Ambati Rayudu: ನಿವೃತ್ತಿ ಘೋಷಿಸಿ, ಮನಸ್ಸು ಬದಲಿಸಿದ ಅಂಬಾಟಿ ರಾಯುಡು..!

IPL 2022: ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಪರ ಆಡಿರುವ 36 ವರ್ಷದ ಅಂಬಾಟಿ ರಾಯುಡು 187 ಪಂದ್ಯಗಳಿಂದ ಒಟ್ಟು 4187 ರನ್ ಕಲೆಹಾಕಿದ್ದಾರೆ.

Ambati Rayudu: ನಿವೃತ್ತಿ ಘೋಷಿಸಿ, ಮನಸ್ಸು ಬದಲಿಸಿದ ಅಂಬಾಟಿ ರಾಯುಡು..!
Ambati Rayudu
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 14, 2022 | 2:29 PM

CSK ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು (Ambati Rayudu) ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಐಪಿಎಲ್ ನನ್ನ ಕೊನೆಯ ಟೂರ್ನಿಯಾಗಿದ್ದು, ಈ ಮೂಲಕ ನಾನು ಐಪಿಎಲ್​ಗೆ ಗುಡ್​ ಬೈ ಹೇಳುತ್ತಿದ್ದೇನೆ ಎಂದು ರಾಯುಡು ಟ್ವೀಟ್ ಮಾಡಿ ತಿಳಿಸಿದ್ದರು. ಆದರೆ ನಿವೃತ್ತಿ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡುವ ಮೂಲಕ ಅಂಬಾಟಿ ರಾಯುಡು ಅಚ್ಚರಿ ಮೂಡಿಸಿದ್ದಾರೆ. ಇತ್ತ ರಾಯುಡು ನಿವೃತ್ತಿ ಘೋಷಿಸಿರುವ ಸುದ್ದಿ ವೈರಲ್ ಆಗಿದ್ದು, ಇದಾಗ್ಯೂ ಆ ಬಳಿಕ ಸಿಎಸ್​ಕೆ ಆಟಗಾರ ಯಾವುದೇ ಸ್ಪಷ್ಟನೆ ನೀಡಿಲ್ಲ.

2013 ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಪದಾರ್ಪಣೆ ಮಾಡಿದ್ದ ರಾಯುಡು 55 ODI ಪಂದ್ಯಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕಗಳನ್ನು ಒಳಗೊಂಡಂತೆ 1694 ರನ್ ಕಲೆಹಾಕಿದ್ದಾರೆ. ಹಾಗೆಯೇ, 2016 ರಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ರಾಯುಡು 6 ಟಿ20 ಪಂದ್ಯಗಳಲ್ಲಿ 42 ರನ್ ಗಳಿಸಿದ್ದರು.

2019 ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಅಕಾಂಕ್ಷಿಯಾಗಿದ್ದ ರಾಯುಡುಗೆ ತಂಡದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಈ ಬಗ್ಗೆ ಆಯ್ಕೆಗಾರರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ರಾಯುಡು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರಣೆ ನಿವೃತ್ತಿ ನೀಡಿದ್ದರು. ಇದಾದ ಬಳಿಕ ಐಪಿಎಲ್​ನಲ್ಲಿ ಮುಂದುವರೆದಿದ್ದ ಹೈದರಾಬಾದ್​ನ ಆಟಗಾರ ಈ ಬಾರಿ ನಿರೀಕ್ಷಿತ ಆಟ ಪ್ರದರ್ಶಿಸಿರಲಿಲ್ಲ.

ಇದನ್ನೂ ಓದಿ
Image
MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಐಪಿಎಲ್ 2022 ರಲ್ಲಿ ಅಂಬಟಿ ರಾಯುಡು ಆಡಿರುವ 12 ಪಂದ್ಯಗಳಲ್ಲಿ 27.10 ಸರಾಸರಿಯಲ್ಲಿ 271 ರನ್ ಗಳಿಸಿದ್ದಾರೆ. ಇತ್ತ ಸಿಎಸ್​ಕೆ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದ್ದು, ಇದರ ಬೆನ್ನಲ್ಲೇ ಅಂಬಾಟಿ ರಾಯುಡು ಕೂಡ ಐಪಿಎಲ್​ಗೆ ಗುಡ್ ಬೈ ಹೇಳುವುದಾಗಿ ತಿಳಿಸಿದ್ದಾರೆ. ಆದರೆ ಆ ಬಳಿಕ ಟ್ವೀಟ್ ಅಳಿಸಿ ಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಪರ ಆಡಿರುವ 36 ವರ್ಷದ ಅಂಬಾಟಿ ರಾಯುಡು 187 ಪಂದ್ಯಗಳಿಂದ ಒಟ್ಟು 4187 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 22 ಅರ್ಧಶತಕಗಳು ಮೂಡಿಬಂದಿವೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ