India vs West Indies ODI: ಭಾರತ ವಿರುದ್ಧದ ಏಕದಿನ ಸರಣಿಗೆ ಅಚ್ಚರಿಯ ವೆಸ್ಟ್ ಇಂಡೀಸ್ ತಂಡ ಪ್ರಕಟ: ಪೂರನ್ಗಿಲ್ಲ ಸ್ಥಾನ
WI Squad For ODI vs IND: ಕ್ರಿಕೆಟ್ ವೆಸ್ಟ್ ಇಂಡೀಸ್ ಬಿಡುಗಡೆ ಮಾಡಿದ ಸದಸ್ಯರ ಪಟ್ಟಿಯಲ್ಲಿ ನಿಕೋಲಸ್ ಪೂರನ್ ಮತ್ತು ಜೇಸನ್ ಹೋಲ್ಡರ್ ಇಬ್ಬರೂ ಆಯ್ಕೆಗೆ ಲಭ್ಯವಿಲ್ಲ ಎಂದು ಉಲ್ಲೇಖಿಸಲಾಗಿದೆ. ಜೇಸನ್ ಹೋಲ್ಡರ್ ಭಾರತ ವಿರುದ್ಧದ ಎರಡು ಟೆಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದರು.
ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಟೆಸ್ಟ್ ಸರಣಿ ಮುಕ್ತಾಯವಾದ ಬೆನ್ನಲ್ಲೇ ಕ್ರೆಕೆಟ್ ವೆಸ್ಟ್ ಇಂಡೀಸ್ ಏಕದಿನ ಸರಣಿಗೆ 15 ಮಂದಿ ಸದಸ್ಯರ ತಂಡವನ್ನು ಪ್ರಕಟ ಮಾಡಿದೆ. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ವಿಂಡೀಸ್ ಕ್ರಿಕೆಟ್ ಮಂಡಳಿ ಕೆಲ ಅಚ್ಚರಿ ನಿರ್ಧಾರವನ್ನು ತೆಗೆದುಕೊಂಡಿದ್ದು ನಿಕೋಲಸ್ ಪೂರನ್ (Nicholas Pooran) ಹಾಗೂ ಜೇಸನ್ ಹೋಲ್ಡರ್ ಅವರನ್ನು ಕೈಬಿಡಲಾಗಿದೆ. ಶ್ರಿಮ್ರೋನ್ ಹೆಟ್ಮೇರ್ (Shimron Hetmyer) ಹಾಗೂ ಒಶಾನೆ ಥೋಮಸ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಹೆಟ್ಮೇರ್ ಅವರು 2022ರ ಆಗಸ್ಟ್ನಲ್ಲಿ ವೆಸ್ಟ್ ಇಂಡೀಸ್ ಪರ ಕೊನೆಯದಾಗಿ ಕ್ರಿಕೆಟ್ ಆಡಿದ್ದರು. ಇದೀಗ ಸುಮಾರು ಒಂದು ವರ್ಷದ ಬಳಿಕ ತಂಡಕ್ಕೆ ಮರಳಿದ್ದಾರೆ. ವೇಗದ ಬೌಲರ್ ಜೇಡನ್ ಸೀಲ್ಸ್ ಮತ್ತು ಲೆಗ್ ಸ್ಪಿನ್ನರ್ ಯಾನಿಕ್ ಕ್ಯಾರಿಯಾ ಅವರು ಇಂಜುರಿಯಿಂದ ಗುಣಮುಖರಾಗಿ ತಂಡ ಸೇರಿಕೊಂಡಿದ್ದಾರೆ. ಗುಡಾಕೇಶ್ ಮೋಟಿ ಕೂಡ ಗಾಯದಿಂದ ಚೇತರಿಸಿಕೊಂಡು ಕ್ಯಾಂಪ್ ಸೇರಲಿದ್ದಾರೆ.
Priyank Panchal: 7 ಭರ್ಜರಿ ಸಿಕ್ಸ್ಗಳೊಂದಿಗೆ ಅಬ್ಬರಿಸಿದ ಪ್ರಿಯಾಂಕ್ ಪಾಂಚಾಲ್
ಕ್ರಿಕೆಟ್ ವೆಸ್ಟ್ ಇಂಡೀಸ್ ಬಿಡುಗಡೆ ಮಾಡಿದ ಸದಸ್ಯರ ಪಟ್ಟಿಯಲ್ಲಿ ನಿಕೋಲಸ್ ಪೂರನ್ ಮತ್ತು ಜೇಸನ್ ಹೋಲ್ಡರ್ ಇಬ್ಬರೂ ಆಯ್ಕೆಗೆ ಲಭ್ಯವಿಲ್ಲ ಎಂದು ಉಲ್ಲೇಖಿಸಲಾಗಿದೆ. ಜೇಸನ್ ಹೋಲ್ಡರ್ ಭಾರತ ವಿರುದ್ಧದ ಎರಡು ಟೆಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಏಕದಿನದಿಂದ ವಿಶ್ರಾಂತಿ ನೀಡಲಾಗಿದೆ. ಪೂರನ್ ಯುಎಸ್‌ನಲ್ಲಿದ್ದು, ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ ಆಡುತ್ತಿದ್ದಾರಂತೆ.
ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಹೀನಾಯವಾಗಿ ಹೊರಬಿದ್ದ ನಂತರ ವೆಸ್ಟ್ ಇಂಡೀಸ್‌ನ ಮೊದಲ ಏಕದಿನ ಸರಣಿ ಇದಾಗಿದೆ. ಭಾರತದಲ್ಲಿ 2023 ರ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾದ ನಂತರ, ಶಾಯ್ ಹೋಪ್ ಮತ್ತು ತಂಡ ಮೂರು ಪಂದ್ಯಗಳ ಸರಣಿಯಲ್ಲಿ ಪುಟಿದೇಳುವ ಭರವಸೆ ಹೊಂದಿದೆ.
ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರೊನ್ ಹೆಟ್ಮೇರ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋಟಿ, ಜೇಡನ್ ಸಿನ್‌ಸ್, ರೊಮರಿಯೊಕ್ಲ್, ರೊಮರಿಯೊಕ್ಲ್, ರೊಮರಿಯೊಕ್ಲ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ