
ಐಪಿಎಲ್ 2026 (IPL 2026) ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (MI vs CSK) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ (Mukesh Choudhary) ಅವರ ತಾಯಿ ನಿಧನರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಖೇಶ್ ಚೌಧರಿ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದೆ.
ಮುಖೇಶ್ ಚೌಧರಿ ಅವರ ತಾಯಿಯ ನಿಧನದಿಂದ ತೀವ್ರ ದುಃಖಿತರಾಗಿದ್ದೇವೆ ಈ ಕಷ್ಟದ ಸಮಯದಲ್ಲಿ ದುಃಖವನ್ನು ಬರಿಸುವ ಶಕ್ತಿಯನ್ನು ಮುಖೇಶ್ ಕುಮಾರ್ ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲು ಬರೆದುಕೊಂಡಿದೆ.
The CSK family mourns the passing of Mukesh Choudhary’s mother.
We stand with Mukesh and his family, keeping them in our thoughts and prayers during this incredibly difficult time.
— Chennai Super Kings (@ChennaiIPL) April 23, 2026
2026 ರ ಐಪಿಎಲ್‌ನಲ್ಲಿ ಮುಖೇಶ್ ಚೌಧರಿ ಇಲ್ಲಿಯವರೆಗೆ ಕೇವಲ ಒಂದು ಪಂದ್ಯವನ್ನು ಆಡಿದ್ದಾರೆ. ಏಪ್ರಿಲ್ 18 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಡಿದ್ದ ಅವರು 21 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಪಂದ್ಯದಲ್ಲಿ ಅವರು ಇಶಾನ್ ಕಿಶನ್ ಮತ್ತು ಟ್ರಾವಿಸ್ ಹೆಡ್ ಅವರ ವಿಕೆಟ್‌ಗಳನ್ನು ಕಬಳಿಸಿದ್ದರು.
ಖಲೀಲ್ ಅಹ್ಮದ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್‌ಕೆಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮುಖೇಶ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿತ್ತು. ಗಾಯದ ಕಾರಣದಿಂದಾಗಿ ಖಲೀಲ್ ಅಹ್ಮದ್ ಐಪಿಎಲ್ 2026 ರಿಂದ ಹೊರಬಿದ್ದಿರುವುದರಿಂದ ಮುಖೇಶ್ ಚೌಧರಿಗೆ ಆಡುವ ಅವಕಾಶ ಸಿಕ್ಕಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:41 pm, Thu, 23 April 26