ಅವರ ಸ್ಥಾನದಲ್ಲಿ ಮ್ಯಾಟ್ ರೆನ್‌ಶಾ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಸರಣಿ ನಿರ್ಣಾಯಕ ಹಂತ ತಲುಪಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಈ ಬದಲಾವಣೆ ಪಂದ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಸ್ಟೀವ್ ಸ್ಮಿತ್ ಆಡುತ್ತಾರಾ?

ಆಸ್ಟ್ರೇಲಿಯಾದ ಪ್ರಮುಖ ಬ್ಯಾಟರ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಸ್ಮಿತ್ ಅವರ ಫಿಟ್‌ನೆಸ್ ಪರಿಶೀಲಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಸ್ಮಿತ್ ಆಸ್ಟ್ರೇಲಿಯಾ ತಂಡದ ಪ್ರಮುಖ ಬ್ಯಾಟರ್ ಆಗಿರುವುದರಿಂದ, ಅವರು ಪಂದ್ಯಕ್ಕೆ ಅಲಭ್ಯರಾದರೆ ಸರಣಿ ನಿರ್ಣಾಯಕ ಟೆಸ್ಟ್‌ನಲ್ಲಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್

3ನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಬುಶೇನ್, ನಾಥನ್ ಲಯನ್, ಮೈಕೆಲ್ ನೆಸರ್, ಮ್ಯಾಟ್ ರೆನ್‌ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಮತ್ತು ಬ್ಯೂ ವೆಬ್‌ಸ್ಟರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ತಮ್ಮದೇ ಸರ್ಕಾರದ ವಿರುದ್ಧ ವಿಎಸ್ ಉಗ್ರಪ್ಪ ಉಗ್ರ ಸ್ವರೂಪ, ಖಡಕ್ ಎಚ್ಚರಿಕೆ
ತಮ್ಮದೇ ಸರ್ಕಾರದ ವಿರುದ್ಧ ವಿಎಸ್ ಉಗ್ರಪ್ಪ ಉಗ್ರ ಸ್ವರೂಪ, ಖಡಕ್ ಎಚ್ಚರಿಕೆ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಲಖನೌದಲ್ಲಿ ಕಾರು ಪಾರ್ಕಿಂಗ್ ವಿಚಾರಕ್ಕೆ ಗುಂಡಿನ ದಾಳಿ
ಕಾಮಗಾರಿ ವಿಳಂಬ: ಗುತ್ತಿಗೆದಾರರು, ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಾಮಗಾರಿ ವಿಳಂಬ: ಗುತ್ತಿಗೆದಾರರು, ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಹೇಗಿದೆ ಗೊತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್​​ ರೈಲು?
ಹೇಗಿದೆ ಗೊತ್ತಾ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್​​ ರೈಲು?
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ
ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ