ಕರ್ನಾಟಕದ 2 ಜಿಲ್ಲೆಗಳಲ್ಲಿ 1,400 ಕೋಟಿ ರೂ. ಹೂಡಿಕೆಗೆ ಮುಂದಾದ ಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

Muttiah Muralitharan: ಚಾಮರಾಜನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲೂ ಬಂಡವಾಳ ಹೂಡಿಕೆ ಹೆಚ್ಚಿಸಲು ಮುರಳೀಧರನ್ ಉತ್ಸುಕರಾಗಿದ್ದಾರೆ. ಸದ್ಯ ಚಾಮರಾಜನಗರದಲ್ಲಿ 1000 ಕೋಟಿ ವೆಚ್ಚದ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಧಾರವಾಡದಲ್ಲೂ ಹೂಡಿಕೆ ಆಗುವುದರಿಂದ ರಾಜ್ಯಕ್ಕೆ ಒಟ್ಟು 1400 ಕೋಟಿ ರೂ. ಬಂಡವಾಳ ಹರಿದುಬರುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ 2 ಜಿಲ್ಲೆಗಳಲ್ಲಿ 1,400 ಕೋಟಿ ರೂ. ಹೂಡಿಕೆಗೆ ಮುಂದಾದ ಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್
ಮುತ್ತಯ್ಯ ಮುರಳೀಧರನ್, ಎಂಬಿ ಪಾಟೀಲ್
Follow us
|

Updated on: Jun 19, 2024 | 3:45 PM

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ (Muttiah Muralitharan) ಕರ್ನಾಟಕದಲ್ಲಿ ಭಾರಿ ಹೂಡಿಕೆಗೆ ಮುಂದಾಗಿದ್ದಾರೆ. ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಉದ್ಯಮ ಲೋಕದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಮುರಳೀಧರನ್, ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಹೆಸರಿನ ತಂಪು ಪಾನೀಯಗಳ ಉತ್ಪಾದನಾ ಘಟಕವನ್ನು ಕನಾರ್ಟಟಕದ ಗಡಿನಾಡ ಜಿಲ್ಲೆ ಚಾಮರಾಜನಗರದ (Chamarajanagar) ಬದನಗುಪ್ಪೆಯಲ್ಲಿ ತೆರೆಯಲಿದ್ದಾರೆ. ಇದಕ್ಕಾಗಿ ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಕೂಡ ಮಾಡಿಕೊಂಡಿದ್ದಾರೆ. ಅಲ್ಲದೆ ಮುರಳೀಧರನ್ ಧಾರವಾಡ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಇಚ್ಛಿಸಿದ್ದು, ಒಟ್ಟು 1400 ಕೋಟಿ ರೂ.ಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಮುರುಳೀಧರನ್ ಮುಂದಾಗಿದ್ದಾರೆ.

ಸಚಿವ ಎಂಬಿ ಪಾಟೀಲ್ ಮಾಹಿತಿ

ಕರ್ನಾಟಕದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಈ ಒಪ್ಪಂದದ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಚಾಮರಾಜನಗರ ಜಿಲ್ಲೆಯ ಬದನಗುಪ್ಪೆಯಲ್ಲಿ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಎಂ.ಬಿ.ಪಾಟೀಲ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಮುರಳೀಧರನ್ ಮತ್ತು ಅವರ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯ ನಂತರ ಮಾಡಿದ ಪೋಸ್ಟ್‌ನಲ್ಲಿ, ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ತಮ್ಮ ವ್ಯವಹಾರವನ್ನು ವಿಸ್ತರಿಸಲು ಬಯಸಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ತಮ್ಮ ವ್ಯಾಪಾರವನ್ನು ಬೆಳೆಸಲು ಪ್ರಯತ್ನಿಸುತ್ತಿರುವ ಅವರು ಇದಕ್ಕಾಗಿ ತಮ್ಮ ರಾಜ್ಯವನ್ನು ಆಯ್ಕೆ ಮಾಡಿದ್ದಾರೆ.

2 ಜಿಲ್ಲೆಗಳಲ್ಲಿ ಹೂಡಿಕೆ

ಚಾಮರಾಜನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲೂ ಬಂಡವಾಳ ಹೂಡಿಕೆ ಹೆಚ್ಚಿಸಲು ಮುರಳೀಧರನ್ ಉತ್ಸುಕರಾಗಿದ್ದಾರೆ. ಸದ್ಯ ಚಾಮರಾಜನಗರದಲ್ಲಿ 1000 ಕೋಟಿ ವೆಚ್ಚದ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಧಾರವಾಡದಲ್ಲೂ ಹೂಡಿಕೆ ಆಗುವುದರಿಂದ ರಾಜ್ಯಕ್ಕೆ ಒಟ್ಟು 1400 ಕೋಟಿ ರೂ. ಬಂಡವಾಳ ಹರಿದುಬರುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಜನವರಿಯಿಂದ ಆರಂಭ

ಮಾಧ್ಯಮಗಳ ವರದಿ ಪ್ರಕಾರ ಈಗಾಗಲೇ 46 ಎಕರೆ ಭೂಮಿಯನ್ನು ತಂಪು ಪಾನೀಯ ಉತ್ಪಾದನೆಗೆ ಮಂಜೂರು ಮಾಡಲಾಗಿದ್ದು, ಆ ಜಮೀನಿನಲ್ಲಿ ಕಾರ್ಖಾನೆ ಸ್ಥಾಪಿಸುವ ಕಾರ್ಯ ನಡೆಯುತ್ತಿದೆ. 2025ರ ಜನವರಿ ವೇಳೆಗೆ ಕಾರ್ಖಾನೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್