CSK vs PBKS, IPL 2023: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಚೆನ್ನೈ-ಪಂಜಾಬ್ ಮತ್ತು ಮುಂಬೈ-ರಾಜಸ್ಥಾನ್ ನಡುವೆ ಹೈವೋಲ್ಟೇಜ್ ಪಂದ್ಯ

|

Updated on: Apr 30, 2023 | 8:05 AM

MI vs RR, IPL 2023: ಐಪಿಎಲ್​ನಲ್ಲಿ ಇಂದು ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿ ಆಗಲಿದೆ.

CSK vs PBKS, IPL 2023: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಚೆನ್ನೈ-ಪಂಜಾಬ್ ಮತ್ತು ಮುಂಬೈ-ರಾಜಸ್ಥಾನ್ ನಡುವೆ ಹೈವೋಲ್ಟೇಜ್ ಪಂದ್ಯ
CSK vs PBKS
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳನ್ನು ಆಯೋಜಿಸಲಾಗಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಧ್ಯಾಹ್ನ ಶುರುವಾಗಲಿರುವ ಮೊದಲ ಮ್ಯಾಚ್​ನಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶಿಖರ್ ಧವನ್ ಅವರ ಪಂಜಾಬ್ ಕಿಂಗ್ಸ್ (CSK vs PBKS) ಅನ್ನು ಎದುರಿಸಲಿದೆ. ಮತ್ತೊಂದು ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಸಂಜು ಸ್ಯಾಮ್ಸನ್ ನಾಯತ್ವದ ರಾಜಸ್ಥಾನ್ ರಾಯಲ್ಸ್ (MI vs RR) ಮುಖಾಮುಖಿ ಆಗಲಿದೆ. ಎರಡೂ ಪಂದ್ಯಗಳು ಸಾಕಷ್ಟು ಕುತೂಹಲ ಕೆರಳಿಸಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆಯಿದೆ.

ಚೆನ್ನೈ vs ಪಂಜಾಬ್:

ಸಿಎಸ್​ಕೆ ತಂಡ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಸೋತಿದ್ದರೂ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ರುತುರಾಯ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್​ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ. ಅಜಿಂಕ್ಯಾ ರಹಾನೆ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಶಿವಂ ದುಬೆ ಪ್ರತಿ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್​ನಲ್ಲಿ ಸಿಎಸ್​ಕೆ ಇನ್ನಷ್ಟು ಬಲಿಷ್ಠವಾಗಬೇಕಿದೆ. ತುಶಾರ್ ದೇಶ್​ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡಬೇಕು.

ಪಂಜಾಬ್ ಆಡಿದ ಎಂಟು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ನಾಲ್ಕರಲ್ಲಿ ಸೋತಿದೆ. ಶಿಖರ್ ಧವನ್ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿದ ಬಳಿಕ ಮಂಕಾಗಿದ್ದಾರೆ. ಇವರ ಬ್ಯಾಟ್ ಸದ್ದು ಮಾಡಬೇಕಿದೆ. ಪ್ರಭುಸಿಮ್ರಾನ್ ಸಿಂಗ್ ಕೂಡ ಧವನ್ ಜೊತೆ ಉತ್ತಮ ಆರಂಭ ಒದಗಿಸಬೇಕಿದೆ. ಸಿಖಂದರ್ ರಾಜಾ ಹಾಗೂ ಅಥರ್ವ ತೈಡೆ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಶಾರುಖ್ ಖಾನ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಕಡೆಯಿಂದ ನಿರೀಕ್ಷೆ ತಕ್ಕ ಪ್ರದರ್ಶನ ಬರುತ್ತಿಲ್ಲ. ಸ್ಯಾಮ್ ಕುರ್ರನ್ ಹಾಗೂ ಜಿತೇಶ್ ಶರ್ಮಾ ಕೂಡ ಅಬ್ಬರಿಸಬೇಕು. ಬೌಲಿಂಗ್​ನಲ್ಲಿ ಪಂಜಾಬ್ ದುರ್ಬಲವಾಗಿದೆ. ಹಿಂದಿನ ಪಂದ್ಯದಲ್ಲಿ ಎಲ್​ಎಸ್​ಜಿ ಬ್ಯಾಟರ್​ಗಳು ದಾಖಲೆಯ 257 ರನ್ ಚಚ್ಚಿದ್ದರು. ಅರ್ಶ್​ದೀಪ್ ಸಿಂಗ್, ನೇಥನ್ ಎಲಿಸ್, ರಾಹುಲ್ ಚಹರ್, ಹರ್ಪ್ರೀತ್ ಬ್ರರ್ ಇದ್ದರೂ ಮಾರಕವಾಗುತ್ತಿಲ್ಲ.

ಇದನ್ನೂ ಓದಿ
IPL 2023 Points Table: ಅಂಕ ಪಟ್ಟಿಯಲ್ಲಿ ಕುಸಿದ CSK: RCB ಸ್ಥಾನ ಸ್ಥಿರ
IPL 2023: ಡಾಟ್ ಬಾಲ್​ನಲ್ಲಿ ಶತಕ ಪೂರೈಸಿದ ಮೊಹಮ್ಮದ್ ಸಿರಾಜ್
IPL 2023: 3 ವರ್ಷಗಳಿಂದ RCB ತಂಡದಲ್ಲಿದ್ದರೂ ಒಂದೇ ಒಂದು ಚಾನ್ಸ್ ನೀಡಿಲ್ಲ..!
T20 Record: 8 ಭರ್ಜರಿ ಸಿಕ್ಸ್, 1 ಫೋರ್: ಒಂದೇ ಓವರ್​ನಲ್ಲಿ 55 ರನ್​..!

IPL 2023: RCB ಸಾವಿರ ರನ್​ ಸರದಾರರು: ನಮ್ಮದೊಂದು ಲೆಕ್ಕ, ಅವರದೊಂದು ಲೆಕ್ಕ..!

ಮುಂಬೈ vs ರಾಜಸ್ಥಾನ್:

ಮುಂಬೈ ಆರಂಭದ ಎರಡು ಪಂದ್ಯಗಳಲ್ಲಿ ಸೋತ ಬಳಿಕ ಹ್ಯಾಟ್ರಿಕ್ ಗೆಲುವು ಸಾಧಿಸಿತ್ತು. ಬಳಿಕ ಪನಃ ಎರಡು ಪಂದ್ಯಗಳಲ್ಲಿ ಸೋತಿದೆ. ತಂಡದ ಪರ ಯಾರೂ ಕನ್​ಸಿಸ್ಟೆನ್ಸಿ ತೋರುತ್ತಿಲ್ಲ. ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ಯಾಮ್ರೊನ್ ಗ್ರೀನ್ ಒಂದು ಪಂದ್ಯ ಆಡಿದರೆ ಮತ್ತೊಂದು ಪಂದ್ಯದಲ್ಲಿ ಬೇಗನೆ ಔಟಾಗುತ್ತಿದ್ದಾರೆ. ಇಶಾನ್ ಕಿಶನ್ ಫಾರ್ಮ್ ಕಳೆದುಕೊಂಡಿದ್ದಾರೆ. ಅರ್ಜುನ್ ತೆಂಡೂಲ್ಕರ್​ಗೆ ಇಂದಿನ ಪಂದ್ಯದಲ್ಲಿ ಸ್ಥಾನ ಸಿಗುತ್ತಾ ನೋಡಬೇಕಿದೆ. ಜೇಸನ್ ಬೆಹ್ರೆನ್​ಡಾರ್ಫ್, ರಿಲೆ ಮೆರೆಡಿತ್, ಹೃತಿಕ್ ಶೋಕೀನ್ ಮಾರಕವಾಗಬೇಕಿದೆ. ಪಿಯೂಷ್ ಚಾವ್ಲಾ ಮಾತ್ರ ಮುಂಬೈ ಬೌಲಿಂಗ್​ನಲ್ಲಿ ಎದುರಾಳಿಗೆ ಕಂಠಕವಾಗಿ ಪರಿಣಮಿಸಿದ್ದಾರೆ.

ಇತ್ತ ರಾಜಸ್ಥಾನ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿರುವ ಎಂಟು ಪಂದ್ಯಗಳ ಪೈಕಿ ಮೂರರಲ್ಲಿ ಮಾತ್ರ ಸೋತಿದೆ. ಉಳಿದ ಐದು ಪಂದ್ಯಗಳಲ್ಲಿ ಜಯ ಸಾಧಿಸಿದೆ. ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸುತ್ತಿರುವುದು ಪ್ಲಸ್ ಪಾಯಿಂಟ್. ದೇವದತ್ ಪಡಿಕ್ಕಲ್ ಫಾರ್ಮ್​ಗೆ ಬಂದಿದ್ದು ಹಿಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಅಬ್ಬರಿಸಿದ್ದರು. ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅಸ್ತ್ರ. ಧ್ರುವ್ ಜುರೆಲ್ ಕೂಡ ಭರವಸೆ ಮೂಡಿಸಿದ್ದಾರೆ. ಆರ್​ಆರ್​ ಸ್ಪಿನ್ನರ್​ಗಳಾದ ಚಹಲ್, ಅಶ್ವಿನ್ ಮತ್ತು ಝಂಪಾ ಎದುರಾಳಿಗೆ ಕಂಟಕವಾಗಿದ್ದಾರೆ. ಸಂದೀಪ್ ಶರ್ಮಾ, ಜೇಸನ್ ಹೋಲ್ಡನ್, ಕುಲ್ದೀಪ್ ವೇಗಿಗಳಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:05 am, Sun, 30 April 23