AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈಭವ್​, ಜೈಸ್ವಾಲ್​ರಂತವರಿಗೆ ಕಠಿಣ ಶಿಕ್ಷೆಯಾಗಬೇಕು’; ಸಂಜಯ್ ಮಂಜ್ರೆಕರ್

ICC Rules on Player Misconduct: ಯಾವುದೇ ಕ್ರೀಡೆಯಲ್ಲಿ ಆಟಗಾರರ ಜಗಳ ಸಾಮಾನ್ಯ. ಆದರೆ ಕ್ರಿಕೆಟ್‌ನಲ್ಲಿ ICC ಕಠಿಣ ನಿಯಮಗಳನ್ನು ಹೊಂದಿದೆ. ಇತ್ತೀಚೆಗೆ ಯಶಸ್ವಿ ಜೈಸ್ವಾಲ್ ಮತ್ತು ಅಸಿತಾ ಫೆರ್ನಾಂಡೋ ನಡುವಿನ ಘಟನೆಗೆ ICC ದಂಡ ವಿಧಿಸಿತು. ಆದರೆ ಸಂಜಯ್ ಮಂಜ್ರೇಕರ್ ಈ ಶಿಕ್ಷೆ ಸಾಕಾಗುವುದಿಲ್ಲ, ಆಟಗಾರರ ಅನುಚಿತ ವರ್ತನೆಗೆ ಇನ್ನು ಕಠಿಣ ಕ್ರಮಗಳು ಬೇಕು ಎಂದು ಆಗ್ರಹಿಸಿದ್ದಾರೆ. ಯುವ ಆಟಗಾರರಿಗೆ ಸರಿಯಾದ ಸಂದೇಶ ರವಾನಿಸಲು ಕಠಿಣ ನಿಯಮಗಳು ಅವಶ್ಯಕ ಎಂದಿದ್ದಾರೆ.

‘ವೈಭವ್​, ಜೈಸ್ವಾಲ್​ರಂತವರಿಗೆ ಕಠಿಣ ಶಿಕ್ಷೆಯಾಗಬೇಕು’; ಸಂಜಯ್ ಮಂಜ್ರೆಕರ್
Team India
ಪೃಥ್ವಿಶಂಕರ
|

Updated on:Aug 26, 2026 | 4:06 PM

Share

ಯಾವುದೇ ಕ್ರೀಡೆಯಾಗಲಿ ಅದರಲ್ಲಿ ಆಟಗಾರರ ನಡುವಿನ ಜಗಳ ಸರ್ವೆ ಸಾಮ್ಯಾನ. ಈ ರೀತಿಯ ಜಗಳಗಳಿಂದ ಕೆಲವೊಮ್ಮೆ ಆಟಗಾರರು ಕಠಿಣ ಶಿಕ್ಷೆಗೆ ಗುರಿಯಾಗಿ ತಮ್ಮ ವೃತ್ತಿಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಆದರೆ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಜಗಳಗಳು ಸಹಜವಾಗಿದ್ದರೂ ಅವು ಗಂಭೀರ ಸ್ವರೂಪ ಪಡೆದುಕೊಳ್ಳುವುದಿಲ್ಲ. ಏಕೆಂದರೆ ಈ ರೀತಿಯ ಜಗಳಗಳಾಗದಂತೆ ತಡೆಯಲು ಐಸಿಸಿ (ICC) ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಹೀಗಾಗಿಯೇ ಆಟಗಾರರು ಜಗಳಕ್ಕಿಳಿಯುವ ಮುನ್ನ ನೂರು ಭಾರಿ ಯೋಚಿಸುತ್ತಾರೆ. ಆದರೆ ಕೆಲವೊಮ್ಮೆ ಆಟಗಾರರು ತಾಳ್ಮೆ ಕಳೆದುಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತಾರೆ. ಅಂತಹವರಿಗೆ ಐಸಿಸಿ ದಂಡದ ಜೊತೆಗೆ ಡಿಮೆರಿಟ್ ಅಂಕಗಳನ್ನು ನೀಡುವುದು ಹಾಗೆಯೇ ಅವರನ್ನು ಪಂದ್ಯದಿಂದ ನಿಷೇಧಿಸುವ ಕ್ರಮವನ್ನು ಕೈಗೊಳ್ಳುತ್ತದೆ.

ಇನ್ನು ಕಠಿಣ ಶಿಕ್ಷೆಯಾಗಬೇಕು

ಇದೀಗ ಶ್ರೀಲಂಕಾದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಯಶಸ್ವಿ ಜೈಸ್ವಾಲ್ ಹಾಗೂ ಶ್ರೀಲಂಕಾದ ಅಸಿತಾ ಫೆರ್ನಾಂಡೋ ಪರಸ್ಪರ ಜಗಳ ಮಾಡಿಕೊಂಡಿದ್ದರು. ಇದರ ಪರಿಣಾಮವಾಗಿ ಇವರಿಬ್ಬರಿಗೆ ಐಸಿಸಿ ದಂಡದ ಜೊತೆಗೆ ಡಿಮೆರಿಟ್ ಅಂಕವನ್ನು ಸಹ ಶಿಕ್ಷೆಯಾಗಿ ವಿಧಿಸಿತ್ತು. ಆದರೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಪ್ರಕಾರ ಐಸಿಸಿ ವಿಧಿಸಿರುವ ಶಿಕ್ಷೆ ಸಾಧಾರಣವಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಇನ್ನು ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.

ಸರಿಯಾದ ಸಂದೇಶವನ್ನು ನೀಡುವುದಿಲ್ಲ

ಯಶಸ್ವಿ ಜೈಸ್ವಾಲ್​ಗೆ ದಂಡದ ಜೊತೆಗೆ ಡಿಮೆರಿಟ್ ಅಂಕವನ್ನು ನೀಡಿರುವ ಶಿಕ್ಷೆ ಸಾಕಾಗದು ಎಂದಿರುವ ಮಂಜ್ರೇಕರ್, ಮೈದಾನದಲ್ಲಿ ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗುವ ಆಟಗಾರರ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ ಎಂದಿದ್ದಾರೆ. ಇದೇ ವೇಳೆ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರ ಹಿಂದಿನ ಘಟನೆಯನ್ನು ಮಂಜ್ರೇಕರ್ ಉಲ್ಲೇಖಿಸಿದ್ದಾರೆ. ಈ ವರ್ಷ ನಡೆದ ತ್ರಿಕೋನ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪರ ಆಡಿದ್ದರು. ಆ ಸಮಯದಲ್ಲಿ ಅವರು ಶ್ರೀಲಂಕಾದ ಆಟಗಾರರ ಜೊತೆ ಜಗಳ ಮಾಡಿಕೊಂಡಿದ್ದರು. ಆ ಘಟನೆಯನ್ನು ಇಲ್ಲಿ ಪ್ರಸ್ತಾಪಿಸಿರುವ ಮಂಜ್ರೇಕರ್, ಇಂತಹ ಘಟನೆಗಳು ಮರುಕಳಿಸದಂತೆ ಐಸಿಸಿ ಮತ್ತು ಬಿಸಿಸಿಐ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ ಅಂತಹ ನಡವಳಿಕೆಯನ್ನು ನಿರ್ಲಕ್ಷಿಸುವುದು ಯುವ ಆಟಗಾರರಿಗೆ ಸರಿಯಾದ ಸಂದೇಶವನ್ನು ನೀಡುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಮಂಜ್ರೇಕರ್, ‘ಈ ಹಿಂದೆ ವೈಭವ್ ಮತ್ತು ಈಗ ಜೈಸ್ವಾಲ್. ಇವರಿಬ್ಬರು ಮೈದಾನದಲ್ಲಿ ನಡೆದುಕೊಂಡಿದ್ದಕ್ಕೆ ಸರಿಯಾದ ಶಿಕ್ಷೆ ವಿಧಿಸದೆ ಹಾಗೆಯೇ ಬಿಟ್ಟರೆ, ಅದು ಅವರಿಗೆ ಅದೇ ನಡವಳಿಕೆಯನ್ನು ಪುನರಾವರ್ತಿಸಲು ಅವಕಾಶ ಮಾಡಿಕೊಂಡಂತೆ. ಇಂತಹ ಘಟನೆಗಳು ಕ್ರೀಡೆಗೆ ಒಳ್ಳೆಯದಲ್ಲ ಮತ್ತು ಆಟಗಾರರ ಭವಿಷ್ಯದ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಈ ರೀತಿಯಾಗಿ ನಿಯಮ ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಂಜ್ರೇಕರ್ ಸಲಹೆ ನೀಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Wed, 26 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ