AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಇಂಗ್ಲೆಂಡ್​ನಲ್ಲಿ ಬೆಲೆಯೇ ಇಲ್ಲ

India vs England Test Series: ಭಾರತ ಕ್ರಿಕೆಟ್ ತಂಡವು ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಲುಪಿದೆ. ಶುಭ್ಮನ್ ಗಿಲ್ ನೇತೃತ್ವದ ಯುವ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸ್ವಾಗತ ದೊರೆಯಲಿಲ್ಲ. ಕೊಹ್ಲಿ ಮತ್ತು ರೋಹಿತ್ ಅವರ ನಿವೃತ್ತಿಯ ನಂತರ, ಈ ಸರಣಿಯು ಭಾರತಕ್ಕೆ ದೊಡ್ಡ ಪರೀಕ್ಷೆಯಾಗಲಿದೆ. 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕೂಡ ಈ ಸರಣಿಯಿಂದ ಆರಂಭವಾಗುತ್ತಿದೆ. ಅಭಿಮಾನಿಗಳ ಕೊರತೆಯು ಟೀಂ ಇಂಡಿಯಾವನ್ನು ನಿರಾಶೆಗೊಳಿಸಿದೆ.

IND vs ENG: ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಇಂಗ್ಲೆಂಡ್​ನಲ್ಲಿ ಬೆಲೆಯೇ ಇಲ್ಲ
Team India
ಪೃಥ್ವಿಶಂಕರ
|

Updated on: Jun 07, 2025 | 3:31 PM

Share

ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಭಾರತ ತಂಡ ಇಂಗ್ಲೆಂಡ್ (India tour of England) ತಲುಪಿದೆ. ಶುಭ್​ಮನ್ ಗಿಲ್ (Shubman Gill) ನೇತೃತ್ವದ ಯುವ ತಂಡ ಈ ಬಾರಿ ಇತಿಹಾಸ ಸೃಷ್ಟಿಸುವ ಉದ್ದೇಶದಿಂದ ಇಂಗ್ಲೆಂಡ್‌ಗೆ ಕಾಲಿಟ್ಟಿದೆ. ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಇಂಗ್ಲಿಷ್ ನೆಲದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಏಕೆಂದರೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುವ ಮೊದಲ ಟೆಸ್ಟ್ ಪಂದ್ಯದಿಂದಲೇ 2025-27 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕೂಡ ಪ್ರಾರಂಭವಾಗಲಿದೆ. ಆದ್ದರಿಂದ, ಎರಡೂ ತಂಡಗಳು ಈ ಆವೃತ್ತಿಯನ್ನು ಗೆಲುವಿನೊಂದಿಗೆ ಪ್ರಾರಂಭಿಸಲು ಬಯಸುತ್ತವೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ. ಇದೀಗ ಈ ಸರಣಿಗಾಗಿ ಭಾರತ ಯುವ ಪಡೆ ಇಂಗ್ಲೆಂಡ್‌ ಇಂಗ್ಲೆಂಡ್ ತಲುಪಿದೆ. ಆದರೆ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾಗೆ ಈ ಹಿಂದೆ ಸಿಗುತ್ತಿದ್ದ ಸ್ವಾಗತ ಈ ಬಾರಿ ಸಿಕ್ಕಿಲ್ಲ.

ಅಭಿಮಾನಿಗಳಿಲ್ಲದ ಸ್ವಾಗತ

ಮಾಧ್ಯಮ ವರದಿಗಳ ಪ್ರಕಾರ, ಭಾರತ ತಂಡ ಇಂಗ್ಲೆಂಡ್ ವಿಮಾನ ನಿಲ್ದಾಣದಿಂದ ಹೊರಬಂದಾಗ ಅವರನ್ನು ಸ್ವಾಗತಿಸಲು ಒಬ್ಬ ಅಭಿಮಾನಿಯೂ ಇರಲಿಲ್ಲ. ಇಂಗ್ಲೆಂಡ್‌ನಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ಕಂಡುಬಂದಿದೆ. ಅನುಭವಿ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಈ ಬಾರಿಯ ಟೆಸ್ಟ್ ಸರಣಿಯ ಬಗ್ಗೆ ಅಭಿಮಾನಿಗಳು ಹೆಚ್ಚು ಉತ್ಸುಕರಾಗಿಲ್ಲದಿರಲು ಬಹುಶಃ ಇದೇ ಕಾರಣವಿರಬಹುದು. ಅವರನ್ನು ನೋಡಲು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಉದ್ದನೆಯ ಸರತಿ ಸಾಲು ಇರುತ್ತದೆ ಎಂದು ಭಾರತೀಯ ಆಟಗಾರರು ನಿರೀಕ್ಷಿಸಿದ್ದರು, ಆದರೆ ಇದು ಸಂಭವಿಸಿಲ್ಲ.

ಭಾರತ ತಂಡದಲ್ಲಿ ಯುವ ಪಡೆ

ಈ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಶುಭ್​ಮನ್ ಗಿಲ್ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ರಿಷಭ್ ಪಂತ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಇದಲ್ಲದೆ, ಅನೇಕ ಬಲಿಷ್ಠ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2025 ರಲ್ಲಿ ಕೆಲವು ಆಟಗಾರರು ಉತ್ತಮ ಪ್ರದರ್ಶನ ನೀಡಿದರು, ಇದರಿಂದಾಗಿ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ತಂಡದಲ್ಲಿ ಸೇರಿಸಲಾಗಿದೆ. ಇದಲ್ಲದೇ, ಇಂಗ್ಲೆಂಡ್ ಮೊದಲ ಟೆಸ್ಟ್‌ಗೆ ತನ್ನ ತಂಡವನ್ನು ಸಹ ಘೋಷಿಸಿದೆ. ಈ ಟೆಸ್ಟ್ ಸರಣಿಯಲ್ಲಿ ಎರಡೂ ತಂಡಗಳ ಆಟಗಾರರು ಅದ್ಭುತ ಪ್ರದರ್ಶನ ನೀಡುವುದನ್ನು ಕಾಣಬಹುದು.

IND vs ENG: ಇತಿಹಾಸ ಸೃಷ್ಟಿಸುವ ಗುರಿಯೊಂದಿಗೆ ಇಂಗ್ಲೆಂಡ್‌ ತಲುಪಿದ ಟೀಂ ಇಂಡಿಯಾ

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ರಿಷಭ್ ಪಂತ್ (ಉಪನಾಯಕ/ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್.

ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡೆನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರೌಲಿ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ