IPL 2024: ಅಗ್ರಸ್ಥಾನದಿಂದ ಕುಸಿದ ಸಿಎಸ್​ಕೆ: ಪಾಯಿಂಟ್ಸ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ

IPL 2024 Points Table: ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಜಯ, ಒಂದರಲ್ಲಿ ಸೋಲು ಕಂಡು ನಾಲ್ಕು ಅಂಕ ಪಡೆದು +0.976 ರನ್​ರೇಟ್ ಹೊಂದಿದೆ.

IPL 2024: ಅಗ್ರಸ್ಥಾನದಿಂದ ಕುಸಿದ ಸಿಎಸ್​ಕೆ: ಪಾಯಿಂಟ್ಸ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ
IPL 2024 Points Table
Follow us
Vinay Bhat
|

Updated on: Apr 01, 2024 | 7:08 AM

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿ ಆರಂಭವಾಗಿ ಒಂದು ವಾರ ಕಳೆದಿದ್ದು, ಈವರೆಗೆ ಒಟ್ಟು ಹದಿಮೂರು ಪಂದ್ಯಗಳು ನಡೆದಿವೆ. ಭಾನುವಾರ ಎರಡು ಪಂದ್ಯಗಳು ನಡೆದವು. ಅಹ್ಮದಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ವಿಶಾಖಪಟ್ಟಣಂನಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 20 ರನ್​ಗಳಿಂದ ಗೆದ್ದು ಬೀಗಿತು. ಇಂದು ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್- ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿ ಆಗಲಿವೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

  1. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ +1.047 ಆಗಿದೆ.
  2. ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ. ಇವರು ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಜಯ, ಒಂದರಲ್ಲಿ ಸೋಲು ಕಂಡು ನಾಲ್ಕು ಅಂಕ ಪಡೆದು +0.976 ರನ್​ರೇಟ್ ಹೊಂದಿದೆ.
  3. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಜಯ ಸಾಧಿಸಿ ನಾಲ್ಕು ಅಂಕ ಪಡೆದು +0.800 ರನ್​ರೇಟ್ ಹೊಂದಿದೆ.
  4. ಎಂಟನೇ ಸ್ಥಾನದಲ್ಲಿದ್ದ ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಇದೀಗ ನಾಲ್ಕನೇ ಸ್ಥಾನಕ್ಕೇರಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಜಯ-ಒಂದರಲ್ಲಿ ಸೋಲು ಕಂಡು 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ -0.738 ಆಗಿದೆ.
  5. ಇನ್ನು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು- ಒಂದು ಜಯ ಕಂಡು 2 ಪಾಯಿಂಟ್ಸ್ ಪಡೆದು ಐದನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.204ಆಗಿದೆ.
  6. ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಆರನೇ ಸ್ಥಾನದಲ್ಲಿದೆ. ಇವರು ಆಡಿದ ಎರಡು ಪಂದ್ಯಗಳಲ್ಲಿ ತಲಾ ಒಂದು ಜಯ-ಸೋಲು ಕಂಡು 2 ಅಂಕ ಪಡೆದುಕೊಂಡಿದೆ. ಇವರ ನೆಟ್​ ರನ್​ರೇಟ್ +0.025 ಆಗಿದೆ.
  7. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋಲು ಕಂಡು, ಒಂದು ಜಯದೊಂದಿಗೆ 2 ಪಾಯಿಂಟ್ಸ್ ಪಡೆದು ಏಳನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.016 ಆಗಿದೆ.
  8. ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿದ ಮೂರು ಪಂದ್ಯದಲ್ಲಿ ಒಂದು ಜಯ, ಎರಡು ಸೋಲು ಕಂಡು 2 ಪಾಯಿಂಟ್ಸ್ ಪಡೆದು ಎಂಟನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.337 ಆಗಿದೆ.
  9. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಬತ್ತನೇ ಸ್ಥಾನಕ್ಕೆ ಕುಸಿದಿದೆ. ಆಡಿದ 3 ಪಂದ್ಯದಲ್ಲಿ ಎರಡು ಸೋಲು, ಒಂದು ಜಯ ಕಂಡು 2 ಅಂಕ ಪಡೆದು ಕೊಂಡಿದೆ. ಇವರ ನೆಟ್​ ರನ್​ರೇಟ್ -0.711 ಆಗಿದೆ.
  10. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಆಡಿದ ಎರಡೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಹತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.925 ಆಗಿದೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ಆರ್​ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಟ್ಟು 181 ರನ್ ಗಳಿಸಿದ್ದಾರೆ. ಹೈದರಾಬಾದ್ ತಂಡದ ಹೆನ್ರಿಚ್ ಕ್ಲಾಸೆನ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ 167 ರನ್ ಕಲೆಹಾಕಿದ್ದಾರೆ. ಪಂಜಾಬ್ ತಂಡದ ನಾಯಕ ಶಿಖರ್ ಧವನ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು, ಇವರು ಆಡಿರುವ ಮೂರು ಪಂದ್ಯಗಳಿಂದ 137 ರನ್ ಸಿಡಿಸಿದ್ದಾರೆ.

ಪರ್ಪಲ್-ಕ್ಯಾಪ್ ಪಟ್ಟಿಯಲ್ಲಿ, ಸಿಎಸ್​ಕೆ ತಂಡದ ಮುಸ್ತಫಿಜುರ್ ರೆಹಮಾನ್ ಒಟ್ಟು 7 ವಿಕೆಟ್ ಪಡೆದು ಅಗ್ರ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ಅವರ ಹಿಂದೆ ಗುಜರಾತ್ ತಂಡದ ಮೋಹಿತ್ ಶರ್ಮಾ ಅವರಿದ್ದು, ಇವರು ಆಡಿರುವ ಮೂರು ಪಂದ್ಯಗಳಿಂದ 6 ವಿಕೆಟ್ ಪಡೆದಿದ್ದಾರೆ. ಡೆಲ್ಲಿ ತಂಡದ ಖಲೀಲ್ ಅಹ್ಮದ್ ಮೂರನೇ ಸ್ಥಾನದಲ್ಲಿದ್ದು, ಇವರು 5 ವಿಕೆಟ್ ಕಿತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ