AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಬಾರಿ ಚೆನ್ನೈ ಸೂಪರ್ ಕಿವೀಸ್..!

CSK squad IPL 2024: ಈ ಬಾರಿಯ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿದ ಮೂರನೇ ವಿದೇಶಿ ಆಟಗಾರ ಮುಸ್ತಫಿಜುರ್ ರೆಹಮಾನ್. ಬಾಂಗ್ಲಾದೇಶ್ ತಂಡದ ಎಡಗೈ ವೇಗಿಯನ್ನು ಸಿಎಸ್​ಕೆ 2 ಕೋಟಿ ರೂ. ಮೂಲ ಬೆಲೆಗೆ ಖರೀದಿಸಿದೆ. ಹಾಗೆಯೇ ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು 4 ಕೋಟಿ ರೂ. ನೀಡಿ ಆಯ್ಕೆ ಮಾಡಿಕೊಂಡಿದೆ.

IPL 2024: ಈ ಬಾರಿ ಚೆನ್ನೈ ಸೂಪರ್ ಕಿವೀಸ್..!
CSK
TV9 Web
| Edited By: |

Updated on: Dec 20, 2023 | 11:13 AM

Share

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಸಿಎಸ್​ಕೆ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ವಿಶೇಷ ಎಂದರೆ ಈ ಆರು ಆಟಗಾರರಲ್ಲಿ ಇಬ್ಬರು ನ್ಯೂಝಿಲೆಂಡ್ ಕ್ರಿಕೆಟಿಗರು. ನ್ಯೂಝಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬಲಿಷ್ಠ ಬ್ಯಾಟರ್ ಡೇರಿಲ್ ಮಿಚೆಲ್ ಅವರನ್ನು ಬರೋಬ್ಬರಿ 14 ಕೋಟಿ ರೂ. ನೀಡಿ ಸಿಎಸ್​ಕೆ ಖರೀದಿಸಿದೆ. ಹಾಗೆಯೇ ಕಿವೀಸ್ ಪಡೆಯ ಯುವ ಆಲ್​ರೌಂಡರ್ ಆಟಗಾರ ರಚಿನ್ ರವೀಂದ್ರ ಅವರನ್ನು 1.8 ಕೋಟಿಗೆ ತಮ್ಮದಾಗಿಸಿಕೊಂಡಿದ್ದಾರೆ.

ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದಲ್ಲಿ ನಾಲ್ವರು ನ್ಯೂಝಿಲೆಂಡ್ ಆಟಗಾರರು ಸೇರ್ಪಡೆಯಾದಂತಾಗಿದೆ. ಇದಕ್ಕೂ ಮುನ್ನ ಸಿಎಸ್​ಕೆ ತಂಡವು ನ್ಯೂಝಿಲೆಂಡ್​ನ ಡೆವೊನ್ ಕಾನ್ವೆ ಹಾಗೂ ಮಿಚೆಲ್ ಸ್ಯಾಂಟ್ನರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ರಚಿನ್ ರವೀಂದ್ರ ಹಾಗೂ ಡೇರಿಲ್ ಮಿಚೆಲ್ ಆಯ್ಕೆಯಾಗಿದ್ದಾರೆ.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಪರ ನಾಲ್ವರು ಕಿವೀಸ್ ಆಟಗಾರರು ಜೊತೆಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಒಂದು ವೇಳೆ ಹೀಗಾದರೆ ಸಿಎಸ್​ಕೆ ಪಡೆಯು ಚೆನ್ನೈ ಸೂಪರ್ ಕಿವೀಸ್ ಆಗಿ ಗುರುತಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ.

ಇನ್ನು ಈ ಬಾರಿಯ ಹರಾಜಿನ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಖರೀದಿಸಿದ ಮೂರನೇ ವಿದೇಶಿ ಆಟಗಾರ ಮುಸ್ತಫಿಜುರ್ ರೆಹಮಾನ್. ಬಾಂಗ್ಲಾದೇಶ್ ತಂಡದ ಎಡಗೈ ವೇಗಿಯನ್ನು ಸಿಎಸ್​ಕೆ 2 ಕೋಟಿ ರೂ. ಮೂಲ ಬೆಲೆಗೆ ಖರೀದಿಸಿದೆ. ಹಾಗೆಯೇ ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು 4 ಕೋಟಿ ರೂ. ನೀಡಿ ಆಯ್ಕೆ ಮಾಡಿಕೊಂಡಿದೆ. ಇದಲ್ಲದೆ ಯುವ ಆಟಗಾರರಾದ ಸಮೀರ್ ರಿಝ್ವಿ ಅವಿನಾಶ್ ಕೂಡ ಸಿಎಸ್​ಕೆ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಅತ್ತ ಕಡೆ ಕಳೆದ ಬಾರಿಯ ಚಾಂಪಿಯನ್ ಪಡೆಯನ್ನು ಉಳಿಸಿಕೊಂಡಿದ್ದ ಸಿಎಸ್​ಕೆ ಫ್ರಾಂಚೈಸಿ ಇದೀಗ ಡೇರಿಲ್ ಮಿಚೆಲ್, ರಚಿನ್ ರವೀಂದ್ರ, ಮುಸ್ತಫಿಜುರ್ ರೆಹಮಾನ್​ನಂತಹ ಆಟಗಾರರನ್ನು ಖರೀದಿಸಿ ತನ್ನ ಬಳಗವನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡಿರುವುದು ವಿಶೇಷ.

ಚೆನ್ನೈ ಸೂಪರ್‌ಕಿಂಗ್ಸ್: ಎಂಎಸ್ ಧೋನಿ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್‌ವಾಡ್, ಅಜಿಂಕ್ಯ ರಹಾನೆ, ಶೇಖ್ ರಶೀದ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಶಿವಂ ದುಬೆ, ನಿಶಾಂತ್ ಸಿಂಧು, ಅಜಯ್ ಮಂಡಲ್, ರಾಜವರ್ಧನ್ ಹಂಗರ್ಗೇಕರ್, ದೀಪಕ್ ಚೋಹ್ಲನ್, ಮಹಿಶ್ ತೀಕ್ಷಣ, ಶೇಕ್ ರಶೀದ್, ಸಿಮರ್ಜಿತ್ ಸಿಂಗ್, ತುಷಾರ್ ದೇಶಪಾಂಡೆ, ಮತೀಶ ಪತಿರಾಣ.

ಇದನ್ನೂ ಓದಿ: IPL 2024: ಗುಜರಾತ್ ಟೈಟಾನ್ಸ್​ ಬೇಡವೇ ಬೇಡವೆಂದು ಕೈ ಬಿಟ್ಟ ಆಟಗಾರರಿಗೆ ಕೋಟಿ ಸುರಿದ RCB

ಸಿಎಸ್​ಕೆ ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ರಚಿನ್ ರವೀಂದ್ರ- 1.80 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಶಾರ್ದೂಲ್ ಠಾಕೂರ್- 4 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಡೇರಿಲ್ ಮಿಚೆಲ್- 14 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಸಮೀರ್ ರಿಝ್ವಿ- 8.40 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಮುಸ್ತಫಿಜುರ್ ರೆಹಮಾನ್- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಅವಿನಾಶ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ