AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಂಬೈ-ಡೆಲ್ಲಿ ಪಂದ್ಯದ ವೇಳೆ ಮೊಳಗಿದ ‘RCB’ ಜಯಘೋಷ..!

IPL 2022 RCB: ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದ್ದು, ಅದರಂತೆ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ದ ಎಲಿಮಿನೇಟರ್ ಪಂದ್ಯವಾಡಲಿದೆ.

Viral Video: ಮುಂಬೈ-ಡೆಲ್ಲಿ ಪಂದ್ಯದ ವೇಳೆ ಮೊಳಗಿದ 'RCB' ಜಯಘೋಷ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 22, 2022 | 5:10 PM

Share

IPL 2022: ಐಪಿಎಲ್ ಸೀಸನ್​ 15 ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (MI vs DC) ತಂಡಗಳು ಮುಖಾಮುಖಿಯಾಗಿತ್ತು. ಆರ್​ಸಿಬಿ (RCB) ಹಾಗೂ ಡೆಲ್ಲಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯವನ್ನು ಮೂರು ತಂಡಗಳ ಅಭಿಮಾನಿಗಳು ಎದುರು ನೋಡಿದ್ದರು. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡವನ್ನು ಹುರಿದುಂಬಿಸಲು ಆರ್​ಸಿಬಿ ಅಭಿಮಾನಿಗಳು ಕೂಡ ಸ್ಟೇಡಿಯಂನತ್ತ ಮುಖಮಾಡಿದ್ದರು. ಅದರಂತೆ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಹಾದಿಯತ್ತ ಸಾಗುತ್ತಿದ್ದಂತೆ ಸ್ಟೇಡಿಯಂನಲ್ಲಿ ಆರ್​ಸಿಬಿ ಜಯಘೋಷ ಮುಗಿಲುಮುಟ್ಟಿತ್ತು.

ಇತ್ತ ಆರ್​ಸಿಬಿ ಅಭಿಮಾನಿಗಳ ಘೋಷಣೆಗಳು ಮೊಳಗುತ್ತಿದ್ದಂತೆ ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮತ್ತಷ್ಟು ಒತ್ತಡಕ್ಕೆ ಒಳಗಾದಂತೆ ಭಾಸವಾಗಿದ್ದರು. ಇದೀಗ ಆರ್​ಸಿಬಿ ಅಭಿಮಾನಿಗಳ ಫುಲ್ ಚಿಯರಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಎಷ್ಟು ಆರ್​ಸಿಬಿ ಅಭಿಮಾನಿಗಳಿದ್ದರೂ ಎಂಬುದನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಮೊಳಗಿದ ಈ ಘೋಷಣೆಯನ್ನು ಕೇಳಿದ್ರೆ ಊಹಿಸಿಕೊಳ್ಳಬಹುದು.

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿಸುವುದರೊಂದಿಗೆ ಆರ್​ಸಿಬಿ ತಂಡವು ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಡೆಲ್ಲಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಸೋಲುವ ಮೂಲಕ ರಿಷಭ್ ಪಂತ್ ಪಡೆ ಪಾಯಿಂಟ್ ಟೇಬಲ್​​ನಲ್ಲಿ 5ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದರೊಂದಿಗೆ 4ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಿದ್ದು, ಅದರಂತೆ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ದ ಎಲಿಮಿನೇಟರ್ ಪಂದ್ಯವಾಡಲಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ರೋವ್ಮನ್ ಪೊವೆಲ್ ಅವರ 43 ರನ್​ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 159 ರನ್​ ಕಲೆಹಾಕಿತು.

160 ರನ್​ಗಳ ಟಾರ್ಗೆಟ್​ ಪಡೆದ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ (48), ಡೆವಾಲ್ಡ್ ಬ್ರೆವಿಸ್ (37) ಹಾಗೂ ಟಿಮ್ ಡೇವಿಡ್ (34) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಂತೆ 19.1 ಓವರ್​ಗಳಲ್ಲಿ 160 ರನ್​ಗಳ ಗುರಿ ತಲುಪುವ ಮೂಲಕ ಮುಂಬೈ ಇಂಡಿಯನ್ಸ್​ ಗೆಲುವಿನೊಂದಿಗೆ ಐಪಿಎಲ್​ 2022ರ ಅಭಿಯಾನವನ್ನು ಅಂತ್ಯಗೊಳಿಸಿದೆ. ಇತ್ತ ಮುಂಬೈ ಇಂಡಿಯನ್ಸ್ ಗೆಲುವಿನೊಂದಿಗೆ ಆರ್​ಸಿಬಿ ತಂಡವು 8ನೇ ಬಾರಿಗೆ ಪ್ಲೇಆಫ್​ ಪ್ರವೇಶಿಸಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್