AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯವಾಯಿತು ಶಿಖರ್ ಧವನ್- ಆಯೇಷಾ ದಾಂಪತ್ಯ ಜೀವನ; ಅಧಿಕೃತವಾಗಿ ಬೇರೆಯಾದ ದಂಪತಿ

Shikhar Dhawan: ಟೀಂ ಇಂಡಿಯಾದ ಸ್ಟಾರ್ ಓಪನರ್ ಶಿಖರ್ ಧವನ್, ತಮ್ಮ ಪತ್ನಿ ಆಯೇಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ಕಾಂಪ್ಲೆಕ್ಸ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯ ಶಿಖರ್ ಧವನ್, ಪತ್ನಿ ಆಯೇಷಾ ಮುಖರ್ಜಿ ಅವರಿಂದ ವರ್ಷಗಟ್ಟಲೆ ಮಾನಸಿಕ ಹಿಂಸೆ ಅನುಭವಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟು ವಿಚ್ಛೇದನ ಮಂಜೂರು ಮಾಡಿದೆ.

ಅಂತ್ಯವಾಯಿತು ಶಿಖರ್ ಧವನ್- ಆಯೇಷಾ ದಾಂಪತ್ಯ ಜೀವನ; ಅಧಿಕೃತವಾಗಿ ಬೇರೆಯಾದ ದಂಪತಿ
ಶಿಖರ್ ಧವನ್- ಆಯೇಷಾ
ಪೃಥ್ವಿಶಂಕರ
|

Updated on:Oct 05, 2023 | 10:21 AM

Share

ಟೀಂ ಇಂಡಿಯಾದ ಸ್ಟಾರ್ ಓಪನರ್ ಶಿಖರ್ ಧವನ್ (Shikhar Dhawan), ತಮ್ಮ ಪತ್ನಿ ಆಯೇಷಾ ಮುಖರ್ಜಿ (Aesha Mukerji ) ಅವರಿಂದ ವಿಚ್ಛೇದನ ಪಡೆದಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ಕಾಂಪ್ಲೆಕ್ಸ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯ ಶಿಖರ್ ಧವನ್, ಪತ್ನಿ ಆಯೇಷಾ ಮುಖರ್ಜಿ ಅವರಿಂದ ವರ್ಷಗಟ್ಟಲೆ ಮಾನಸಿಕ ಹಿಂಸೆ ಅನುಭವಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟು ವಿಚ್ಛೇದನ (Divorce) ಮಂಜೂರು ಮಾಡಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದು, ತಮ್ಮ ಆದೇಶದಲ್ಲಿ, ಧವನ್ ಅವರ ಪತ್ನಿ ತಮ್ಮ ಮೇಲಿನ ಆರೋಪಗಳನ್ನು ವಿರೋಧಿಸಲ್ಲೂ ಇಲ್ಲ ಅಥವಾ ಸ್ವತಃ ಸಮರ್ಥಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಮಗನ ಖಾಯಂ ಕಸ್ಟಡಿ ಬಗ್ಗೆ ಆದೇಶವಿಲ್ಲ

2012 ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆಯೇಷಾ ಅವರಿಗೆ ಇದು ಎರಡನೇ ಮದುವೆ ಆಗಿತ್ತು. ಈ ಇಬ್ಬರು ದಂಪತಿಗಳಿಗೆ ಓರ್ವ ಮಗನಿದ್ದು, ಮಗನ ಖಾಯಂ ಕಸ್ಟಡಿಯ ಕುರಿತು ಯಾವುದೇ ಆದೇಶವನ್ನು ನೀಡಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾಲಯವು ಧವನ್‌ಗೆ ಭಾರತ ಮತ್ತು ಆಸ್ಟ್ರೇಲಿಯಾದಲ್ಲಿ ತನ್ನ ಮಗನನ್ನು ಭೇಟಿಯಾಗುವ ಹಕ್ಕನ್ನು ನೀಡಿದ್ದು, ಮಗನೊಂದಿಗೆ ವೀಡಿಯೊ ಕರೆ ಮೂಲಕ ಮಾತುಕತೆ ನಡೆಸುವುದಕ್ಕೂ ಅನುಮತಿ ನೀಡಿದೆ.

‘ನಾವು ಒಪ್ಪಿಕೊಳ್ಳಲೇಬೇಕು’; ತಂಡದಿಂದ ಕೈಬಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಶಿಖರ್ ಧವನ್

ಭಾರತಕ್ಕೆ ಕರೆತರಬೇಕು

ಇದಲ್ಲದೆ ಮಗನ ಶಾಲಾ ರಜೆಯ ಅವಧಿಯ ಕನಿಷ್ಠ ಅರ್ಧದಷ್ಟು ರಜೆಯನ್ನು ಧವನ್ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಕಳೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಧವನ್ ಕುಟುಂಬದೊಂದಿಗೆ ರಾತ್ರಿಯ ತಂಗುವಿಕೆ ಸೇರಿದಂತೆ ಭೇಟಿ ಉದ್ದೇಶಗಳಿಗಾಗಿ ಮಗುವನ್ನು ಭಾರತಕ್ಕೆ ಕರೆತರುವಂತೆ ಧವನ್ ಅವರ ಪತ್ನಿ ಆಯೇಷಾ ಅವರಿಗೆ ನ್ಯಾಯಾಲಯ ಆದೇಶಿಸಿದೆ.

ಶಿಖರ್ ಧವನ್ ಅವರ ಕ್ರಿಕೆಟ್ ಜೀವನ

ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗಿರುವ ಧವನ್ ತಂಡದ ಪರ ಟಿ20 ಮಾದರಿಯಲ್ಲಿ ಒಟ್ಟು 68 ಪಂದ್ಯಗಳನ್ನಾಡಿದ್ದು, ಇದರಲ್ಲಿ 11 ಅರ್ಧಶತಕಗಳ ಸಹಿತ  1759 ರನ್‌ ಬಾರಿಸಿದ್ದಾರೆ. ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾದ ಖಾಯಂ ಸದಸ್ಯನಾಗಿದ್ದ ಧವನ್, ಈ ಮಾದರಿಯಲ್ಲಿ 167 ಪಂದ್ಯಗಳನ್ನಾಡಿದ್ದು, 44.11 ಸರಾಸರಿಯಲ್ಲಿ 17 ಶತಕ ಮತ್ತು 39 ಅರ್ಧ ಶತಕಗಳ ಸಹಿತ  6793 ರನ್‌ ಕಲೆಹಾಕಿದ್ದಾರೆ. ಹಾಗೆಯೇ ಟೆಸ್ಟ್ ಮಾದರಿಯಲ್ಲೂ ಟೀಂ ಇಂಡಿಯಾವನ್ನು ಪ್ರತಿನಿಧಿಸಿರುವ ಧವನ್, 34 ಪಂದ್ಯಗಳಲ್ಲಿ 23165 ರನ್  ಸಿಡಿಸಿದ್ದಾರೆ. ಪ್ರಸ್ತುತ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಧವನ್  217 ಪಂದ್ಯಗಳಿಂದ ಎರಡು ಶತಕ ಮತ್ತು 50 ಅರ್ಧ ಶತಕಗಳ ನೆರವಿನಿಂದ  6616 ರನ್ ಕಲೆಹಾಕಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Thu, 5 October 23

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್