IPL 2022: CSK ತಂಡದಿಂದ ಸ್ಟಾರ್ ಆಟಗಾರ ಔಟ್: ಯುವ ಆಟಗಾರನಿಗೆ ಮಣೆ

| Updated By: ಝಾಹಿರ್ ಯೂಸುಫ್

Updated on: Nov 24, 2021 | 10:51 PM

IPL 2022 CSK: ಐಪಿಎಲ್​ನಲ್ಲಿ 205 ಪಂದ್ಯಗಳನ್ನಾಡಿರುವ ರೈನಾ 5528 ರನ್​ ಕಲೆಹಾಕಿದ್ದಾರೆ. ಇದರಲ್ಲಿ 1 ಶತಕ ಹಾಗೂ 39 ಅರ್ಧಶತಕಗಳು ಸೇರಿವೆ. ಆದರೆ ಕಳೆದ ಸೀಸನ್​ ಐಪಿಎಲ್​ನಲ್ಲಿ ರೈನಾ ಫಾರ್ಮ್​ನಲ್ಲಿರಲಿಲ್ಲ.

IPL 2022: CSK ತಂಡದಿಂದ ಸ್ಟಾರ್ ಆಟಗಾರ ಔಟ್: ಯುವ ಆಟಗಾರನಿಗೆ ಮಣೆ
CSK
Follow us on

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಗಾಗಿ ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ ಪ್ರಸ್ತುತ ಇರುವ 8 ಫ್ರಾಂಚೈಸಿಗಳು ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆ ನೀಡಲಾಗಿದೆ. ಅದರಂತೆ ಎಲ್ಲಾ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು. ಆದರೆ ಇತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಉಳಿಸಿಕೊಳ್ಳಲಿರುವ ಪ್ರಮುಖ ಆಟಗಾರರ ಪಟ್ಟಿಯಲ್ಲಿ ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ ಅವರ ಹೆಸರಿಲ್ಲ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಸಿಎಸ್​ಕೆ ಮೂಲಗಳ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್​ ಸುರೇಶ್ ರೈನಾ ಅವರನ್ನು ಬಿಡುಗಡೆ ಮಾಡಲಿದೆ. ಬದಲಾಗಿ ಇಬ್ಬರು ಆರಂಭಿಕರನ್ನೇ ಉಳಿಸಿಕೊಳ್ಳಲಿದೆ.

ಅಂದರೆ ಇಲ್ಲಿ ಸಿಎಸ್​ಕೆ ತಂಡವು ಸುರೇಶ್ ರೈನಾ ಅವರನ್ನು ಬಿಡುಗಡೆಗೊಳಿಸಿ ಅವರ ಸ್ಥಾನದಲ್ಲಿ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಇನ್ನು ಮತ್ತೋರ್ವ ಆರಂಭಿಕ ಆಟಗಾರನಾಗಿ ವಿದೇಶಿ ಆಟಗಾರನ ಕೋಟಾದಲ್ಲಿ ಫಾಫ್ ಡುಪ್ಲೆಸಿಸ್​ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಅದೇ ರೀತಿ ಸಿಎಸ್​ಕೆ ತಂಡವು ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಅವರ ಹೆಸರು ಕೂಡ ಮುಂಚೂಣಿಯಲ್ಲಿದೆ. ಹೀಗಾಗಿ ಜಡ್ಡು ಕೂಡ ತಂಡದಲ್ಲೇ ಉಳಿಯಲಿದ್ದಾರೆ. ಇನ್ನು ಮಹೇಂದ್ರ ಸಿಂಗ್ ಧೋನಿ ಬಯಸಿದರೆ ಸಿಎಸ್​ಕೆ ತಂಡವು ಅವರನ್ನು ಉಳಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಏಕೆಂದರೆ ಇತ್ತೀಚೆಗೆ ಮಾತನಾಡಿದ್ದ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಮಹೇಂದ್ರ ಸಿಂಗ್ ಧೋನಿ ತಂಡದಿಂದ ರಿಟೈನ್ ಆಗಲು ಬಯಸುತ್ತಿಲ್ಲ ಎಂದು ತಿಳಿಸಿದ್ದರು. ಅವರನ್ನು ಉಳಿಸಿಕೊಂಡರೆ ತಂಡವು ದೊಡ್ಡ ಪಾವತಿಸಬೇಕಾಗುತ್ತದೆ. ಹೀಗಾಗಿ ಅವರ ಸ್ಥಾನದಲ್ಲಿ ಉತ್ತಮ ಆಟಗಾರರನ್ನು ಉಳಿಸಿಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿಸಿದ್ದರು. ಇದಾಗ್ಯೂ ಸಿಎಸ್​ಕೆ ಧೋನಿಯನ್ನು ಮನವೊಲಿಸಿದರೆ ಅವರು ತಂಡದಲ್ಲಿ ರಿಟೈನ್ ಆಗಲಿದ್ದಾರೆ. ಇಲ್ಲದಿದ್ದರೆ ಹರಾಜಿನಲ್ಲಿ ಕಾಣಿಸಿಕೊಂಡು ಮತ್ತೆ ಸಿಎಸ್​ಕೆ ತಂಡಕ್ಕೆ ಹಿಂತಿರುಗಲಿದ್ದಾರೆ.

ಒಟ್ಟಿನಲ್ಲಿ ಮಿಸ್ಟರ್ ಐಪಿಎಲ್ ಎಂದೇ ಖ್ಯಾತರಾಗಿರುವ ಸುರೇಶ್ ರೈನಾ ಸಿಎಸ್​ಕೆ ತಂಡದಿಂದ ಹೊರಬೀಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಇದುವರೆಗೆ ಐಪಿಎಲ್​ನಲ್ಲಿ 205 ಪಂದ್ಯಗಳನ್ನಾಡಿರುವ ರೈನಾ 5528 ರನ್​ ಕಲೆಹಾಕಿದ್ದಾರೆ. ಇದರಲ್ಲಿ 1 ಶತಕ ಹಾಗೂ 39 ಅರ್ಧಶತಕಗಳು ಸೇರಿವೆ. ಆದರೆ ಕಳೆದ ಸೀಸನ್​ ಐಪಿಎಲ್​ನಲ್ಲಿ ರೈನಾ ಫಾರ್ಮ್​ನಲ್ಲಿರಲಿಲ್ಲ. ಹೀಗಾಗಿ ಅವರನ್ನು ಕೆಲ ಪಂದ್ಯಗಳಿಂದ ಹೊರಗಿಡಲಾಗಿತ್ತು. ಇದಾಗ್ಯೂ ಮುಂದಿನ ಸೀಸನ್​ ವೇಳೆಗೆ ರೈನಾ ಕಂಬ್ಯಾಕ್ ಮಾಡುವ ಸಾಧ್ಯತೆಯಿದ್ದು, ಹೀಗಾಗಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೂ ಕೆಲ ಫ್ರಾಂಚೈಸಿಗಳು ರೈನಾ ಅವರ ಖರೀದಿಗೆ ಮುಂದಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಇದನ್ನೂ ಓದಿ: ಟಿ20 ಕ್ರಿಕೆಟ್​ಗೆ ಮತ್ತೊಂದು ಲೀಗ್: ಹೊಸ ತಂಡ ಖರೀದಿಸಿದ ಮುಂಬೈ ಇಂಡಿಯನ್ಸ್​

ಇದನ್ನೂ ಓದಿ: ಹಲಾಲ್ ಮಾಂಸ ಅಥವಾ ಹಲಾಲ್ ಕಟ್ ಎಂದರೇನು?

ಇದನ್ನೂ ಓದಿ: IPL 2022: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ​ ಜೆರ್ಸಿ ಫೋಟೋ ವೈರಲ್

(csk to release suresh raina ahead of ipl 2022)