India vs West Indies: ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಪ್ರಕಟ: ಸ್ಟಾರ್ ವೇಗಿ ಕಮ್​ಬ್ಯಾಕ್

India vs West Indies: ಭಾರತ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ವೆಸ್ಟ್ ಇಂಡೀಸ್ ತಂಡ ಪ್ರಕಟ: ಸ್ಟಾರ್ ವೇಗಿ ಕಮ್​ಬ್ಯಾಕ್
West Indies Squad for IND Series

West Indies Squad For India Series: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟ ಮಾಡಿದ ಬೆನ್ನಲ್ಲೇ ಇದೀಗ ವಿಂಡೀಸ್ ಕ್ರಿಕೆಟ್ ಮಂಡಳಿ ಏಕದಿನಕ್ಕೆ ವೆಸ್ಟ್ ಇಂಡೀಸ್ ತಂಡವನ್ನು ಹೆಸರಿಸಿದೆ. ಕೆಲವೊಂದು ಅಚ್ಚರಿಯ ಆಯ್ಕೆ ನಡೆದಿದ್ದು ಮಾರಕ ವೇಗಿ ಕೇಮರ್ ರೋಚ್ ಕಮ್​ಬ್ಯಾಕ್ ಮಾಡಿದ್ದಾರೆ.

TV9kannada Web Team

| Edited By: Vinay Bhat

Jan 27, 2022 | 10:29 AM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಬಿಸಿಸಿಐ ಭಾರತ (India vs West Indies) ತಂಡವನ್ನು ಪ್ರಕಟ ಮಾಡಿದ ಬೆನ್ನಲ್ಲೇ ಇದೀಗ ವಿಂಡೀಸ್ ಕ್ರಿಕೆಟ್ ಮಂಡಳಿ ಏಕದಿನಕ್ಕೆ ವೆಸ್ಟ್ ಇಂಡೀಸ್ ತಂಡವನ್ನು ಹೆಸರಿಸಿದೆ. ಕೆಲವೊಂದು ಅಚ್ಚರಿಯ ಆಯ್ಕೆ ನಡೆದಿದ್ದು ಮಾರಕ ವೇಗಿ ಕೇಮರ್ ರೋಚ್ (Kemar Roach) ಕಮ್​ಬ್ಯಾಕ್ ಮಾಡಿದ್ದಾರೆ. ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಎನ್​​ಕ್ರುಮ್ ಬೊನ್ನೆರ್ ಮತ್ತು ಬ್ರಾಂಡನ್ ಕಿಂಗ್ ತಂಡ ಸೇರಿಕೊಂಡಿದ್ದಾರೆ. ಕೇಮರ್ ರೋಚ್ 92 ಏಕದಿನ ಪಂದ್ಯಗಳನ್ನು ಆಡಿದ್ದು 124 ವಿಕೆಟ್ ಕಿತ್ತಿದ್ದಾರೆ. ಈ ಸರಣಿಯ ಮೂರು ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೊಟೇರಾದ ಸರ್ದಾರ್‌ ಪಟೇಲ್‌ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂ ಆಗಿ ಹೊಸ ವಿನ್ಯಾಸ ಪಡೆದ ಬಳಿಕ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್‌ ಸರಣಿಗೆ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಇದಾದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.

ಭಾರತ ವಿರುದ್ಧದ ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಕೀರೊನ್ ಪೊಲ್ಲಾರ್ಡ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ನಿಕೋಲಸ್ ಪೂರನ್, ಡ್ಯಾರೆನ್ ಬ್ರಾವೋ, ಫಾಬಿನ್ ಅಲೆನ್, ಜೇಸನ್ ಹೋಲ್ಡರ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದೆ. ಹೀಗಾಗಿ ಭಾರತಕ್ಕೆ ಕಠಿಣ ಪೈಪೋಟಿ ನೀಡಲು ಕೆರಿಬಿಯನ್ನರು ಮುಂದಾಗಿದ್ದಾರೆ.

ಏಕದಿನ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್​​ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.

ಇತ್ತ ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೂಡ ಬಲಿಷ್ಠ ಭಾರತ ತಂಡವನ್ನು ಪ್ರಕಟ ಮಾಡಿದೆ. ಕೆಲವು ಅಚ್ಚರಿಯ ಆಯ್ಕೆಗಳು ನಡೆದರೆ, ಪ್ರಮುಖ ಬೌಲರ್​ಗಳಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನೂ ಕೆಲ ಆಟಗಾರರು ಇಂಜುರಿ ಸಮಸ್ಯೆಯಿಂದ ಸಂಪೂರ್ಣ ಹೊರಬಂದಿಲ್ಲ. ನಾಯಕನಾಗಿ ರೋಹಿತ್ ಶರ್ಮಾ ಕಮ್​ಬ್ಯಾಕ್ ಮಾಡಿದ್ದಾರೆ. ಜೊತೆಗೆ ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡ ಏಕದಿನ ಮತ್ತು ಟಿ20 ತಂಡಕ್ಕೆ ಪುನರಾಗಮನ ಕಂಡಿದ್ದರೆ, ಯುವ ಬೌಲರ್‌ಗಳಾದ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ವೇಗಿ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಿರುವ ಹೊಸಮುಖವಾಗಿದ್ದಾರೆ.

26 ವರ್ಷದ ದೀಪಕ್ ಹೂಡಾ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡುರುವುದು ಅಚ್ಚರಿ ಮೂಡಿಸಿದೆ. ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗೆ ಎರಡು ಸರಣಿಯಲ್ಲೂ ವಿಶ್ರಾಂತಿ ನೀಡಲಾಗಿದೆ. ಕೆಎಲ್ ರಾಹುಲ್ ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನ ಸೇರಲಿದ್ದಾರೆ.

ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೀ), ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.

ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್.

Krunal Pandya: ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಟ್ವಿಟ್ಟರ್ ಖಾತೆ ಹ್ಯಾಕ್

Follow us on

Related Stories

Most Read Stories

Click on your DTH Provider to Add TV9 Kannada