AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಬಳಸಿ ತಂಡ ಬದಲಿಸಲು ಹೋಗಿ ಸಿಕ್ಕಿಬಿದ್ದ ಭಾರತೀಯ ಆಟಗಾರ!

ಅನೇಕ ಆಟಗಾರರು ತ್ರಿಪುರಾ ರಾಜ್ಯ ತಂಡಗಳತ್ತ ಮುಖ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಆಟಗಾರ ವೃದ್ದಿಮಾನ್ ಸಹಾ ಅವರು 2022-2023ರ ದೇಶೀಯ ಸೀಸನ್​ನಲ್ಲಿ ತ್ರಿಪುರಾ ಸೀನಿಯರ್ ತಂಡದ ಪರ ಆಡಲಿದ್ದಾರೆ.

ನಕಲಿ ದಾಖಲೆ ಬಳಸಿ ತಂಡ ಬದಲಿಸಲು ಹೋಗಿ ಸಿಕ್ಕಿಬಿದ್ದ ಭಾರತೀಯ ಆಟಗಾರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 18, 2022 | 9:49 PM

Share

ಒಂದು ತಂಡದಿಂದ ಬೇರೊಂದು ತಂಡಕ್ಕೆ ಸೇರಲು ಅಡ್ಡದಾರಿ ಹಿಡಿದ ಯುವ ಕ್ರಿಕೆಟಿಗನ ವಿರುದ್ದ ತ್ರಿಪುರಾದಲ್ಲಿ ಎಫ್​ಐಆರ್​ ದಾಖಲಾಗಿದೆ. ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಹಾ ಬಂಗಾಳ ತಂಡದಿಂದ ತ್ರಿಪುರಾ ರಣಜಿ ತಂಡಕ್ಕೆ ತೆರಳಿದ್ದರು. ಅವರಂತೆಯೇ, ಬಂಗಾಳದ ಯುವ ಆಟಗಾರನು ತನ್ನ ತಂಡವನ್ನು ತೊರೆಯಲು ಮುಂದಾಗಿದ್ದಾರೆ. ಅಲ್ಲದೆ ತ್ರಿಪುರಾ ತಂಡವನ್ನು ಪ್ರತಿನಿಧಿಸಲು ಬಯಸಿದ್ದರು. ಇದಕ್ಕಾಗಿ ಅಡ್ಡದಾರಿ ಹಿಡಿದು ಈಗ ಸಿಕ್ಕಿಬಿದ್ದಿದ್ದಾರೆ. ಅದರಂತೆ ತ್ರಿಪುರಾ ಅಂಡರ್-19 ತಂಡಕ್ಕೆ ಸೇರಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕ್ರಿಕೆಟಿಗನ ವಿರುದ್ಧ ಪ್ರಕರಣ ದಾಖಲಾಗಿದೆ.

ಪಿಟಿಐ ವರದಿ ಪ್ರಕಾರ, ಪಶ್ಚಿಮ ಬಂಗಾಳದ ಬ್ಯಾರಕ್‌ಪೋರ್‌ನ ಯುವ ಕ್ರಿಕೆಟಿಗ ತ್ರಿಪುರಾ ಪರ ಆಡಲು ಖಾಯಂ ನಿವಾಸಿ ಪ್ರಮಾಣಪತ್ರ (ಪಿಆರ್‌ಟಿಸಿ) ಮತ್ತು ತ್ರಿಪುರದ ಪಡಿತರ ಚೀಟಿಯಂತಹ ನಕಲಿ ದಾಖಲೆಗಳನ್ನು ಮಾಡಿದ್ದಾರೆ. ಈ ಯುವ ಕ್ರಿಕೆಟಿಗನ ಹೆಸರನ್ನು ಬಿಶಾಲ್‌ಗಢ ಕ್ರಿಕೆಟ್ ಸಂಸ್ಥೆಯು ಅಂಡರ್-19 ಟ್ರಯಲ್ಸ್‌ಗಾಗಿ ತ್ರಿಪುರಾ ಕ್ರಿಕೆಟ್ ಸಂಸ್ಥೆಗೆ (ಟಿಸಿಎ) ಶಿಫಾರಸು ಮಾಡಿತ್ತು. ಅಸೋಸಿಯೇಷನ್ ​​ಜುಲೈ 11 ರಂದು ಪ್ರಕಟಿಸಿದ 19 ವರ್ಷದೊಳಗಿನವರ ತಂಡದಲ್ಲಿ ಈ ಆಟಗಾರನ ಹೆಸರೂ ಇತ್ತು. ಆದರೆ ನಕಲಿ ದಾಖಲೆಗಳನ್ನು ನೀಡಿರುವುದು ಬೆಳಕಿಗೆ ಬರುತ್ತಿದ್ದಂತೆ ಟಿಸಿಎ ಕಾರ್ಯದರ್ಶಿ ಕಿಶೋರ್ ದಾಸ್ ಈ ಆಟಗಾರನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕಳೆದ ಕೆಲ ಸಮಯದಿಂದ, ಅನೇಕ ಆಟಗಾರರು ತ್ರಿಪುರಾ ರಾಜ್ಯ ತಂಡಗಳತ್ತ ಮುಖ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಆಟಗಾರ ವೃದ್ದಿಮಾನ್ ಸಹಾ ಅವರು 2022-2023ರ ದೇಶೀಯ ಸೀಸನ್​ನಲ್ಲಿ ತ್ರಿಪುರಾ ಸೀನಿಯರ್ ತಂಡದ ಪರ ಆಡಲಿದ್ದಾರೆ. ಇದರ ಬೆನ್ನಲ್ಲೇ ಬಂಗಾಳ ತಂಡದ ಯುವ ಆಟಗಾರ ನಕಲಿ ದಾಖಲೆಯೊಂದಿಗೆ ತ್ರಿಪುರ ಪರ ಕಣಕ್ಕಿಳಿಯಲು ಯತ್ನಿಸಿ ಇದೀಗ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

Published On - 6:31 pm, Sun, 17 July 22

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!